ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದರು
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರವು ಕ್ರೀಡಾ ಯೋಜನೆಗಳನ್ನು ರೂಪಿಸಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿವೆ. ಕ್ರೀಡೆಯಲ್ಲಿ ಸೋಲು ಗೆಲುವು ಏನದೇ ಆಸಕ್ತಿ ಯಿಂದ ಭಾಗವಹಿಸುವುದು ಮುಖ್ಯ ಹಾಗಾಗಿ ಕ್ರೀಡಾ ಮನೋಭಾವನೆಯಿಂದ ಆಟವಾಡಿ ಪ್ರತಿಭಾವಂತ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ನಡೆಯುವ ದಸರಾ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿ ಜಿಲ್ಲೆ ಹಾಗೂ ತಾಲ್ಲೂಕಿಗೆ ಉತ್ತಮ ಹೆಸರು ತರಬೇಕು ಎಂದರು.
ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಅವರು ಮಾತಾನಾಡಿ ಮಕ್ಕಳ ಪ್ರತಿಭೆ ಗುರುತಿಸಲು ಕ್ರೀಡಾಕೂಟಗಳು ಸಹಕಾರಿಯಾಗಿದ್ದು, ಕ್ರೀಡಾಕೂಟದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ವಿಜೇತರಾದವರು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲೂ ಗೆದ್ದು ಜಿಲ್ಲೆಗೆ ಕೀರ್ತಿ ತರಬೇಕು ಎಂದರು.

ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣವನ್ನು ಅಭಿವೃದ್ಢಿ ಕುರಿತು ಸಚಿವರಲ್ಲಿ ಮನವಿ
ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ಜಾಗದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲು ಹಣ ಬಿಡುಗಡೆಯಾಗಿದ್ದು ಕೂಡಲೇ ಕ್ರೀಡಾಂಗಣದ ಗುದ್ದಲಿ ಪೂಜೆ ನೆರವೇರಲಿದೆ ಎಂದರು. ಮತ್ತು ತಾಲ್ಲೂಕಿನ ಹೃದಯ ಭಾಗದಲ್ಲಿರು ಭಗತ್ ಸಿಂಗ್ ಕ್ರೀಡಾಂಗಣದ ಮತ್ತಷ್ಟು ಅಭಿವೃದ್ಢಿ ಪಡಿಸುವಂತೆ ಸಚಿವರಿಗೆ ತಿಳಿಸಿದರು.

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರು ಸುಮಿತ್ರ ಆನಂದ್, ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್ ವಿ ಮಹೇಶ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರವಿ ಸಿದ್ದಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಟಿ.ಜಯಲಕ್ಷ್ಮೀ, ಹಾಗೂ ಸದಸ್ಯರುಗಳು, ತಿರ್ಪುಗಾರರು, ಶಿಕ್ಷಕರು ಮತ್ತು ಕ್ರೀಡಾಪಟುಗಳು ಉಪಸ್ಥಿತರಿದ್ದರು.
