
ಬೆಂಗಳೂರಿನಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾವನ್ನು (E-khata) ಕಡ್ಡಾಯಗೊಳಿಸಲಾಗಿದ್ದು,ಜನರಿಗೆ ಇ-ಖಾತಾ ತ್ವರಿತವಾಗಿ ಒದಗಿಸುವ ನಿಟ್ಟಿನಲ್ಲಿ ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಂಡಿದೆ.
ಇ-ಖಾತಾ ಪಡೆಯಲು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅವಕಾಶ ನೀಡಲಾಗಿದೆ. ಆದರೂ ಕೆಲ ಸಮಸ್ಯೆಗಳಿಂದ ಇ-ಖಾತಾ ಪಡೆಯಲು ಸಾಧ್ಯವಾಗುತ್ತಿಲ್ಲ.
ಈ ನಡುವೆ ಬಿಬಿಎಂಪಿ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಶುಭ ಸುದ್ದಿ ನೀಡಿದ್ದಾರೆ, ಹೌದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು (ಅರ್ಜಿದಾರರು) ತಮ್ಮ ಮಾಹಿತಿಯನ್ನು ಬಿಬಿಎಂಪಿಯ ಅಧಿಕೃತ ವೆಬ್ಸೈಟ್ bbmpeaasthi.karnataka.gov.in ನಲ್ಲಿ ಸಲ್ಲಿಸುವ ಮೂಲಕ ಅರ್ಜಿ ಸಲ್ಲಿಸಿದ ಎರಡು ದಿನಗಳಲ್ಲಿ ತಮ್ಮ ಅಂತಿಮ ಇ-ಖಾತಾವನ್ನು ಪಡೆಯಬಹುದು ಎಂದಿದ್ದಾರೆ.
ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿಗಳು (ಎಆರ್ಒ) ಮತ್ತು ಕೇಸ್ ವರ್ಕರ್ಗಳು ನಿಗದಿತ ಸಮಯದೊಳಗೆ ಅರ್ಜಿಗಳನ್ನು ಪರಿಶೀಲಿಸಿ ಸೂಕ್ತಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.