
ದೊಡ್ಡಬಳ್ಳಾಪುರ : ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಆಕಸ್ಮಿಕವಾಗಿ ಅವಘಡಗಳು ಸಂಭವಿಸಿದರೆ ಸೂಕ್ತ ಚಿಕಿತ್ಸೆ ಕುರಿತು ಮಾರ್ಗದರ್ಶನ ಪಡೆಯಲು 7619126501 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ದೊಡ್ಡಬಳ್ಳಾಪುರದ ಸಮಸ್ತ ನಾಗರೀಕರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿರುವ ಆರೋಗ್ಯ ಇಲಾಖೆ ಸಾರ್ವಜನಿಕರ ಸೇವೆಗೆ ನೂತನ ವಿಧಾನ ಪರಿಚಯಿಸಿದೆ.
ಹೌದು ಮಕ್ಕಳು ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಹಚ್ಚುವುದು, ದೀಪ ಬೆಳಗುವ ಸಂದರ್ಭಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಪೋಷಕರು ಎಚ್ಚರವಹಿಸಬೇಕಿದೆ ಆದರೆ ಆಕಸ್ಮಿಕವಾಗಿ ಅವಘಡಗಳು ಸಂಭವಿಸಿದರೆ ಗಾಬರಿಗೆ ಒಳಗಾಗದೆ ತುರ್ತುಪರಿಸ್ಥಿತಿಯಲ್ಲಿ ಸೂಕ್ತ ಚಿಕಿತ್ಸೆ ಸೇವಾಲಬ್ಯತೆಯ ಬಗ್ಗೆ ಮಾರ್ಗದರ್ಶನ ಪಡೆಯಲು 7619126501 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ
ಸೇವೆ ನೀಡಲು ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿಗಳ ತಂಡ ಸಿದ್ದವಿರುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ.