ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಮಟ್ಟದ ೭೦ ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ 2025-26ನೇ ಸಾಲಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲು ಆಯ್ಕೆಯಾದ ಗಣ್ಯರ ಪ್ರಕಟಿಸಿದೆ.
ಹೌದು ಶಿಕ್ಷಣ ಕ್ಷೇತ್ರದಿಂದ ಬಿ ಸಿ ಶ್ರೀನಿವಾಸಯ್ಯ,ಕನ್ನಡ ಪರ ಸೇವೆ ಕ್ಷೇತ್ರ ದಿಂದ ಉಮೇಶ್ ಗೌಡ, ಕೃಷಿ ಯಿಂದ ಬಿ ಆರ್ ಮಂಜುನಾಥ್, ತೋಟಗಾರಿಕೆ ಹಾಗೂ ಕೃಷಿ ಕ್ಷೇತ್ರದಿಂದ ಹಳ್ಳಿ ರೈತ ಅಂಬರೀಷ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಧ್ಜಜಾರೋಹಣವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೆರವೇರಿಸಲಿದ್ದಾರೆ.ಕಾರ್ಯಕ್ರಮವು ನವೆಂಬರ್ ೧ ರಂದು ಶನಿವಾರ ಬೆಳಗ್ಗೆ ೯.೦೦ ಕ್ಕೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತಿದೆ.
೫ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಘನ ಉಪಸ್ಥಿತರಿರುವರು.
ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಡಾ.ಕೆ ಸುಧಾಕರ್, ವಿಧಾನ ಪರಿಷತ್ತಿನ ಶಾಸಕರಾದ ಎಸ್.ರವಿ, ಪುಟ್ಟಣ್ಣ, ಎನ್ ನಾಗರಾಜ್ (ಎಂ.ಟಿ.ಬಿ), ರಾಮೋಜಿಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್ ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ ರಾಜಣ್ಣ, ದೇವನಹಳ್ಳಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ ಜಗನ್ನಾಥ್, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ದಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿ ಶಾಂತಕುಮಾರ್, ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಪಿ.ಸಿ.ಜಾಫರ್, ದೇವನಹಳ್ಳಿ ಪುರಸಭೆಯ ಅಧ್ಯಕ್ಷರು ಡಿ.ಎಂ ಮುನಿಕೃಷ್ಣ, ಉಪಾಧ್ಯಕ್ಷರು ಜಿ.ಎ ರವೀಂದ್ರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎನ್. ಕೃಷ್ಣಪ್ಪ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ ಬಾಬಾ, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಎಲ್ಲಾ ನಾಮ ನಿರ್ದೇಶಿತ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
