
ದೊಡ್ಡಬಳ್ಳಾಪುರ : ವಿಶ್ವಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ಏ.11ರಿಂದ ಮೂರು ದಿನಗಳ ಕಾಲ ಆಯೋಜನೆ ಮಾಡಲಾಗಿದ್ದು,ಇಂದು ಭಾನುವಾರ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಶೋಭಾಯಾತ್ರೆಯಲ್ಲಿ ಶ್ರೀರಾಮ, ಶಿವ, ಆಂಜನೇಯ,ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಭುವನೇಶ್ವರಿ, ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗಳ ಮೆರವಣಿಗೆ ಆಕರ್ಷಣೀಯವಾಗಿತ್ತು .
ಬೃಹತ್ ಶೋಭ ಯಾತ್ರೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿದ್ದು, ವಿವಿಧ ಪ್ರಕಾರಗಳ ಕಲೆ ಮತ್ತು ನೃತ್ಯದ ಮೂಲಕ ಮನೋರಂಜನೆ ನೀಡಿದವು
ಶ್ರೀರಾಮ ಹಾಗೂ ವಾರಾಹಿ ಚಿತ್ರವುಳ್ಳ ಕೇಸರಿ ಧ್ವಜ ಹಿಡಿದು ‘ಜೈಶ್ರೀರಾಮ್’ ಘೋಷಣೆಯೊಂದಿಗೆ ಸಾವಿರಾರು ಹಿಂದೂಗಳು ಸಂಭ್ರಮಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಯಾತ್ರೆ ಸಾಗಿದ್ದು ರಸ್ತೆಯ ಎರಡೂ ಬದಿಯಲ್ಲೂ ಜನರು ಸಾಲುಗಟ್ಟಿ ನಿಂತು ಮೆರವಣಿಗೆ ವೀಕ್ಷಣೆ ಮಾಡಿದರು.
ಶೋಭಾ ಯಾತ್ರೆಯಲ್ಲಿ ಸಾವಿರಾರು ಹಿಂದೂಗಳು ಶ್ರೀರಾಮನ ಘೋಷಣೆಯೊಂದಿಗೆ ಡಿ ಜೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು, ನಂತರ ಕಾಸರಗೂಡಿನ ಕುಂಟಾರು ರವೀಶ್ ತಂತ್ರಿ ಅವರಿಂದ ದಿಕ್ಸೂಚಿ ಭಾಷಣ ವಿಶೇಷವಾಗಿದ್ದು ಸಂಜೆ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ಕಾರ್ಯಕ್ರಮಗಳು ವಿಶೇಷ ಆಕರ್ಷಣೆಯಾಗಿದ್ದವು .
ಶೋಭಾಯಾತ್ರೆ ಸಂದರ್ಭದಲ್ಲಿ ಯಾವುದೇ ಗಲಾಟೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ನಾಗರಾಜ್, ಡಿವೈಎಸ್ಪಿ ರವಿ, ನಗರ ಪೊಲೀಸ್ ಠಾಣೆ ಇನ್ಸೆಕ್ಟರ್ ಅಮರೇಶಗೌಡ, ಗ್ರಾಮಾಂತರ ಪೊಲೀಸ್ ಠಾಣೆಯ ಸಾಧಿಕ್ ಪಾಷಾ, ಮಹಿಳಾ ಪೊಲೀಸ್ ಠಾಣೆಯ ಎಂ.ಬಿ.ನವೀನ್ ಕುಮಾರ್, ಹೊಸಹಳ್ಳಿ ಪೊಲೀಸ್ ಠಾಣೆ ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.