*ರಾಜ್ಯ ಮಟ್ಟದ ಉದ್ಯೋಗ ಮೇಳದಲ್ಲಿ ಭಾಗವಹಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ(ನಿ)ದ ವತಿಯಿಂದ “ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳ”ವನ್ನು ಫೆಬ್ರವರಿ 26 ಹಾಗೂ 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಈ ಉದ್ಯೋಗ ಮೇಳದಲ್ಲಿ 500ಕ್ಕಿಂತ ಹೆಚ್ಚು ಖಾಸಗಿ ಉದ್ಯೋಗದಾತರು(ಕಂಪನಿಗಳು) ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲ್ಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತರ ಪದವಿ, ಇಂಜಿನಿಯರಿಂಗ್ ಹಾಗೂ ಇತರೆ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ […]

Continue Reading

ಟಾಟಾ ಸಮೂಹದ ವತಿಯಿಂದ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300ಕೋಟಿ ರೂ ಹೂಡಿಕೆ

ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಜೊತೆ ಒಡಂಬಡಿಕೆಗೆ ಸಹಿ ಹಾಕಿದರು.   ಒಡಂಬಡಿಕೆ ಪತ್ರಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲರ ಮುಂದಾಳತ್ವದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ […]

Continue Reading

ಶೌರ್ಯ, ಸಾಹಸ, ದೈರ್ಯದ ಪ್ರತಿರೂಪ ಶಿವಾಜಿ ಮಹಾರಾಜರು – ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : ಧರ್ಮದ ರಕ್ಷಣೆ ಹಾಗೂ ದೇಶಭಕ್ತಿಗೆ ಮತ್ತೊಂದು ಹೆಸರು ಛತ್ರಪತಿ ಶಿವಾಜಿ ಮಹಾರಾಜರು . .ಅವರ ಆಡಳಿತ ವೈಖರಿ ಸರ್ವರಿಗೂ ಮಾರ್ಗದರ್ಶಕ . ಇಂದಿನ ಯುವ ಸಮುದಾಯ ದೇಶಪ್ರೇಮ ಸ್ವಾಮಿನಿಷ್ಠೆ ಏನೆಂಬುದು ಛತ್ರಪತಿ ಶಿವಾಜಿ ಮಹಾರಾಜರಿಂದ ಕಲಿಯಬೇಕಿದೆ ಎಂದು ಬಿಜೆಪಿ ರಾಜ್ಯ ಯುವಘಟಕ ಅಧ್ಯಕ್ಷರು ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ತಿಳಿಸಿದರು . ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಇಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ […]

Continue Reading

ಅಸ್ಪೃಶ್ಯತೆ ವಿರುದ್ದ ಕೆ ಡಿ ಎಸ್ ಎಸ್ ಪ್ರತಿಭಟನೆ : ಸಾಂಕೇತಿಕವಾಗಿ ಕ್ಷೌರ ಮಾಡಿಸಿ ಅಸ್ಪೃಶ್ಯತೆಗೆ ಅಂತ್ಯ ಹಾಡಿದ ದಲಿತ ಮುಖಂಡರು

ತಾಲ್ಲೂಕಿನ ಕಾಡನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ದಲಿತರಿಗೆ ಕ್ಷೌರಿಕ ಮಾಡದೇ ಅಸ್ಪೃಶ್ಯತೆ ಮೇರೆಯಲಾಗುತ್ತಿತ್ತು ಆದರೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದಲಿತ ಮುಖಂಡರು ಕ್ಷೌರಿಕ ಅಂಗಡಿಯನ್ನು ಮುತ್ತಿಗೆ ಹಾಕಲಾಗಿ ಮುಂದೆ ಈ ರೀತಿ ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದು ಅಂಗಡಿ ಮಾಲೀಕರು ಹಾಮಿ ಕೊಟ್ಟಿದ್ದಾರೆ . ಸಾಂಕೇತಿಕವಾಗಿ ನಮ್ಮ ದಲಿತ ಮುಖಂಡರೇ ಕ್ಷೌರ ಮಾಡಿಸಿಕೊಳ್ಳುವ ಮೂಲಕ ಈ ಅನಿಷ್ಠ ಪದ್ಧತಿಯನ್ನು ಅಂತ್ಯಗಳಿಸಿದ್ದೇವೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷರಾದ ರಾಮು ತಿಳಿಸಿದರು   […]

Continue Reading

ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಕುರಿತು ಜನತೆಗೆ ಮಾಹಿತಿ : ಸಮಾವೇಶದಲ್ಲಿ ಸಚಿವರಾದ ಕೆ.ಎಚ್ ಮುನಿಯಪ್ಪ ಸೇರಿದಂತೆ ಹಲವು ಗಣ್ಯರು ಭಾಗಿ

ರಾಜ್ಯದ ಜನತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಗ್ಯಾರೆಂಟಿ ಯೋಜನೆಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದೆ .ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ನೀಡಿರುವ ಅವಕಾಶವನ್ನು ಪ್ರತಿ ಮನೆ ಬಾಗಿಲಿಗೆ 5 ಯಶಸ್ವಿ ಯೋಜನೆಗಳನ್ನು ತಲುಪಿಸುವ ಮೂಲಕ ಸದ್ಭಳಕೆ ಮಾಡಿಕೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಕೆ ಏಚ್ ಮುನಿಯಪ್ಪ ತಿಳಿಸಿದರು   ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಜನರಿಗೆ ಮಾಹಿತಿ ನೀಡುವ ಸಮಾವೇಶವನ್ನು […]

Continue Reading

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಪರೇಡ್.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರೌಡಿ ಶೀಟರ್ ಗಳ ಪರೇಡ್ ನಲ್ಲಿ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ರಾಜಕೀಯ ಸಮಾರಂಭಗಳು, ರಾಜಕೀಯ ಮಾಡುವ ವೇಳೆ ಕಾನೂನು ಬಾಹಿರ, ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಕಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗ್ರಾಮಾಂತರ ಠಾಣಾ ಆರಕ್ಷಕ ನಿರೀಕ್ಷಕ ಸಾದಿಕ್ ಪಾಷ ರೌಡಿಶೀಟರ್ ಗಳಿಗೆ ಎಚ್ಚರಿಕೆ ನೀಡಿದರು.   ಜೀವನದಲ್ಲಿ ಬದಲಾವಣೆ ಸಹಜ ಹೀಗಾಗಿ ಭವಿಷ್ಯದಲ್ಲಿ ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ […]

Continue Reading

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ : ಮೃತ ಮೀನುಗಳನ್ನು ತೆರವುಗೊಳಿಸುವಂತೆ ಸ್ಥಳೀಯರ ಅಗ್ರಹ

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮವಾಗಿದೆ. ಕಸಬಾ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕೆರೆಯಲ್ಲಿ ಸಾವಿರಾರು ಮೀನುಗಳ ಸಾವಿನಿಂದ ದರ್ವಾಸನೆ ಉಂಟಾಗಿದ್ದು. ಕಳೆದ ಎರಡು ಮೂರು ದಿನಗಳ ಹಿಂದೆ ಕೆರೆಗೆ ಕಾರ್ಖಾನೆಗಳ ರಾಸಯನಿಕ ಮಿಶ್ರಿತ ತ್ಯಾಜ್ಯ ನೀರು ಹರಿದಿದ್ದರಿಂದ ಕಾರಣ ಮೀನುಗಳು ಸಾವನ್ನಪ್ಪಿವೆ ಎಂದು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ […]

Continue Reading

ಗ್ರಾಹಕರ ಕುಂದು ಕೊರತೆ ಸಭೆ : ವಿದ್ಯುತ್ ಸಮಸ್ಯೆಗೆ ಸೂಕ್ತ ಪರಿಹಾರ ನೀಡುವಂತೆ ರೈತರ ಮನವಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಗ್ರಾಮೀಣಾ ಉಪ ವಿಭಾಗ ಕಚೇರಿಯ ವತಿಯಿಂದ ಗ್ರಾಹಕರ ಕುಂದು ಕೊರತೆ ಸಭೆ ಆಯೋಜನೆ ಮಾಡಲಾಗಿತ್ತು . ಸಭೆಯಲ್ಲಿ ವಿದ್ಯುತ್ ಸಮಸ್ಯೆ ಕುರಿತು ಗ್ರಾಹಕರು ಹಲವು ವಿಚಾರಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ವ್ಯಕ್ತಪಡಿಸಿದರು ಸಭೆಯನ್ನು ತಾಲ್ಲೂಕಿನ ಕಾರ್ಯಪಾಲಕ ಇಂಜಿನಿಯರ್ ಧನಂಜಯ ರವರ ನೇತೃತ್ವದಲ್ಲಿ ಕರೆಯಲಾಗಿದ್ದು ಗ್ರಾಹಕರ ಸಮಸ್ಯೆಗಳಿಗೆ ಸೂಕ್ತ ಸೇವೆ ಒದಗಿಸುವಂತೆ ಸೂಚನೆ ನೀಡಲಾಯಿತು .ಸಭೆಯಲ್ಲಿ ರೈತರು ಮಾತನಾಡಿ ವಿದ್ಯುತ್ ಸರಬರಾಜು ಮಾಡುವಲ್ಲಿ ವ್ಯತ್ಯಯ ವಾಗುತ್ತಿದ್ದು ಅವಶ್ಯಕವಿರುವ ವಿಧ್ಯುತ್ ಸಹ ಸಿಗುತ್ತಿಲ್ಲ ಕನಿಷ್ಠ ಪಕ್ಷ […]

Continue Reading

2024-25ನೇ ಸಾಲಿಗೆ 3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ ಅವರು ರಾಜ್ಯದ ಬಡವರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ವರ್ಗದವರು, ಅಲ್ಪಸಂಖ್ಯಾತರಿಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚು ಮಾಡುವ ಪ್ರಯತ್ನ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ಪ್ರಯತ್ನವೂ ಬಜೆಟ್ ನಲ್ಲಿ ಆಗಿದೆ.   ದೇಶದಲ್ಲಿ ನಿರುದ್ಯೋಗ, ಹಣದುಬ್ಬರ ಸಮಸ್ಯೆಗಳಿಂದ ಬಡವರು ಜೀವನ ಸಾಗಿಸುವುದು ಕಷ್ಟವಾಗಿದೆ. ಬಡವರ ಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಲು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಈ […]

Continue Reading

ನೆಚ್ಚಿನ ನಾಯಕನಟ ದರ್ಶನ್ ಹುಟ್ಟುಹಬ್ಬದ ಸಂಭ್ರಮ : ಶಾಲಾ ಮಕ್ಕಳಿಗೆ ಸಿಹಿ ಹಂಚಿದ ಅಭಿಮಾನಿಗಳು

ರಾಜ್ಯಾದ್ಯಂತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ಆಚರಣೆಯನ್ನು ಅಭಿಮಾನಿಗಳು ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದು. ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ದರ್ಶನ್ ಅಭಿಮಾನಿಗಳಿಂದ ವಿಶೇಷ ರೀತಿಯಲ್ಲಿ ತಮ್ಮ ನೆಚ್ಚಿನ ನಾಯಕ ನಟನ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಯಿತು. ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಹಚ್ಚುವ ಮೂಲಕ ವಿಶೇಷವಾಗಿ ನವೀನ್ ಮತ್ತು ತಂಡ ನಟದರ್ಶನ್ ರವರ ಹುಟ್ಟು ಹಬ್ಬವನ್ನು ಆಚರಿಸಿದರು.   ಈ ಸಂದರ್ಭದಲ್ಲಿ ನವೀನ್ ಮಾತನಾಡಿ ನಟ ದರ್ಶನ್ ಸದಾ ರೈತರ ಪರ ಹಾಗೂ […]

Continue Reading