ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು, ಸಾಲುಮರದ ತಿಮ್ಮಕ್ಕ ಸಸಿಗಳನ್ನುಬಮಕ್ಕಳೆಂದುಕೊಂಡು ಬೆಳೆಸಿ ಪೋಷಿಸಿದರು. ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿರುವ ಸಾಧನೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಸಾಲು ಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆಯ ಸಂದೇಶವು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಸಾಲುಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆ, ದೃಢತೆ, ಮತ್ತು ಬದ್ಧತೆಯನ್ನು ಜನರು ಎಂದಿಗೂ ಮರೆಯುವುದಿಲ್ಲ ಎಂದರು.
ಸಾಲುಮರದ ತಿಮ್ಮಕ್ಕ ಅವರ ಸೇವಾ ಕಾರ್ಯವನ್ನು ಗೌರವಿಸಿ ರಾಷ್ಟ್ರೀಯ ನಾಗರಿಕ ಪ್ರಶಸ್ತಿ, ಪದ್ಮಶ್ರೀ, ಕರ್ನಾಟಕ ರಾಜ್ಯೋತ್ಸವ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಂದ ಪುರಸ್ಕೃತರ ಮಾಡಿದ್ದಾರೆ. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಸರ್ಕಾರದಿಂದ ‘ಪರಿಸರ ರಾಯಭಾರಿ’ಯಾಗಿ ನೇಮಕಗೊಂಡರು. ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಗೌರವಿಸಬೆಕಾಗಿದೆ. ಅವರ ಹೆಸರಲ್ಲಿ ಪರಿಸರ ಉಳಿಸಿ, ಬೆಳೆಸಿ, ಸಂರಕ್ಷಣೆ ಮಾಡುವ ಹಲವು ಯೋಜನೆಗಳನ್ನು ಸರ್ಕಾರ ಮತ್ತು ಸಾರ್ವಜನಿಕರು ಮಾಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ನಗರಸಭಾ ಮಾಜಿ ಸದಸ್ಯ ಜಿ.ಸತ್ಯನಾರಾಯಣ, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಟ್ರಸ್ಟಿ ಸುಲೋಚನಾ ವೆಂಕಟರೆಡ್ಡಿ, ಕನ್ನಡಪರ ಹಿರಿಯ ಹೋರಾಟಗಾರುಗಳಾದ ಸಂಜೀವ್ ನಾಯಕ್, ಗುರುರಾಜಪ್ಪ, ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ನಾಗರತ್ನಮ್ಮ, ಸಿ.ಅಣ್ಣಯ್ಯ, ಶ್ರೀನಿವಾಸಲು, ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ವಾಣಿಗಾರಹಳ್ಳಿ ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.
