ಶ್ರೀ ಗುರು ಶಿವಯೋಗಿ ಸಿದ್ದರಾಮೇಶ್ವರರ 851ನೇ ಜಯಂತೋತ್ಸವ : ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಸರ್ಕಾರ ಎಲ್ಲಾ ಸಮಾಜದಲ್ಲಿನ ಬಡವರನ್ನು ಮುಖ್ಯ ವಾಹಿನಿಗೆ ತಂದು, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಬೇಕು ಎಂದು ಪ್ರಯತ್ನ ಮಾಡುತ್ತಿದೆ. ಅನುಭವ ಮಂಟಪದಲ್ಲಿ ಸಮಸಮಾಜ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳಾಗುತ್ತಿತ್ತು. ಅಂಥ ಸಮಾಜವನ್ನು ಬಸವಾದಿ ಶರಣರು, ಸಿದ್ದರಾಮೇಶ್ವರರು ಬಯಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು   ನೊಳಂಬ ಲಿಂಗಾಯತ ಸಂಘ ಬೆಂಗಳೂರು ವತಿಯಿಂದ ಆಯೋಜಿಸಿದ್ದ ಶ್ರೀ ಗುರು ಶಿವಯೋಗಿ […]

Continue Reading

ಖಾಲಿ ಇರುವ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು – ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು […]

Continue Reading

ಕರ್ನಾಟಕಕ್ಕೆ ಮೊದಲ ಬಾರಿ ಬಿಹಾರ್ ಟ್ರೋಫಿ : 890 ರನ್ ಗಳಿಸಿದ ಕರ್ನಾಟಕ ತಂಡ

79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್‌ ಬಿಹಾರ್‌ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್‌ ತಂಡ.   ಆರಂಭಿಕ ಬ್ಯಾಟರ್‌ ಪ್ರಖರ್‌ ಚತುರ್ವೇದಿ ಅಜೇಯ 404 ರನ್‌ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕ ತಂಡವು 890 ರನ್‌ಗಳ ದಾಖಲೆಯ ಮೊತ್ತವನ್ನು ಗಳಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಕನ್ನಡಿಗರಿಗೆ ಹೆಮ್ಮೆಯ ವಿಷಯವಲ್ಲವೇ…..

Continue Reading

ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಓರ್ವ ಬಲಿ : ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವದಲ್ಲಿ ಘಟನೆ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವದ ಹಿನ್ನಲೆ ದೇವಾಲಯಕ್ಕೆ ಅಪಾರ ಪ್ರಮಾಣದ ಭಕ್ತಗಣ ಹರಿದುಬರುತ್ತಿದೆ.   ಬಸ್ ಚಾಲನೆಯಲ್ಲಿ ಇದ್ದಾಗಲೇ ತಾರಾತುರಿಯಲ್ಲಿ ಬಸ್ ಯಿಂದ ಇಳಿಯಲು ಮುಂದಾದ ವ್ಯಕ್ತಿ ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಾಪಟ್ಟಿರುವ ಘಟನೆ ಘಾಟಿಸುಬ್ರಮಣ್ಯ ಕ್ಷೇತ್ರದ ಬಳಿಯ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ ಸಮೀಪದಲ್ಲಿ ಸಂಭವಿಸಿದೆ.     ಹೌದು ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಭಕ್ತನ ಮೇಲೆ ಹರಿದ ಪರಿಣಾಮ ಕಾಲಿಗೆ ಗಂಭೀರ […]

Continue Reading

ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ರಥೋತ್ಸವದಲ್ಲಿ ಭಾಗಿಯಾದ ಅಸಂಖ್ಯಾತ ಭಕ್ತಗಣ

ದೊಡ್ಡಬಳ್ಳಾಪುರ : ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ‌ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ಬಹಳ ವೈಭವದೊಂದಿಗೆ ನೆರವೇರಿತು. ರಥೋತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತಗಣ ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದು, ರಥವನ್ನ ಎಳೆದು, ರಥಕ್ಕೆ ಬಾಳೆಹಣ್ಣು, ದವನ ಎಸೆದು ತಮ್ಮ ಭಕ್ತಿ ಇಚ್ಚಾನುಸಾರ ಸಮರ್ಪಿಸಿ ಪುನೀತರಾದರು.   ಷಷ್ಠಿಯ ದಿನದಂದು ಮುಂಜಾನೆ […]

Continue Reading

ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿಗೆ ಕುಳಿತ ರೈತರು

ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮದ ಫಲವತ್ತಾದ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗಾಗಿ ಸರ್ಕಾರ ತನ್ನ ಸ್ವಾಧೀನಕ್ಕೆ ಪಡೆಯಲು ಮುಂದಾಗಿದೆ, ಗ್ರಾಮಗಳ ರೈತರು ಸೂಕ್ತ ಪರಿಹಾರ ಕೊಡುವಂತೆ ಆಗ್ರಹಿಸಿ ಹಲವು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗದ ಹಿನ್ನಲೆ ಇಂದಿನಿಂದ ( ಜ.16) ಕೊನಾಘಟ್ಟ ಗ್ರಾಮದ ರಾಮನಬಂಡೆ ಬಳಿ ಒಮ್ಮತದಿಂದ ಅನಿರ್ದಿಷ್ಟವಾಧಿ ಧರಣಿಗೆ ಕುಳಿತ್ತಿದ್ದಾರೆ. ನಾಲ್ಕು ಗ್ರಾಮಗಳ ಫಲವತ್ತಾದ 1540 ಎಕರೆ ರೈತರ ಜಮೀನು ಸ್ವಾಧೀನಕ್ಕಾಗಿ ಕೆಐಎಡಿಬಿ ಮುಂದಾಗಿದೆ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ […]

Continue Reading

ಮನೆ ಮನೆಗೂ ಶ್ರೀರಾಮ ಮಂತ್ರಾಕ್ಷತೆ ತಲುಪಿಸುವುದು ನಮ್ಮ ಸೌಭಾಗ್ಯ – ಸ್ಥಳೀಯ ಮುಖಂಡ ಗಂಗಾಧರ್

ದೊಡ್ಡಬಳ್ಳಾಪುರ : ಶ್ರೀ ರಾಮನ ಮಂತ್ರಾಕ್ಷತೆ ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ನಾವು ಭಾಗಿಯಾಗಿರುವುದು ನಮ್ಮ ಪೂರ್ವಜನ್ಮದ ಪುಣ್ಯವೇ ಸರಿ . ಅಯೋಧ್ಯೆಯ ಪ್ರತಿಷ್ಠಾಪನ ಕಾರ್ಯದಲ್ಲಿ ನಮ್ಮ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದೇವೆ ದೊಡ್ಡಬಳ್ಳಾಪುರದಿಂದ ತೂಬಗೆರೆ ಹೋಬಳಿಗೆ ಮಂತ್ರಾಕ್ಷತೆಯನ್ನು ವಿಜೃಂಭಣೆ ಯಿಂದ ತಂದಿದ್ದು ತೂಬಗೆರೆ ಪಂಚಾಯಿತಿಯ ಎಲ್ಲಾ ಗ್ರಾಮಗಳಿಗೂ ಶ್ರೀ ರಾಮರ ಮಂತ್ರಾಕ್ಷತೆಯನ್ನು ತಲುಪಿಸುವ ಕಾರ್ಯ ನಡೆಯುತ್ತಿದೆ ಎಂದು ಸ್ಥಳೀಯ ಮುಖಂಡರು ಹಾಗೂ ಗ್ರಾಮ ಪಂಚಾಯತಿ ಸದಸ್ಯ ಗಂಗಾಧರ್ ತಿಳಿಸಿದರು ತೂಬಗೆರೆ ಹೋಬಳಿಯ ಗ್ರಾಮಗಳಾದ ಟಿ ಹೊಸಹಳ್ಳಿ ಹಾಗೂ […]

Continue Reading

ಜನಜಾಗೃತಿಗಾಗಿ ವಾಲ್ಮೀಕಿ ಜಾತ್ರಾ ಮಹೋತ್ಸವ : ತಾಲ್ಲೂಕಿನ ವಾಲ್ಮೀಕಿ ಸಮುದಾಯಕ್ಕೆ ಶ್ರೀಗಳಿಂದ ಅಧಿಕೃತ ಆಹ್ವಾನ

ದೊಡ್ಡಬಳ್ಳಾಪುರ : ಸಮಾವೇಶ, ಜಾತ್ರಾ ಮಹೋತ್ಸವ, ಹಬ್ಬ-ಹರಿದಿನಗಳನ್ನು ಆಚರಣೆ ಮಾಡುವುದು ನಮ್ಮಲ್ಲಿರುವ ಒಗ್ಗಟ್ಟನ್ನು ಪ್ರದರ್ಶಿಸಲು. ರಾಜ್ಯದಲ್ಲಿ ವಾಲ್ಮೀಕಿ ಸಮಾಜದ ಒಗ್ಗಟ್ಟು ಬಲಿಷ್ಠವಾಗಿದೆ. ನಮ್ಮ ಬಲಿಷ್ಠತೆಯನ್ನು ಪ್ರದರ್ಶನ ಮಾಡಲು ವಾಲ್ಮೀಕಿ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಫೆ.8 ಮತ್ತು 9ರಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು. ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾ ಸ್ವಾಮೀಜಿಯವರು ದೊಡ್ಡಬಳ್ಳಾಪುರದಲ್ಲಿ […]

Continue Reading

ಜನವರಿ 16ರಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ರಥೋತ್ಸವ : ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ಅರವಂಟಿಕೆ ಸಿದ್ಧತೆ

ದೊಡ್ಡಬಳ್ಳಾಪುರ : ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರಾ ಮಹೋತ್ಸವದ ಅಂಗವಾಗಿ ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರು ವ್ಯವಸ್ಥೆ ಹಾಗೂ ಹಿರಿಯ ನಾಗರಿಕರಿಗೆ ವಿಶೇಷ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನವ ಕರ್ನಾಟಕ ಯುವಶಕ್ತಿ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಹಳ್ಳಿ ರೈತ ಅಂಬರೀಶ್ ತಿಳಿಸಿದರು ಈ ಕುರಿತು ಮಾತನಾಡಿದ ಅವರು ಘಾಟಿ ಸುಬ್ರಹ್ಮಣ್ಯ ಜಾತ್ರಾ ಮಹೋತ್ಸವವು ಜಗತ್ ಪ್ರಸಿದ್ಧವಾಗಿದ್ದು ಇಲ್ಲಿ ನಡೆಯುವ ದನಗಳ ಜಾತ್ರೆಯೂ ಕೂಡ ಅದ್ದೂರಿಯಾಗಿರುತ್ತದೆ […]

Continue Reading

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕಕ್ಕೆ ನೂತನ ಸಾರಥಿಯಾಗಿ ರಾಮಮೂರ್ತಿ (ರಾಮು) ಆಯ್ಕೆ : ಜಿಲ್ಲಾ ಘಟಕದ ವತಿಯಿಂದ ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಪದಾಧಿಕಾರಿಗಳ ಅಧಿಕೃತ ಘೋಷಣೆ

ದೊಡ್ಡಬಳ್ಳಾಪುರ : ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು ತಾಲ್ಲೂಕಿನಲ್ಲಿ ನೊಂದ ದಲಿತರ ಶಕ್ತಿಯಾಗಿ ಶ್ರಮಿಸಲಿದ್ದೇವೆ ತಾಲ್ಲೂಕಿನಲ್ಲಿ ದಲಿತರು ಶೋಷಣೆಗೆ ಒಳಗಾಗುತ್ತಿದ್ದಾರೆ ನೊಂದವರ ,ದಲಿತರ ದ್ವನಿಯಾಗಿ ನಮ್ಮ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯ ನಿರ್ವಹಿಸಲಿದೆ ಎಂದು ತಾಲ್ಲೂಕು ಘಟಕದ ನೂತನ ಅಧ್ಯಕ್ಷ ರಾಮು ತಿಳಿಸಿದರು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದೊಡ್ಡಬಳ್ಳಾಪುರ ತಾಲ್ಲೂಕು […]

Continue Reading