ಬೆಂಗಳೂರು ನಗರದ ಕೆ.ಎಲ್.ಇ. ಎಸ್. ನಿಜಲಿಂಗಪ್ಪ ಕಾಲೇಜಿನಲ್ಲಿ ಮುಖ್ಯ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜುನಾಥ ಜಿ. ಅವರಿಗೆ ತುಮಕೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಿಂದ ಪಿಎಚ್ಡಿ ಪದವಿ ಪ್ರದಾನ ಮಾಡಲಾಗಿದೆ.
ತುಮಕೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಬಿ.ಟಿ. ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ “ದಕ್ಷಿಣ ಭಾರತೀಯ ವಿಶ್ವವಿದ್ಯಾಲಯಗಳ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಲ್ಲಿನ ಸಾಕ್ಷರತೆಯ ಸಾಮರ್ಥ್ಯ ” (ICT Literacy Competencies among Postgraduate Students of Library and Information Science in South Indian Universities: A Study) ಎಂಬ ವಿಷಯದ ಮಹಾಪ್ರಬಂಧಕ್ಕಾಗಿ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದೆ.
ಮಂಜುನಾಥ ಜಿ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಾಲವ್ವನಹಳ್ಳಿ ಗ್ರಾಮದವರಾಗಿದ್ದು , ಪ್ರಸ್ತುತ ಕೆ.ಎಲ್.ಇ. ಎಸ್. ನಿಜಲಿಂಗಪ್ಪ ಕಾಲೇಜಿನಲ್ಲಿ ಮುಖ್ಯ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
