
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಶತಮಾನೋತ್ಸದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ₹100 ಮುಖಬೆಲೆಯ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.
ದೆಹಲಿಯ ಡಾ. ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆಮುದ್ರಿಸಲಾಗಿದೆ. ಇದು ಬಹಳ ಹೆಮ್ಮೆ ಮತ್ತು ಐತಿಹಾಸಿಕ ಮಹತ್ವವನ್ನು ಸೂಚಿಸುತ್ತದೆ’ ಎಂದು ಹೇಳಿದ್ದಾರೆ.
ನಾಣ್ಯದ ವಿಶೇಷತೆ ಏನು…??? ಒಂದಿಷ್ಟು ಮಾಹಿತಿ
₹100 ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವನ್ನು ಮತ್ತು ಇನ್ನೊಂದು ಬದಿಯಲ್ಲಿ ‘ವರದ ಮುದ್ರೆ’ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ.ನಾಣ್ಯದ ಮೇಲೆ ಆರ್ಎಸ್ಎಸ್ ಧೈಯ ವಾಕ್ಯವನ್ನು ಸಹ ಮುದ್ರಿಸಲಾಗಿದ್ದು, ‘ಎಲ್ಲವೂ ರಾಷ್ಟ್ರಕ್ಕೆ ಸಮರ್ಪಿತವಾಗಿದೆ. ಎಲ್ಲವೂ ರಾಷ್ಟ್ರದ್ದು, ಯಾವುದೂ ನನ್ನದಲ್ಲ..’ ಎಂಬುದು ಇದರ ಅರ್ಥ.