
ದೊಡ್ಡಬಳ್ಳಾಪುರ : ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಾಲೂಕು ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ
ಈ ವೇಳೆ ಜಿಲ್ಲಾ ಕಂದಾಯ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಮಾತನಾಡಿ, ಈ ಹಿಂದೆ ಧರಣಿ ನಡೆಸಿದಾಗ ಗ್ರಾಮ ಆಡಳಿತ. ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸು ವುದಾಗಿ ಸರಕಾರ ಭರವಸೆ ನೀಡಿತ್ತು. ಆದರೆ ಈವರೆಗೆ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬದಲಿಗೆ ಕೆಲಸದ ಒತ್ತಡ ಹೆಚ್ಚಿಸಲಾಗಿದೆ ಎಂದು ಆರೋಪಿಸಿದರು.ದಿನದಿಂದ ದಿನಕ್ಕೆ ಕೆಲಸದ ಒತ್ತಡಕ್ಕೆ ಸಿಲುಕುವಂತಾಗಿದೆ. ಮೂಲಸೌಕರ್ಯ ಇಲ್ಲದೆ ಸಮಸ್ಯೆಗಳ ಸುಳಿಯಲ್ಲಿ ಕೆಲಸ ಮಾಡಬೇಕಿದೆ ಎಂದರು
ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿ, ಸಂಘದ ಅಧ್ಯಕ್ಷ ಶ್ರೀಮಂತ ಅಸಂಗ್ಯಾಳ ಮಾತನಾಡಿ, ಇ ಫವತಿ ಖಾತಾ ಕೈಬಿಡಬೇಕು. ಸುಸಜ್ಜಿತ ಕಚೇರಿ, ಲ್ಯಾಪ್ ಟಾಪ್, ಇಂಟರ್ವೆಟ್, ಪ್ರಿಂಟರ್, ಸ್ಕ್ಯಾನರ್ ಸೇರಿದಂತೆ ಮೂಲಸೌಕರ್ಯ ಎಂದು ನೀಡಬೇಕು. ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ನೀಡಬೇಕು. ಮೃತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು. ವರ್ಷಪೂರ್ತಿ ಕೆಲಸ ಮಾಡುವ ಆಡಳಿತ ಅಧಿಕಾರಿಗಳಿಗೆ ಒಂದು ತಿಂಗಳ ವೇತನ ಹೆಚ್ಚುವರಿಯಾಗಿ ನೀಡಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.
ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿ ಕಾರಿಗಳು ತಹಸೀಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರಿಗೆ ಮನವಿ ಸಲ್ಲಿಸಿದರು.ಮನವಿ ಸ್ವೀಕರಿಸಿದ ತಹಸೀಲ್ದಾರ್ ವಿಭಾವಿದ್ಯಾ ರಾಠೋಡ್, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಮನವಿಯನ್ನ ಜಿಲ್ಲಾಧಿಕಾರಿಗಳಿಗೆ ರವಾನೆ ಮಾಡಿ ಖುದ್ದು ಸಮಸ್ಯೆ ತಿಳಿಸಲಾಗುವುದು ಎಂದರು.
ಈ ವೇಳೆ ಗ್ರಾಮ ಆಡಳಿತ ಅಧಿ ಕಾರಿಗಳ ಸಂಘದ ಉಪಾಧ್ಯಕ್ಷ ಕಿರಣ್, ಜಿಲ್ಲಾ ಕಂದಾಯ ನೌಕರರ ಸಂಘ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಲಮಾಣಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಧರಣಿ ಕುಮಾರ್, ಗೌರವ ಅಧ್ಯಕ್ಷೆ ಸಿ.ಎನ್.ಅಶ್ವತಮ್ಮ, ಪ್ರಧಾನ ಕಾರ್ಯದರ್ಶಿ ಗಂಗರಾಜು, ಗ್ರಾಮ ಆಡಳಿತಾಧಿಕಾರಿಗಳಾದ ಗುರುಪ್ರಸಾದ್, ಎಂ.ಎಸ್.ಆನಂದ್, ತಮ್ಮಣ್ಣಪ್ಪ ಕಸರೆಡ್ಡಿ. ಪಲ್ಲವಿ, ಚೈತ್ರಾ ಮತ್ತಿತ್ತರರು ಇದ್ದರು.