
ದೊಡ್ಡಬಳ್ಳಾಪುರ : ತಾಲೂಕಿನ ಕೊಡಿಗೇಹಳ್ಳಿ ವಲಯದ ಅರಳು ಮಲ್ಲಿಗೆ ಕಾರ್ಯಕ್ಷೇತ್ರದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ತಾಲೂಕಿನ ಯೋಜನಾಧಿಕಾರಿಯವರಾದ ದಿನೇಶ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು .
ದೃಷ್ಟಿ ಐ ಕೇರ್ ಆಸ್ಪತ್ರೆಯ ಸಹಯೋಗದಲ್ಲಿ ಬಿ.ಪಿ ಶುಗರ್ ಹಾಗೂ ಕಣ್ಣಿನ ತಪಾಸಣೆ ಮಾಡಿಸಲಾಯಿತು ಈ ಸಂದರ್ಭದಲ್ಲಿ ಸ್ವಚ್ಛತೆ ಹಾಗೂ ಅರೋಗ್ಯ ಕಾಪಾಡುವಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರಾದ ಪಾರ್ವತಮ್ಮ,ದೃಷ್ಟಿ ಆಸ್ಪತ್ರೆಯ ನೇತ್ರಾಧಿಕಾರಿ ನಾಯ್ಡು , ವಲಯದ ಮೇಲ್ವಿಚಾರಕರಾದ ಸವಿತ ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಛಾಯಾ ಕುಮಾರಿ ಹಾಗೂ ಸೇವಾಪ್ರತಿನಿಧಿ ವಿಶಾಲಾಕ್ಷಿ ಸೇರಿದಂತೆ ಹಲವರು ಹಾಜರಿದ್ದರು.