ಇಸ್ಪೀಟ್, ಮಟ್ಕಾ, ಬೆಟ್ಟಿಂಗ್ ದಂಧೆಯ ಚಟಕ್ಕೆ ಬಿದ್ದ ಗ್ರಾಮೀಣ ಯುವಕರು : ಪೊಲೀಸ್ ಗಸ್ತು ಬಿಗಿಗೊಳಿಸುವಂತೆ ಸಾರ್ವಜನಿಕರ ಮನವಿ

ದೊಡ್ಡಬಳ್ಳಾಪುರ:ನಗರದ ಪ್ರದೇಶಗಳಲ್ಲಿ ನಡೆಯುತ್ತಿದ್ದ ಜೂಜಾಟ ಇತ್ತೀಚೆಗೆ ಗ್ರಾಮೀಣ ಪ್ರದೇಶಗಳಿಗೂ ಹಬ್ಬುತ್ತಿದೆ. ಜೂಜುಕೋರರ ಹಾವಳಿ ಮಿತಿ ಮೀರಿದ್ದು, ನಗರ ಕೇಂದ್ರಿತವಾಗಿದ್ದ ಜೂಜು ಅಡ್ಡೆಗಳು ಈಗ ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಜಾಲ ಬೀಸಿವೆ.   ತಾಲೂಕಿನ ಮೆಳೆಕೋಟೆ, ರಾಜಘಟ್ಟ, ರಾಮಯ್ಯನಪಾಳ್ಯ, ಮೇಡಿಹಳ್ಳಿ ಹಾಗೂ ಜಕ್ಕಲಮಡಗು ರಸ್ತೆಗಳ ತೋಟದ ಮನೆಗಳು, ನೀಲಗಿರಿ ತೋಪುಗಳು ಜೂಜುಕೋರರ ಉಪಟಳದಿಂದ ನಲುಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.   ಇಸ್ಪೀಟ್, ಮಟ್ಕಾ, ಬೆಟ್ಟಿಂಗ್ ದಂಧೆಗೆ ಗ್ರಾಮೀಣ ಭಾಗದ ಯುವಜನರೇ ಹೆಚ್ಚು ದಾಸರಾಗುತ್ತಿದ್ದು, ಜೂಜಾಟಕ್ಕೆ ಬಲಿಯಾದ ಕುಟುಂಬಗಳು ಬೀದಿಗೆ […]

Continue Reading

ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಸ್ಮರಿಸಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ.   ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಬೇಕು.   ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಕುತಂತ್ರದಿಂದ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ […]

Continue Reading

8 ತಿಂಗಳ ಅವಧಿಯಲ್ಲಿ 139 ಕೋಟಿ ಜನ ಸಂಚಾರ ಮಾಡಿದ್ದಾರೆ – ಸಚಿವ ರಾಮಲಿಂಗರೆಡ್ಡಿ

ಕರ್ನಾಟಕ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ ₹20 ಕೋಟಿ ಅನುದಾನದಲ್ಲಿ ನಿರ್ಮಿಸಲಾದ ಕೋಟೆ ಮಾದರಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗರೆಡ್ಡಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಕ್ತಿ ಯೋಜನೆ ಜಾರಿ ಮುನ್ನ ರಾಜ್ಯದಲ್ಲಿ ಪ್ರತಿ ದಿನ 84 ಲಕ್ಷ ಜನ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಯೋಜನೆ ಜಾರಿ ನಂತರ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಶಕ್ತಿ ಯೋಜನೆ ಕುರಿತು […]

Continue Reading

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಾಧಕರಿಗೆ ಗೌರವ ಸಮರ್ಪಣೆ

ದೊಡ್ಡಬಳ್ಳಾಪುರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ದಿನಾಂಕ 26-01.2024 ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ನಗರ ಭಾಗದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.   ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಆಯ್ಕೆ ಸಮಿತಿ ವತಿಯಿಂದ ಹಲವು ಸಾಧಕರಿಗೆ ಗೌರವ ಸಲ್ಲಿಸಲಾಯಿತು.   ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ರಮೇಶ್ ಸೇರಿದಂತೆ ಹಲವು ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು   ಸಾಧಕರ ಪಟ್ಟಿ ಇಂತಿದೆ: ನಾಗರಾಜು ಸಿ ಗೌರವ ಶಿಕ್ಷಕರು, ಕ್ಷೇತ್ರ ಕಲಾ, ಡಾ. […]

Continue Reading

ದ್ವಜಸ್ತಂಭ ಖಾಲಿ ಖಾಲಿ: ಗಣರಾಜ್ಯೋತ್ಸವದ ಆಚರಣೆ ಮರ್ತೋದ್ರಾ ದೊಡ್ಡಬಳ್ಳಾಪುರ ವಿದ್ಯುತ್ ಮಗ್ಗ ಸೇವಾ ಕೇಂದ್ರ ಸಿಬ್ಬಂದಿ

ದೊಡ್ಡಬಳ್ಳಾಪುರ : ದೇಶದಾದ್ಯಂತ ವಿಶೇಷವಾಗಿ ಜನವರಿ 26ರಂದು ಗಣರಾಜ್ಯೋತ್ಸವದ ದಿನವನ್ನಾಗಿ ಅತ್ಯಂತ ಸಂಭ್ರಮಾ ಸಡಗರದಿಂದ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ.ಸಾರ್ವಜನಿಕ ಕಚೇರಿಗಳಲ್ಲಿ ಈ ದಿನವು ಒಂದು ವಿಶೇಷ ಹಬ್ಬವೇ ಸರಿ.. ಆದರೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ ಕಚೇರಿ ಪಾಳ್ಯದ ಸಮೀಪ ಜವಳಿ ಮಂತ್ರಾಲಯದ ವತಿಯಿಂದ ಸ್ಥಾಪಿಸಲಾಗಿರುವ ಕೆ ಎಸ್ ಟಿ ಐ ಡಿ ಸಿ ವಿದ್ಯುತ್ ಮಗ್ಗ ಸೇವಾ ಕೇಂದ್ರ ಕಚೇರಿ ಮುಂಭಾಗ ಭಾರತದ ಹೆಮ್ಮೆಯ ಧ್ವಜ ಕೊಂಗೊಳಿಸಬೇಕಿದ್ದ ಧ್ವಜಸ್ತಂಭ ಖಾಲಿ ಖಾಲಿ ಇದೆ.   ಗಣರಾಜ್ಯೋತ್ಸವದ ದಿನದ […]

Continue Reading

ಕಾಡಾನೆಗಳ ಹಾವಳಿ ತಪ್ಪಿಸಲು ಸರ್ಕಾರ ಹೊಸ ಪ್ಲಾನ್

ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ ಕಾಡಾನೆಗಳ ಹಾವಳಿ ತಪ್ಪಿಸಲು ವಿಶೇಷ ಯೋಚನೆ ರೂಪಿಸಿರುವ ಸರ್ಕಾರ ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದೆ ಎಂದು ಮಡಿಕೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳಿಗೆ ತಿಳಿಸಿದರು   ಈ ಕುರಿತಂತೆ ಮಾತನಾಡಿದ ಅವರು ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ. ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ […]

Continue Reading

12 ಕೋಟಿ ವೆಚ್ಚದಲ್ಲಿ ಕೊಡಗಿನ ಸಂಪ್ರದಾಯದಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕಚೇರಿ ನಿರ್ಮಾಣ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ಪೊಲೀಸ್ ವಸತಿ ಗೃಹಗಳ ಕುರಿತಂತೆ ಮಡಿಕೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕೊಡಗಿನ ಸಂಪ್ರದಾಯದಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನಿರ್ಮಾಣವಾಗಿದೆ. ಕಚೇರಿ ಎಷ್ಟು ದೊಡ್ಡದು ಮುಖ್ಯವಲ್ಲ ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ.   ರಾಜ್ಯದಲ್ಲಿ ಪೊಲೀಸ್ ವಸತಿ ಗೃಹಗಳ ಕೊರತೆ ಇದ್ದು ಈ ನಿಟ್ಟಿನಲ್ಲಿ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ […]

Continue Reading

ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ದೊಡ್ಡಬಳ್ಳಾಪುರ : ನಮ್ಮ  ಸಂವಿಧಾನವು  ದೇಶದ ಸಮಗ್ರ ಅಭಿವೃದ್ಧಿಯಲ್ಲಿ  ಮಹತ್ವದ ಪಾತ್ರ ವಹಿಸಿದೆ.  ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು  ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು  ಜೆಸಿಐಯುಟಿ ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ  ಗಣರಾಜ್ಯೋತ್ಸವ  ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.  ನಮ್ಮ ಸಂವಿಧಾನವು    ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಿದೆ.    ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಗೂ   ಮೂಲಭೂತ […]

Continue Reading

Sleep Study Unveils New Insights

In a recent study, researchers challenge beliefs about sleep duration and health, opening avenues for personalized prescriptions. A wonderful tranquility has taken proprietorship of my entirety soul, like these sweet mornings of spring which I appreciate with my aggregate heart. I am so playful, my costly companion, so ingested inside the astonishing sense of immaterial […]

Continue Reading

2024ರ ರಾಷ್ಟ್ರಪತಿ ಪದಕಕ್ಕೆ ದೊಡ್ಡಬೆಳವಂಗಲ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹರೀಶ್ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ಎಂ.ಆರ್.ಹರೀಶ್ ಅವರು ಅತ್ಯುತ್ತಮ ಸೇವೆಗಾಗಿ 2024ನೇ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.   2003ನೇ ಬ್ಯಾಚ್ ಅಧಿಕಾರಿಯಾದ ಹರೀಶ್ ಅವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳ ಹಿಂದೆ ದೊಡ್ಡಬಳ್ಳಾಪುರ ವೃತ್ತದ ಸರ್ಕಲ್ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.   ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಿದ ಬಳಿಕ ದೊಡ್ಡಬೆಳವಂಗಲ ಠಾಣೆಯ ಪೊಲೀಸ್ ಇ‌ನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.   ಅಪರಾಧಿಗಳ ಪತ್ತೆಗಾಗಿ […]

Continue Reading