
ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಅಭಿವೃದ್ಧಿ ವಿಚಾರವಾಗಿ ಸಂಸದರಾದ ಡಾ. ಕೆ ಸುಧಾಕರ್ ಅವರು ವಿಸ್ತೃತ ಚರ್ಚೆ ನಡೆಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಭಾಗಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ತುರ್ತು ಅಗತ್ಯವಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಮನವರಿಕೆ ಮಾಡಿಕೊಟ್ಟು, ಶೀಘ್ರ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದ್ದಾರೆ .
Ad
Ad
Ad
ಸನ್ಮಾನ್ಯ ಪ್ರಧಾನಿಗಳು ಈ ಕುರಿತು ಪ್ರತಿಕ್ರಿಯೆ ನೀಡಿ ಹಿಂದೆ ತಾವು ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಮಳೆ ನೀರಿನ ಸಂರಕ್ಷಣೆ ಹಾಗು ಅಂತರ್ಜಲ ಮರುಪೂರಣ ಮಾಡುವ ನಿಟ್ಟಿನಲ್ಲಿ ಜನಸಾಮಾನ್ಯರ ಪಾಲ್ಗೊಳ್ಳುವಿಕೆಯೊಂದಿಗೆ ಕೈಗೊಂಡ ಯೋಜನೆಗಳು ಹಾಗೂ ಉಪಕ್ರಮಗಳು ಬಗ್ಗೆ ವಿವರಿಸಿ, ಮಳೆಯಾಶ್ರಿತ ಪ್ರದೇಶವಾಗಿರುವ ಕರ್ನಾಟಕದ ಬಯಲುಸೀಮೆ ಜಿಲ್ಲಗಳಲ್ಲಿಯೂ ಸಹ ಇದೇ ಮಾದರಿಯನ್ನು ಅನುಸರಿಸುವಂತೆ ಸಂಸದರಿಗೆ ಸಲಹೆ ನೀಡಿದ್ದಾರೆ.