ದೊಡ್ಡಬಳ್ಳಾಪುರ : ತೂಬಗೆರೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರವಿ ಸಿದ್ದಪ್ಪ ಅಧಿಕಾರ ವಹಿಸಿಕೊಂಡಿದ್ದು, ಸಮಿತಿ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ವಿತರಣೆ ಮಾಡಿದರು.
ತಾಲ್ಲೂಕಿನ ತೂಬಗೆರೆಯಲ್ಲಿ ನಡೆದ ವೋಟ್ ಚೋರಿ ವಿರೋಧಿಸಿ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ಭಾಗವಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷರು ಆರ್.ವಿ. ವೆಂಕಟೇಶ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಿ.ಆರ್ ಗೌಡ್ರು ಹಾಗೂ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರವಿ ಸಿದ್ದಪ್ಪನವರ ನೇತೃತ್ವದಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಆದೇಶ ಪತ್ರಗಳನ್ನು ನೀಡಲಾಯಿತು.
ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಪಟ್ಟಿ ಇಂತಿವೆ :-
ಅಧ್ಯಕ್ಷರಾಗಿ ರವಿ ಸಿದ್ದಪ್ಪ, ಉಪಾಧ್ಯಕ್ಷರಾಗಿ ಶೆಟ್ಟಪ್ಪ,ನರಸಿಂಹಮೂರ್ತಿ ಗಣೇಶಪ್ಪ, ಚಂದ್ರಮ್ಮ, ಪ್ರಧಾನ ಕಾರ್ಯದರ್ಶಿಗಳಾಗಿ ಎಂ. ಮಂಜುನಾಥ, ಜಿ. ಶ್ರೀನಿವಾಸ್,ಮಂಜುನಾಥ, ಕಾರ್ಯದರ್ಶಿಗಳಾಗಿ ಎಂ. ಪ್ರಕಾಶ್, ಅರ್ಚಿತ, ಖಜಾಂಚಿಯಾಗಿ ಮುರುಳೀಧರ. ಆರ್, ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳಿಗೆ ಸ್ಥಳೀಯ ಮುಖಂಡರು ಶುಭ ಹಾರೈಸಿದ್ದಾರೆ.
