ದೊಡ್ಡಬಳ್ಳಾಪುರ : ಮೇ 25 ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಆಕಾಂಕ್ಷಿಯಾಗಿ ಬಿ ಸಿ ಆನಂದ್ ಕುಮಾರ್ ನಾಳೆ ನಾಮಪತ್ರ ಸಲ್ಲಿಸಲು ಸಕಲ ಸಿದ್ಧತೆ ನಡೆಸಿದ್ದು , ತಾಲೂಕಿನ ಎಲ್ಲಾ ಡೈರಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು ನಾಳೆ ಮೇ 16ರಂದು ಬೆಳಗ್ಗೆ 9 ಗಂಟೆಗೆ ದೊಡ್ಡಬಳ್ಳಾಪುರ ಶಿಬಿರ ಕಚೇರಿಯಿಂದ ಹೊರಟು ಮಧ್ಯಾಹ್ನ ಸುಮಾರು 12 ಗಂಟೆಗೆ ನಾಮಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ, ಈ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ತಾಲೂಕಿನ ಜನಪ್ರಿಯ ಶಾಸಕರಾದ ಧೀರಜ್ ಮುನಿರಾಜು , ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಿ. ಮುನೇಗೌಡರನ್ನು ಒಳಗೊಂಡಂತೆ ಹಲವು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು , ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕ ವಾದ್ದರಿಂದ ನಾಳೆ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಮಕ್ಷಮದಲ್ಲಿ ತಾಲೂಕಿನ ಶಾಸಕರು ಹಾಗೂ ಎನ್ಡಿಎ ಮುಖಂಡರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದರು.
ಮಾನ್ಯ ಸಂಸದರಾದ ಡಾ. ಕೆ ಸುಧಾಕರ್ , ತಾಲೂಕಿನ ಶಾಸಕರಾದ ಧೀರಜ್ ಮುನಿರಾಜು ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಿ ಮುನೇಗೌಡ ರವರ ನೇತೃತ್ವದಲ್ಲಿ ಬಮೂಲ್ ಚುನಾವಣೆಗೆ ಏನ್ ಡಿ ಎ ಅಭ್ಯರ್ಥಿ ಆಯ್ಕೆಯನ್ನು ಶೀಘ್ರವಾಗಿ ಮಾಡುವ ನಿರೀಕ್ಷೆ ಇದೆ , ನಾನು ಪ್ರಬಲ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದರು .

ನಾಳೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಡೈರಿ ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ವರ್ಗ ಸಿರಿದಂತೆ ಹಿತೈಷಿಗಳು ಭಾಗವಹಿಸಿ ಆಶೀರ್ವದಿಸುವಂತೆ ಮನವಿ ಮಾಡಿದರು.
