“ರನ್ ವಿಜಯಪುರ ರನ್” ವೃಕ್ಷಥಾನ್ ಕಾರ್ಯಕ್ರಮ : ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಮತ್ತು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಗೌರವಾರ್ಥ ಸಚಿವ ಎಂ ಬಿ ಪಾಟೀಲ ಅವರು ಏರ್ಪಡಿಸಿದ್ದ ವೃಕ್ಷಥಾನ್ ಹೆರಿಟೇಜ್ ರನ್ `ರನ್ ವಿಜಯಪುರ ರನ್’ ಭಾನುವಾರ ಯಶಸ್ವಿಯಾಗಿ ನಡೆಯಿತು.   21 ಕಿ.ಮೀ, 10 ಕಿ.ಮೀ, 5 ಕಿ.ಮೀ, 3.50 ಕಿಮೀ ಮತ್ತು 800 ಮೀಟರ್ ವಿಭಾಗಗಳಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹಲವು ಖ್ಯಾತನಾಮರು ಸೇರಿದಂತೆ 10 ಸಾವಿರಕ್ಕೂ ಹೆಚ್ಚು ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಸ್ಪರ್ಧಿಸಿದ್ದವರಲ್ಲಿ `ಬರಿಗಾಲ ಓಟಗಾರ್ತಿ’ […]

Continue Reading

ಬಿಜೆಪಿ ರಾಜ್ಯ ಯುವ ಘಟಕಕ್ಕೆ ನೂತನ ಸಾರಥಿಯಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ನೇಮಕ

ಬೆಂಗಳೂರು : ರಾಜ್ಯ ಬಿಜೆಪಿಯ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ಮುರುಗೇಶ್ ನಿರಾಣಿ, ಭೈರತಿ ಬಸವರಾಜು, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ್ ಕೇಲಗಾರ, ಮಾಳವಿಕಾ ಅವಿನಾಶ್, ಎಂ.ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ, ಜೆ.ಪ್ರೀತಂ ಗೌಡ ಅವರನ್ನು ನಿಯುಕ್ತಿಗೊಳಿಸಲಾಗಿದೆ. ರಾಜ್ಯ ಕಾರ್ಯದರ್ಶಿಗಳನ್ನಾಗಿ ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ್ ಮತ್ತೀಮೋಡ್, […]

Continue Reading

ಮಲ್ಲೋಹಳ್ಳಿ ರಂಗನಾಥ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ಆಚರಣೆ : ದೇವರ ದರ್ಶನ ಪಡೆದ ಸಾವಿರಾರು ಭಕ್ತರು

ದೊಡ್ಡಬಳ್ಳಾಪುರ :ನಾಡಿನಾದ್ಯಂತ ವೈಕುಂಠ ಏಕಾದಶಿ ಪ್ರಯುಕ್ತ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ವೈಕುಂಠ ಏಕಾದಶಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು   ಹಿಂದೂ ಪಂಚಾಂಗದ ಪ್ರಕಾರ ಪುಷ್ಯ ಮಾಸದ ಶುಕ್ಲ ಪಕ್ಷದ ಏಕಾದಶಿ ತಿಥಿಯಂದು ವೈಕುಂಠ ಏಕಾದಶಿ ಎಂದು ಆಚರಿಸಲಾಗುತ್ತದೆ ಈ ದಿನ ವೆಂಕಟೇಶ್ವರ ಅಥವಾ ಶ್ರೀ ರಂಗನಾಥ ಸ್ವಾಮಿಯ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುವುದೆಂಬ ನಂಬಿಕೆ ಇದೆ .ಈ […]

Continue Reading

ಬಗೆ ಹರಿಯದ ನೀರಿನ ಸಮಸ್ಯೆ : ತಲೆ ಕೆಡಿಸಿಕೊಳ್ಳದ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು..!

ದೊಡ್ಡಬಳ್ಳಾಪುರ: ಕಳೆದ ಒಂದು ವಾರದಿಂದ ಕುಡಿಯುವ ನೀರಿನ ಪೂರೈಕೆ ಇಲ್ಲದೆ ತಿರುಮಗೊಂಡನಹಳ್ಳಿ ಗ್ರಾಮಸ್ಥರು ಹಾಗು ಜಾನುವಾರು ಗಳು ಪರದಾಡುವ ಪರಿಸ್ಥಿತಿ ಬಂದಿದೆ.   ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ 150 ಕ್ಕೂ ಹೆಚ್ಚು ಮನೆಗಳಿದ್ದು ಜಾನುವಾರುಗಳ ಸಂಖ್ಯೆ ಕೂಡ ಹೆಚ್ಚಾಗಿವೆ..   ಗ್ರಾಮದಲ್ಲಿ ಕೇವಲ ಒಂದು ಬೋರ್ ವೆಲ್ ಇದ್ದು, 24 ಗಂಟೆ ಕರೆಂಟ್ ನೀಡದೆ ನೀರಿನ ಪೂರೈಕೆಯಲ್ಲಿ ವ್ಯತ್ಯಾಸವಾಗುತ್ತಿದೆ. ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಪ್ರಾರಂಭ […]

Continue Reading

ಶುದ್ಧ ನೀರು ಪೂರೈಕೆಗೆ ಮುಂದಾದ ತೂಬಗೆರೆ ಪಂಚಾಯಿತಿ : ನೂತನ 3 ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ದೊಡ್ಡಬಳ್ಳಾಪುರ : ಮೂಲಭೂತ ಸೌಕರ್ಯಕ್ಕೆ ನಮ್ಮ ಆದ್ಯತೆ ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ನಮ್ಮ ಉದ್ದೇಶ ಎಂದು ತೂಬಗೆರೆ ಪಂಚಾಯತಿಯ ಅಧ್ಯಕ್ಷೆ ನಂಜಮ್ಮ ಬಿ ಚಿಕ್ಕಮುದ್ದೆನಹಳ್ಳಿ ತಿಳಿಸಿದರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ತೂಬಗೆರೆ ಮತ್ತು ಮುಕ್ಕಡಿಘಟ್ಟ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ನೂತನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಉತ್ತಮ ಆರೋಗ್ಯಕ್ಕೆ ಅಗತ್ಯವಾಗಿ ಬೇಕಿರುವ ಪದಾರ್ಥ ನೀರು , ಶುದ್ದ ನೀರು ಗ್ರಾಮಗಳ ಗ್ರಾಮಸ್ಥರ ಆರೋಗ್ಯ […]

Continue Reading

ವಕೀಲರ ದಿನಾಚಣೆಯೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆ : ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ : ನ್ಯಾಯಾಲಯಗಳಲ್ಲಿ ಮಾತೃಭಾಷೆ ಕನ್ನಡಭಾಷೆಯಲ್ಲಿ ವಾದ ಮಂಡನೆ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಲ್.ರಘುನಾಥ್ ಅಭಿಪ್ರಾಯಪಟ್ಟರು. ದೊಡ್ಡಬಳ್ಳಾಪುರ ನಗರದ ಕೋರ್ಟ್ ಆವರಣದಲ್ಲಿ ತಾಲೂಕು ವಕೀಲರ‌ ಸಂಘದ ವತಿಯಿಂದ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಹಾಗೂ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ ಎಲ್ […]

Continue Reading

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾದ ದೊಡ್ಡಬಳ್ಳಾಪುರ ಜೆಡಿಎಸ್ : ಡಿ 25 ರಂದು ವಾರ್ಷಿಕ ದಿನಚರಿ ( ಕ್ಯಾಲೆಂಡರ್ ) ಬಿಡುಗಡೆಗೆ ಸಿದ್ಧತೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ಒಕ್ಕಲಿಗರ ಭವನದಲ್ಲಿ ಡಿಸೆಂಬರ್ 25 ರಂದು 2024 ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ ಮಾಡುವ ಮೂಲಕ ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷ ಸಿದ್ದತೆ ನಡೆಸಿದೆ ಎಂದು ಗುರುವಾರ ನೆಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತಿಳಿಸಿದರು   ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಸುದ್ದಿಗೋಷ್ಠಿ ಆಯೋಜನೆ […]

Continue Reading

13ನೇ ಕನ್ನಡ ಸಾಹಿತ್ಯ ಸಮ್ಮೇಳನ : ಕಸಾಪ ನೂತನ ಲೋಗೋ ಲೋಕಾರ್ಪಣೆ ಮಾಡಿದ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : 2024 ರ ಜನವರಿ 21 ಹಾಗೂ 22 ರಂದು ತಾಲ್ಲೂಕಿನ ಭಾಶೇಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಡಶಾಲೆಯಲ್ಲಿ 13 ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಾಲ್ಲೂಕಿನ ಶಾಸಕರಾದ ಧೀರಜ್ ಮುನಿರಾಜು ಘೋಷಿಸಿದರು ಈ ಸಮ್ಮೇಳನದ ಅಧ್ಯಕ್ಷತೆಯನ್ನು ಡಾ . ಅಂಜಿನಪ್ಪ ವಹಿಸಿದ್ದಾರೆ ಎಂದು ತಿಳಿಸಿದರು   ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಲಾಂಛನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಮ್ಮುಖದಲ್ಲಿ ತಾಲ್ಲೂಕಿನ ಶಾಸಕರಾದ ಧೀರಜ್ ಮುನಿರಾಜು […]

Continue Reading

ವಿಶ್ವನಾಥಪುರ ಪಬ್ಲಿಕ್ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ : ನೆಚ್ಚಿನ ಗುರುಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿ :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಪಬ್ಲಿಕ್ ಶಾಲೆಯಲ್ಲಿ 2000-01 ಸಾಲಿನ ವಿದ್ಯಾರ್ಥಿಗಳಿಂದ ತಮ್ಮ ನೆಚ್ಚಿನ  ಗುರುಗಳಿಗೆ ಗುರುವಂದನ ಕಾರ್ಯಕ್ರಮವನ್ನು ಡಿಸೆಂಬರ್ 17 ರಂದು ಕುವೆಂಪುರಂಗ ಮಂದಿರದಲ್ಲಿ ಆಯೋಜಿಸಲಾಗಿತ್ತು.   ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಬ್ಲಿಕ್ ಶಾಲೆಯ ಪ್ರಿನ್ಸಿಪಾಲರಾದ ಶ್ರೀ ಶಿವಶಂಕರ್ ರೆಡ್ಡಿ ಹಾಗೂ ಮುಖ್ಯ ಶಿಕ್ಷಕರಾದ ಶ್ರೀ ವೆಂಕಟೇಶ್ವರ ರವರು ವಹಿಸಿದ್ದರು   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಶಿವಶಂಕರ್ ರೆಡ್ಡಿ ಮಾತನಾಡಿ ಶಿಕ್ಷಕರಿಗಾಗಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಿರುವ […]

Continue Reading

ಮೂಲಭೂತ ಸೌಕರ್ಯಕ್ಕೆ ಗ್ರಾಮಸ್ಥರ ಮನವಿ : ಕ್ಯಾರೇ ಎನ್ನದ ರಾಜಘಟ್ಟ ಪಂಚಾಯಿತಿ ಅಧಿಕಾರಿಗಳು

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಪಂಚಾಯಿತಿಯಲ್ಲಿ ಚರಂಡಿಗಳು ಕಸದಿಂದ ತುಂಬಿದ್ದು ಪಂಚಾಯಿತಿ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ,ಗ್ರಾಮದ ಸ್ವಚ್ಛತೆ ಕುರಿತಂತೆ ಸ್ಪಂದಿಸದ ಪಂಚಾಯತಿ ಅಭಿವೃದ್ದಿ ಅಧಿಕಾರಿ ಹಾಗೂ ಪಂಚಾಯಿತಿ ಸಿಬ್ಬಂದಿಗಳ ವಿರುದ್ಧ ಸ್ಥಳೀಯ ಯುವಕರು ,ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದಾರೆ. ಸ್ವಚ್ಛತೆ ಕುರಿತು ಪಂಚಾಯತಿ ಅಭಿವೃದ್ದಿ ಅಧಿಕಾರಿಗಳನ್ನು ಪ್ರಶ್ನಿಸಿದರೆ ಅರ್ಜಿ ಸಲ್ಲಿಸಲು ತಿಳಿಸುತ್ತಾರೆ ಆದರೆ ನಾವು ನೀಡುವ ಅರ್ಜಿ ಕಸದ ಬುಟ್ಟಿ ಸೇರುತ್ತಿದೆ . ಅಭಿವೃದ್ದಿ ಮತ್ತು ಸ್ವಚ್ಛತೆ ಗ್ರಾಮದಲ್ಲಿ […]

Continue Reading