ದೊಡ್ಡಬಳ್ಳಾಪುರ :ತಾಲೂಕಿನ ನೂತನ ತಹಶೀಲ್ದಾರ್ ಆಗಿ ನೇಮಕಗೊಂಡಿರುವ ಮಲ್ಲಪ್ಪನವರಿಗೆ ಇಂದು ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಮೂರ್ತಿ (ರಾಮು ನೇರಳಘಟ್ಟ) ಅವರು ಹೂಗುಚ್ಛ ನೀಡುವ ಮೂಲಕ ಅಧಿಕಾರಿಗಳು ಸ್ವಾಗತಕೋರಿದರು.

ಪ್ರೊ. ಬಿ ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿಯ(ರಿ.ನಂ.47/74-75) ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಮೂರ್ತಿ (ರಾಮು ನೇರಳಘಟ್ಟ) ಅವರು ಹೂಗುಚ್ಛ ನೀಡುವ ಮೂಲಕ ಅಧಿಕಾರಿಗಳು ಸ್ವಾಗತಕೋರಿದರು.
ಈ ವೇಳೆ ತಾಲ್ಲೂಕಿನ ದಲಿತ ಸಮುದಾಯಗಳ ಸಮಸ್ಯೆ ಕುರಿತು ಸಂವಾದ ನೆಡೆಸಿದರು. ನಂತರ ಮಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರೊ. ಬಿ ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿಯ(ರಿ.ನಂ.47/74-75) ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಸಮಿತಿ ವತಿಯಿಂದ ನಮ್ಮ ತಾಲ್ಲೂಕಿನ ದಂಡಧಿಕಾರಿಗಳಾಗಿ ನೂತನವಾಗಿ ಆಯ್ಕೆಯಾಗಿರುವ ಮಲ್ಲಪ್ಪ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ದಲಿತ ಹಾಗೂ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹೆಚ್ಚಿನ ರೀತಿಯಲ್ಲಿ ಶ್ರಮಿಸುವಂತೆ ನಾವು ಅಧಿಕಾರಿಗಳಲ್ಲಿ ಮನವಿ ಮಾಡಿದ್ದೇವೆ ಅಲ್ಲದೇ ನಮ್ಮ ತಾಲ್ಲೂಕಿನ ಹಲವು ಸಮಸ್ಯೆಗಳನ್ನು ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ ಮುಂದಿನ ದಿನಗಳಲ್ಲಿ ತಾಲ್ಲೂಕಿಗೆ ಉತ್ತಮ ಸೇವೆ ಸಲ್ಲಿಸಲಿದ್ದಾರೆ ಎಂಬ ಭರವಸೆಯಿದೆ ಎಂದರು

ಈ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಹಾಜರಿದ್ದರು.
