ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಮುರುಳಿ ಮೋಹನ್ ರವರ ತಾಯಿ ಲಕ್ಷ್ಮಮ್ಮ (80ವರ್ಷ ) ಸೋಮವಾರ ನಿಧನರಾಗಿದ್ದಾರೆ
ಮೃತರು ಮುರುಳಿ ಮೋಹನ ಸೇರಿದಂತೆ ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ನೇತ್ರಗಳನ್ನು ಅಭಿಷೇಕ್ ನೇತ್ರಾಲಯಕ್ಕೆ ದಾನ ಮಾಡಲಾಗಿದ್ದು ದಿನಾಂಕ 30/9/2025 (ಇಂದು )ಮಂಗಳವಾರ ಬೆಳಿಗ್ಗೆ 10ಗಂಟೆಗೆ ಮುಕ್ತಿ ದಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಹಲವರು ಮೃತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
