*ರಾಜ್ಯ ಮಟ್ಟದ ಉದ್ಯೋಗ ಮೇಳಕ್ಕೆ ವಿಕಲಚೇತನ ಅಭ್ಯರ್ಥಿಗಳು ನೋಂದಾಯಿಸಿ*

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಸನ್ಮಾನ್ಯ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿ/ಉದ್ದಿಮೆ/ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿರುವುದರಿಂದ ವಿಕಲಚೇತನ ಅಭ್ಯರ್ಥಿಗಳು/ಉದ್ಯೋಗಾಕಾಂಕ್ಷಿಗಳು https://udyoga.skillconnet.kaushalkar.com/ ಲಿಂಕ್‌ನಲ್ಲಿ ನೋಂದಾಯಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಲಿತರ ಮೇಲೆ ದೌರ್ಜನ್ಯ ಖಂಡನೀಯ : ಹೋರಾಟಕ್ಕೆ ನಾವು ಸದಾ ಸಿದ್ದ – ಅಶ್ವಥ್ ನಾರಾಯಣ್

1985ರ ಉಳುವುದಕ್ಕೆ ಭೂಮಿಕೊಡಿ ವಾಸ ಮಾಡಲು ನಿವೇಶನ ಕೊಡಿ ಎಂಬ ಧ್ಯೇಯ ವಾಕ್ಯದಂತೆ ಅಂದಿನಿಂದ ಇಂದಿನವರೆಗೂ ರಾಜ್ಯಾದ್ಯಂತ ನಿವೇಶನ ಹಾಗೂ ಭೂಮಿ ಕುರಿತು ಸತತ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದೇವೆ .ಸ್ಥಳೀಯವಾಗಿ ದೊಡ್ಡಬಳ್ಳಾಪುರದಲ್ಲಿ ನೂರಾರು ಭೂ ಹೋರಾಟಗಳು ನಡೆದಿವೆ ಸ್ಥಳೀಯ ಮುಖಂಡರು ಹಾಗೂ ಸಂಘಟನೆಯ ರಾಜ್ಯ ಉಪ ಸಂಚಾಲಕರು ಆದ ಪಿಳ್ಳಪ್ಪ ನವರ ನೇತೃತ್ವದಲ್ಲಿ ಮುಂದೆಯೂ ಹೋರಾಟಕ್ಕೆ ಮುಂದಾಗುತ್ತೇವೆ ಏನು ದಲಿತ ಸಂಘರ್ಷ ಸಮಿತಿ (ಸಂಘರ್ಷ ಸಮಿತಿ ) ಯ ರಾಜ್ಯಾಧ್ಯಕ್ಷರಾದ ಡಾ. ಅಶ್ವಥ್ ನಾರಾಯಣ ತಿಳಿಸಿದರು ದೊಡ್ಡಬಳ್ಳಾಪುರ […]

Continue Reading

ಮೈಸೂರು ಕಾಗದ ಕಾರ್ಖಾನೆ (MPM)ಗೆ ಮರುಜೀವ : ಕಾರ್ಖಾನೆ ಪುನಶ್ಚೇತನ ಕುರಿತು ಮಹತ್ವದ ಸಭೆ

ಗುಣಮಟ್ಟದ ಕಾಗದಕ್ಕೆ ದೇಶದಲ್ಲೇ ಹೆಸರುವಾಸಿಯಾಗಿದ್ದ ಮೈಸೂರು ಕಾಗದ ಕಾರ್ಖಾನೆ (MPM)ಗೆ ಬೀಗ ಮುದ್ರೆ ಬಿದ್ದಿದ್ದು ಪುನಶ್ಚೇತನ ನೀಡುವ ಕುರಿತಂತೆ ಇಂದು ಮಹತ್ವದ ಸಭೆ ನಡೆಸಿದೆ. 40 ವರ್ಷಗಳ ಅವಧಿಗೆ 20,005 ಹೆಕ್ಟೇರ್ ಅರಣ್ಯ ಭೂಮಿ ಹಸ್ತಾಂತರ; ನೀಲಗಿರಿ ಬೆಳೆಯಲು MPMಗೆ ಅವಕಾಶ ನೀಡುವ ಸಂಬಂಧ ಚರ್ಚಿಸಿ, ಸೂಕ್ತ ತೀರ್ಮಾನ ಮಾಡಲು ಉನ್ನತಾಧಿಕಾರ ಸಮಿತಿ ರಚಿಸಲು ಸಭೆಯಲ್ಲಿ ನಿರ್ಣಯಿಸಿ, ತಿಂಗಳಲ್ಲಿ ವರದಿ ಪಡೆದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು ಈ ಸಂದರ್ಭದಲ್ಲಿ ಅರಣ್ಯ ಸಚಿವರಾದ […]

Continue Reading

*ಜಿಲ್ಲಾ ನ್ಯಾಯಾಲಯದಲ್ಲಿ ಜವಾನರ ಹುದ್ದೆಗಳಿಗೆ ಅರ್ಜಿಗಳ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಒಟ್ಟು 28 ಜವಾನರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.     ಎಸ್.ಎಸ್.ಎಲ್.ಸಿ., ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನಾಂಕವಾಗಿರುತ್ತದೆ. ಅಧಿಸೂಚನೆಗಾಗಿ ಮತ್ತು ಇತರೆ ಸೂಚನೆಗಳಿಗಾಗಿ ಹಾಗೂ ಆನ್- ಲೈನ್ ಮೂಲಕ ಅರ್ಜಿ ಸಲ್ಲಿಸಲು ನ್ಯಾಯಾಲಯದ ವೆಬ್-ಸೈಟ್ https://bengalururural.dcourts.gov.in/online-recruitment/ ಗೆ ಭೇಟಿ ನೀಡಬಹುದಾಗಿದೆ […]

Continue Reading

*ಚುನಾವಣೆ ಕರ್ತವ್ಯಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*

ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಿ, ಚುನಾವಣೆ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ .ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಲೋಕಸಭಾ ಚುನಾವಣೆಯು ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲೋಕಸಭಾ […]

Continue Reading

*ಜನ ಜಾನುವಾರುಗಳಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ ವಹಿಸಿ:ಜಿಲ್ಲಾಧಿಕಾರಿ ಸೂಚನೆ*

ಬೇಸಿಗೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಆಭಾವ ಸೃಷ್ಟಿ ಆಗದಂತೆ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು.   ನಗರ ಸ್ಥಳೀಯ ಸಂಸ್ಥೆಗಳು ಹಾಗು ಇತರ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಗ್ರಾಮಾಂತರ ಜಿಲ್ಲೆಯ ಪಟ್ಟಣಗಳಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಸೂಚಿಸಿದರು.   ಮುಂಗಡವಾಗಿ ಖಾಸಗಿ ಕೊಳವೆ ಬಾವಿ ಗಳನ್ನು ಕಾಯ್ದಿರಿಸಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ […]

Continue Reading

ಕಡಿಮೆ ಸಮಯದಲ್ಲಿ ಅತ್ಯುತ್ತಮ ಆರೋಗ್ಯ ಸೇವೆ : ನೂತನವಾಗಿ ಸೇವೆ ಆರಂಬಿಸಿದ ಶ್ರೇಷ್ಠ ಡಯಾಗ್ನೋಸ್ಟಿಕ್ಸ್

ದೊಡ್ಡಬಳ್ಳಾಪುರದಲ್ಲಿ ಪ್ರಪ್ರಥಮ ಬಾರಿಗೆ ನಮ್ಮಲ್ಲಿ 2 ಅಲ್ಟ್ರಾ ಸೌಂಡ್ ಯಂತ್ರಗಳನ್ನು ಒಳಗೊಂಡಿದೆ 2ಡಿ 3ಡಿ ಹಾಗೂ 4ಡಿ ಸೇವೆಗಳು ನಮ್ಮಲ್ಲಿ ಲಭ್ಯವಿದ್ದು , 300 mA ಕ್ಷ – ಕಿರಣ ಯಂತ್ರ ಸೇರಿದಂತೆ ಸಂಪೂರ್ಣ ಸ್ವಯಂ ಚಾಲಿತ ಲ್ಯಾಬ್ ವ್ಯವಸ್ಥೆ ಹಾಗೂ 32 ಸ್ಲೈಸ್ ಸಿಟಿ ಸ್ಕ್ಯಾನ್ ಯಂತ್ರ ಹೊಂದಿರುವ ನಮ್ಮ ಶ್ರೇಷ್ಠ ಡಯಾಗ್ನೋಸ್ಟಿಕ್ಸ್ ತಾಲ್ಲೂಕಿನ ಸಾರ್ವಜನಿಕರಿಗೆ ಕಡಿಮೆ ಸಮಯದಲ್ಲಿ ಉತ್ತಮ ಹಾಗೂ ನಿಖರ ಪಲಿತಂಶ ನೀಡುವ ಸಾಮರ್ಥ್ಯ ಹೊಂದಿದ್ದೇವೆ ಎಂದು ಡಾಕ್ಟರ್. ರಕ್ಷಿತ್ ತಿಳಿಸಿದರು   […]

Continue Reading

ಉಚಿತ ಮೋಟಾರ್‌ ರಿವೈಂಡಿಂಗ್‌ ಮತ್ತು ರಿಪೇರಿ ತರಬೇತಿ*

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೋಟಾರ್‌ ರಿವೈಂಡಿಂಗ್‌ ಮತ್ತು ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು 15 ಮಾರ್ಚ್ 2024 ರಿಂದ 30 ದಿನಗಳ ಕಾಲ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು […]

Continue Reading

ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿಗೆ ನೂತನ ಸಾರಥಿ : ಸಮಿತಿಯ ನೂತನ ಅಧ್ಯಕ್ಷರಾಗಿ ಕನ್ನಡಪರ ಹೋರಾಟಗಾರರಾದ ಚಂದ್ರುಶೆಟ್ಟಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ : ಯುವ ಸಮುದಾಯವನ್ನು ಮುನ್ನಡೆಸುವ ಕಾರ್ಯಕ್ಕೆ ನನ್ನನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ ಅಂತೆಯೇ ಜವಾಬ್ದಾರಿಯು ಹೆಚ್ಚಿದೆ. ಮುಂದೆ ನಮ್ಮ ಸಮುದಾಯದ ವತಿಯಿಂದ ತಾಲೂಕಿನಾದ್ಯಂತ ಉತ್ತಮ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಜ್ಯೋತಿನಗರ ವೈಶ್ಯ ಗಾಣಿಗ ಯುವ ಸೇವಾ ಸಮಿತಿಗೆ ತಾಲೂಕಿನಾದ್ಯಂತ ಶ್ರಮಿಸಿ ನೂತನ ಸದಸ್ಯರ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಸಮಿತಿಯ ಬಲವನ್ನು ಹೆಚ್ಚಿಸಲಾಗುವುದು , ನಮ್ಮ ಸಮುದಾಯಕ್ಕೆ ಸರ್ಕಾರದ ವತಿಯಿಂದ ಸಿಗಬೇಕಿರುವ ಸೌಲತ್ತುಗಳನ್ನು ಸೂಕ್ತ ರೀತಿಯಲ್ಲಿ ಸೂಕ್ತ ಸಮಯಕ್ಕೆ ತಲುಪಿಸುವ ಪ್ರಯತ್ನ ಮಾಡಲಾಗುವುದು , ಜನಸಾಮಾನ್ಯರ […]

Continue Reading

*ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಗುತ್ತಿಗೆ ಆಧಾರದ ಮೇಲೆ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಸ್ನಾತ್ತಕೋತ್ತರ ಪದವಿ (ವಿಜ್ಞಾನ/ ಸಮಾಜವಿಜ್ಞಾನ/ ಗ್ರಾಮೀಣಾಭಿವೃದ್ಧಿ/ಪರಿಸರ ವಿಜ್ಞಾನ/ಮ್ಯಾನೇಜ್ ಮೆಂಟ್) ಯು.ಜಿ.ಸಿ. ಯಿಂದ ಗುರುತಿಸಲಾದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು, ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದಾದರೂ ಕ್ಷೇತ್ರದಲ್ಲಿ ಕನಿಷ್ಠ 3-5 ವರ್ಷಗಳ ಅನುಭವ ಹೊಂದಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಡಿ.ಡಿ.ಎಂ.ಪಿ. ಮತ್ತು […]

Continue Reading