
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಜುಲೈ 1 ರಿಂದ ತರಬೇತಿಯು ಪ್ರಾರಂಭವಾಗಲಿದೆ.
ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ,ಬೆಂಗಳೂರು ದಕ್ಷಿಣ (ರಾಮನಗರ),ತುಮಕೂರು,ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಸೇರಿರುವ ಪಿಯುಸಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಜೂನ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ 500 ರೂ. (ಐದು ನೂರು ರೂ.) ಗಳ ಶಿಷ್ಯ ವೇತನ ನೀಡಲಾಗುವುದು.ಈ ತರಬೇತಿಯು ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಪೂರಕವಾಗಲಿದೆ.ಸಹಕಾರ ಸಂಸ್ಥೆಗಳ ನೇಮಕಾತಿಗಳಲ್ಲಿ ಆದ್ಯತೆ ದೊರೆಯಲಿದೆ.
ಆಸಕ್ತ ಅಭ್ಯರ್ಥಿಗಳು ಕೆಐಸಿಎಂ ನಂ 1/3 , 2 ನೇ ಮಹಡಿ ,3 ನೇ ಮುಖ್ಯ ರಸ್ತೆ ,ಚಾಮರಾಜಪೇಟೆ ಬೆಂಗಳೂರು -18 ಇಲ್ಲಿಗೆ ಭೇಟಿ ನೀಡಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ 080-355414407,9449007661 ,8105681745 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.