
ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ದೊಡ್ಡಬಳ್ಳಾಪುರ ನಿಸರ್ಗ ಯೋಗ ಕೇಂದ್ರದ ಎ.ನಟರಾಜ್ರನ್ನು ಆಯ್ಕೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದ ರಾಜ್ಯ ಯೋಗ ಚಾಂಪಿಯನ್ಷಿಪ್ ವೇಳೆ ನಟರಾಜ್ ಅವರನ್ನು ಸನ್ಮಾನಿಸಲಾಯಿತು.
ಕಳೆದ 3 ದಶಕಗಳಿಂದ ಯೋಗಾಸನ ತರಬೇತಿ, ಯೋಗ ಸ್ಪರ್ಧೆ ಆಯೋಜನೆ, ಯೋಗ ಕ್ರೀಡೆಯ ಉತ್ತೇಜನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ನಗರ ದಲ್ಲಿ ಯೋಗ ಕ್ರೀಡೆಯ ಅಭ್ಯುದಯಕ್ಕೆ ಶ್ರಮಿಸಿದ್ದ ನಟರಾಜ್ ರವರನ್ನು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದೆ.