
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ದ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಸ್ವಾಮಿ ಬ್ರಹ್ಮರಥೋತ್ಸವ, ಸಕಲ ಸಿದ್ದತೆ ನಡೆದಿದೆ. ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.
ಮಧ್ಯಾಹ್ನ 12-12 ರಿಂದ 1:00 ರೊಳಗಿನ ಅಭಿಜಿನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ.
ರಥೋತ್ಸವದ ನಂತರ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ ಕಾರ್ಯಕ್ರಮಗಳಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ರಾತ್ರಿ 7 ಗಂಟೆಗೆ ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ, ಸಂಸದ ಸುಧಾಕರ್, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಶಾಮಪ್ಪ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.