
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ ದೇವನಹಳ್ಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ವತಿಯಿಂದ ಆಗಸ್ಟ್ 01(ಶುಕ್ರವಾರ) ರಂದು ಬೆಳಗ್ಗೆ 11 ಗಂಟೆಗೆ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ “ವ್ಯಸನ ಮುಕ್ತ ದಿನಾಚರಣೆ” ಕಾರ್ಯಕ್ರಮವನ್ನು ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ.ಬಾಬಾ, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಎಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬೈಲಾಂಜನಪ್ಪ ಸೇರಿದಂತೆ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಯಶೋಧ ಎಂ.ವಿ, ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರಾದ ಬಿರಾದಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಸಿಬ್ಬಂದಿ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ವಿಚಾರ ಸಂಕಿರಣ ಇರಲಿದೆ.