ಡಿಪಿವಿ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರಭಾಗದ ಡಿ ವಿ ಪಿ ಕನ್ವೆನ್ಷನ್ ಹಾಲ್ ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಕಸಬಾ ವಲಯದ ವತಿಯಿಂದ ಶ್ರೀ ಲಕ್ಷ್ಮಿ ಪೂಜಾ ಸಮಿತಿ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ನವಜೀವನ ಸಮಿತಿಯ ಸಹಭಾಗಿತ್ವದಲ್ಲಿ ಶ್ರೀ ಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು..   ಸಾಮೂಹಿಕ ಲಕ್ಷ್ಮಿ ಪೂಜೆಯ ಜೊತೆಗೆ ದೀಪ ಬೆಳಗುವ ಮೂಲಕ […]

Continue Reading

ವೀರಯೋಧನಿಗೆ ಗೌರವ ಸಮರ್ಪಣೆ : ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮೊಂಬತ್ತಿ ಬೆಳಗಿ ಭಾವಪೂರ್ಣ ಶ್ರದ್ದಾಂಜಲಿ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ವೀರಯೋಧ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ರವರಿಗೆ ಗೌರವ ಸಮರ್ಪಣೆ ಮಾಡಲಾಯಿತು   ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ರವರ ಸ್ಮರಣೆಯನ್ನು ನೆನೆದು ವೀರಯೋಧನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೇಣದಬತ್ತಿ ಬೆಳಗಿಸಿ ಕನ್ನಡ ಪರ ಹೋರಾಟಗಾರರು ಭಾವುಕರಾದರು. ಈ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ನಂಜಪ್ಪ ಮಾತನಾಡಿ […]

Continue Reading

ಕಾಮಗಾರಿಯ ಗುಣಮಟ್ಟದ ಬಗ್ಗೆ ಸಂಬಂಧಪಟ್ಟ ಇಲಾಖೆ ವರದಿ ನೀಡಲಿದೆ : ಜಿ. ಪಂ ಮಾಜಿ ಸದಸ್ಯ ಚುಂಚಗೌಡ ಸ್ಪಷ್ಟನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊನ್ನಾದೇವಿಪುರ -ಗೂಳ್ಯ ರಸ್ತೆಯ ಡಾಂಬರೀಕರಣ ಕಳಪೆಯಿಂದ ಕೂಡಿದೆ‌ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಕಾಂಗ್ರೆಸ್ ಮುಖಂಡರು ತಿರುಗೇಟು ನೀಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ಅನುದಾನದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ಡಾಂಬರ್ ಹಾಕಲಾಗಿದೆ. ಆದರೆ ಬಿಜೆಪಿ ಯ ಕೆಲ ಮುಖಂಡರು ಬೇಕೆಂತಲೇ ಹಾರೇಕೋಲಿನಿಂದ ರಸ್ತೆಯ ಡಾಂಬರ್ ಅಗೆದು ಕಾಮಗಾರಿ ಕಳಪೆ ಎಂದು ದೂರುತ್ತಿದ್ದಾರೆ. ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಈಗಿರುವ ರಸ್ತೆಯ […]

Continue Reading

5ಜಿ ಟವರ್ ಬೇಡ : ನೆಮ್ಮದಿಯ ಜೀವನಕ್ಕೆ ಅವಕಾಶ ನೀಡಿ

ದೊಡ್ಡಬಳ್ಳಾಪುರ: 5 ಜಿ ಟವರ್ ಪ್ರಾಬ್ಲಮ್ ಸ್ಥಳೀಯರ ಗೋಳು ಕೇಳದ ಜನಪ್ರತಿನಿಧಿಗಳು.. ತಾಲ್ಲೂಕಿನ ಚಂದ್ರಮೌಳೇಶ್ವರ ಬಡಾವಣೆಯ ಜನವಸತಿ ಜಾಗದಲ್ಲಿ ಖಾಸಗಿ ಟೆಲಿಕಾಂ ಕಂಪೆನಿಯು 5ಜಿ ಟವರ್ ನಿರ್ಮಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಬಡಾವಣೆ‌ಯ ನಿವಾಸಿಗಳು ಪ್ರತಿಭಟನೆ ನಡೆಸಿದರು. ಬಡಾವಣೆಯ ನಿವಾಸಿಯಾದ ಗೋಪಾಲ್ ಎಂಬುವರ ಜಮೀನಿನಲ್ಲಿ 5ಜಿ ಟವರ್ ನಿರ್ಮಿಸುತ್ತಿದ್ದು, ಪ್ರಾಣಿ ಪಕ್ಷಿಗಳಿಗೆ ಟವರ್ ನಿಂದ ಉಂಟಾಗುವ ತರಂಗಾಂತರ ಮಾರಕವಾಗಿದೆ. ಬಡಾವಣೆಯಲ್ಲಿರುವ 30ಕ್ಕೂ ಹೆಚ್ಚು‌ ಮನೆಗಳು, ಪಕ್ಕದ ರಾಜೀವ್ ಗಾಂಧಿ ಬಡಾವಣೆಯ ಜನರಿಗೂ ಇದರಿಂದ ಸಮಸ್ಯೆಯಾಗಲಿದೆ. ಕೂಡಲೇ […]

Continue Reading

ದೊಡ್ಡಬಳ್ಳಾಪುರ ಎಡಿಎಲ್ ಆರ್ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ದಾಳಿ

ದೊಡ್ಡಬಳ್ಳಾಪುರ : ಸಾರ್ವಜನಿಕರ ದೂರು ಆಧರಿಸಿ ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯದ 11 ಕಡೆಗಳಲ್ಲಿ ಎಡಿಎಲ್ ಆರ್ ಹಾಗೂ ಡಿಡಿಎಲ್ ಆರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕ, ಕೆ.ಆರ್.ಪುರಂ, ದೊಡ್ಡಬಳ್ಳಾಪುರ ಸೇರಿ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ಎಡಿಎಲ್ ಆರ್ ಕಚೇರಿಗೆ ಖುದ್ದು ಲೋಕಾಯುಕ್ತ ನ್ಯಾಯಾಧೀಶೆ ಹಾಗೂ ಡೆಪ್ಯುಟಿ ರಿಜಿಸ್ಟ್ರಾರ್ ಅನಿತಾ ಅವರ ನೇತೃತ್ವದಲ್ಲಿ‌ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಎಸ್ಪಿ ಡಾ.ರಾಮ್ ಅರಸಿದ್ದಿ, ಡಿವೈಎಸ್ಪಿ […]

Continue Reading

*1333 ನೇ ದಿನದ ಅನ್ನದಾಸೋಹ ಕಾರ್ಯಕ್ರಮ : ವಿಶೇಷದಿನಗಳನ್ನು ಅನ್ನದಾಸೋಹ ಸಮಿತಿಯೊಂದಿಗೆ ಆಚರಿಸಿ – ಮಲ್ಲೇಶ್*

*ದೊಡ್ಡಬಳ್ಳಾಪುರ* : ದೊಡ್ಡಬಳ್ಳಾಪುರ ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮಲ್ಲೇಶ್ ರವರ ನೇತೃತ್ವದಲ್ಲಿ ಸತತವಾಗಿ ದಾನಿಗಳ ನೆರವಿನಿಂದ ಅನ್ನದಾಸೋಹ ಕಾರ್ಯಕ್ರಮ ನೆಡೆಯುತ್ತಿದ್ದು 1333ನೇ ಅನ್ನದಾಸೋಹ ದಾನಿಗಳಾಗಿ ರವಿ ಕುಮಾರ್, ಹಾಗೂ ನಗರಭಾಗದ ದರ್ಬಾರ್ ಹೋಟೆಲ್ ಮಾಲೀಕರಾದ ಅಭಿಲಾಷ್ ರವರು ಸಹಾಯ ಹಸ್ತ ನೀಡಿದ್ದು ಕುಮಾರಿ ಮೌಲ್ಯ ರವರ ಹುಟ್ಟುಹಬ್ಬದ ಅಂಗವಾಗಿ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಲೇಖನಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ದರ್ಬಾರ್ ಬಿರಿಯಾನಿ ಹೋಟೆಲ್ ಮಾಲೀಕರಾದ ಅಭಿಲಾಷ್ ಮಾತನಾಡಿ ನಮ್ಮ ಪುಟಾಣಿ ಮೌಲ್ಯ […]

Continue Reading

ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲನೆ : ಸ್ಥಗಿತಗೊಂಡ ರಸ್ತೆ ಕಾಮಗಾರಿ

ದೊಡ್ಡಬಳ್ಳಾಪುರ : ರಸ್ತೆ ಕಾಮಗಾರಿ ಪರಿಶೀಲನೆಗೆ ಮುಂದಾದ ಗ್ರಾಮಪಂಚಾಯಿತಿ ವಿರುದ್ಧ ಹೋರಾಟ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡ ಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ.   ಘಟನೆ ಸಂಬಂಧ ಕೊನೇನಹಳ್ಳಿ ಯಿಂದ ಜ್ಯೋತಿಪುರದ ವರೆಗೆ ಸಾಗುವ ರಸ್ತೆ ಕುರಿತಂತೆ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು ಗುಣಮಟ್ಟದ ಪರಿಶೀಲನೆ ಎಂದು ತೆರಳಿದ್ದು ರಸ್ತೆ ಕಾಮಗಾರಿ ಕೆಲಸ ಸ್ಥಗಿತಗೊಂಡಿರುವ ಕಾರಣ ಗ್ರಾಮ ಪಂಚಾಯಿತಿ ವಿರುದ್ಧ ಸ್ಥಳೀಯ ಮಟ್ಟದ ಮುಖಂಡರಿಂದ ಗ್ರಾಮ […]

Continue Reading

ಘಾಟಿ ಸುಬ್ರಮಣ್ಯ ದೇವಾಲಯದ ಹುಂಡಿ ಎಣಿಕೆ : 53 ಲಕ್ಷಕ್ಕೂ ಅಧಿಕ ಕಾಣಿಕೆ ಸಂಗ್ರಹ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ದೇವಾಲಯ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.53,22,602 ಹಣ ಸಂಗ್ರಹವಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಹನ್ನೆರಡು ಸಾವಿರ ಮೌಲ್ಯದ ಚಿನ್ನ, 54,000 ರೂ ಮೌಲ್ಯದ 01 ಕೆಜಿ 500 ಗ್ರಾಂ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಹಾಕಲಾಗಿದೆ. ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಈ ಸಂದರ್ಭದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಎಣಿಕೆ ಕಾರ್ಯದಲ್ಲಿ […]

Continue Reading

ತಾಲ್ಲೂಕಿನ ಎಲ್ಲಾ ವಕೀಲರು ತಪ್ಪದೇ ಮತದಾನ ಮಾಡಿ – ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಪ್ರಕಾಶ್ ಸಿ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ 2023-24 ಮತ್ತು 2024-25 ರ ಅವಧಿಗೆ ವಕೀಲರ ಸಂಘದ ಆಡಳಿತ ಮಂಡಳಿಯ ಚುನಾವಣೆ ಇದೇ ನೆವೆಂಬರ್ 20 ರಂದು ಬೆಳ್ಳಿಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನೆಡೆಯಲಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘ ತಿಳಿಸಿದೆ ಈ ಕುರಿತಂತೆ ವಕೀಲರಾದ ಪ್ರಕಾಶ್ ಸಿ ಮತ್ತು ಸಹ ವಕೀಲರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ 299 ವಕೀಲ ಸದಸ್ಯರಿದ್ದು ನೆವೆಂಬರ್ 20 ರಂದು ನೆಡೆಯುವ ವಕೀಲರ ಸಂಘದ […]

Continue Reading

ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ : ಮನೆ ಬಾಗಿಲಿಗೆ ಅರೋಗ್ಯ ಸಿಬ್ಬಂದಿ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ವತಿಯಿಂದ ತಾಲ್ಲೂಕಿನಾದ್ಯಂತ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ 2023 ರ ನೆವಂಬರ್ 15 ರಿಂದ ಡಿಸೆಂಬರ್ 2ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಈ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಕ್ಷಯರೋಗ ಮುಕ್ತ ಸಮಾಜಕ್ಕಾಗಿ ಅರೋಗ್ಯ […]

Continue Reading