ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೇಲೆ ಕುಮಾರಸ್ವಾಮಿಯವರಿಗೆ ಒಲವು : ಚಿಕ್ಕಬಳ್ಳಾಪುರದಿಂದ ಸ್ಪರ್ಧೆ ಮಾಡ್ತಾರ ಮಾಜಿ ಮುಖ್ಯಮಂತ್ರಿ…??

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕುರಿತು ಅಪಾರ ಒಲವಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಿಜೆಪಿ ವರಿಷ್ಠರ ಮನವಿ ಮೇರೆಗೆ ಕುಮಾರಸ್ವಾಮಿಯವರು ಚಿಕ್ಕಬಳ್ಳಾಪುರದಿಂದ ಸ್ವರ್ಥಿಸುವ ಸಾಧ್ಯತೆ ಇದೆ .ಬಿಜೆಪಿ ಪಕ್ಷದಿಂದ ಸ್ವರ್ಥಿಸಲು ಈಗಾಗಲೇ ಯಲಹಂಕ ಶಾಸಕರಾದ ಎಸ್.ಆರ್. ವಿಶ್ವನಾಥ್ ಮಗ ಅಲೋಕ್ ವಿಶ್ವನಾಥ್ ಹಾಗೂ ಮಾಜಿ ಸಚಿವರಾದ ಡಾ.ಕೆ.ಸುಧಾಕರ್ ನಡುವೆ ಪೈಪೋಟಿ ನಡೆಯುತ್ತಿದೆ . ವರಿಷ್ಠರ ಮನವಿ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸ್ಪರ್ಧಿಸಿದ್ದೆ ಆದಲ್ಲಿ , ಕಾರ್ಯಕರ್ತರು ಒಮ್ಮತದಿಂದ ಶ್ರಮಿಸಿ […]

Continue Reading

ಮಾರ್ಚ್ 8 ರಂದು ಹಳ್ಳಿಕಾರ್ ಫ್ಯಾಷನ್ ಶೋ : ನೂತನ ಕಾರ್ಯಕ್ರಮಕ್ಕೆ ನವ ಕರ್ನಾಟಕ ಯುವಶಕ್ತಿ ವೇದಿಕೆ ಪ್ಲಾನ್

ದೊಡ್ಡಬಳ್ಳಾಪುರ(ತೂಬಗೆರೆ) : ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಮಾರ್ಚ್ 8 2024 ರಂದು ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಹಳ್ಳಿಕಾರ್ ಹಸುಗಳ ಸೌಂದರ್ಯ ಪ್ರದರ್ಶನ ಸ್ಪರ್ಧೆ ಆಯೋಜಿಸಲಾಗಿದೆ.   ಈ ಕುರಿತ ಸುದ್ದಿಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷರಾದ ಹಳ್ಳಿ ರೈತ ಅಂಬರೀಶ್ ರವರು ಮಾತನಾಡಿ ಮಹಾ ಶಿವರಾತ್ರಿ ಅಂಗವಾಗಿ ಹಳ್ಳಿಕಾರ್ ಹಸುಗಳ ಫ್ಯಾಶನ್ ಶೋ ಪ್ರಸ್ತುತಪಡಿಸಲು ನಾವು ಉತ್ಸುಕರಾಗಿದ್ದೇವೆ. ಈ ಕಾರ್ಯಕ್ರಮದ ಮೂಲಕ ಹಳ್ಳಿಕಾರ್ ತಳಿಯ ಸೌಂದರ್ಯ ಮತ್ತು ಸಾಂಸ್ಕೃತಿಕ ಮಹತ್ವವನ್ನು […]

Continue Reading

ಸಿ ಆರ್ ಪಿ ಎಫ್ ಪೆರೇಡ್ ಗ್ರೌಂಡ್ ನಲ್ಲಿ 5ನೇ ವರ್ಷದ ಸ್ಮರಣಾಂಜಲಿ ಕಾರ್ಯಕ್ರಮ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿ

ಕೇಂದ್ರೀಯ ಅರಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2019ನೇ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿ ಆರ್ ಪಿ ಎಫ್ ನ ವೀರ ಯೋಧರ ಹಾಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲಾ ಹುತಾತ್ಮ ಯೋಧರಿಗೂ 5ನೇ ವಾರ್ಷಿಕ ಸ್ಮರಣಾಂಜಲಿ ಕಾರ್ಯಕ್ರಮವನ್ನು ಗ್ರೂಪ್ ಸೆಂಟರ್, ಸಿ ಆರ್ ಪಿ ಎಫ್ ಕ್ಯಾಂಪಸ್ ದೊಡ್ಡಬಳ್ಳಾಪುರ ರಸ್ತೆ ,ಯಲಹಂಕ ಬೆಂಗಳೂರು ಇಲ್ಲಿ ದಿನಾಂಕ 14 2 2024ರಂದು ಆಯೋಜನೆ […]

Continue Reading

ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ – ಪ್ರಿಯಾಂಕ್ ಖರ್ಗೆ

ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಂತ್ರಿಗಳಾದ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.   ಈ ಕುರಿತು ಮಾತನಾಡಿರುವ ಅವರು ನಾನು ಅನೇಕ ಬಾರಿ ಹೇಳಿರುವಂತೆ ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ. ಜನರ ಸಂಕಷ್ಟಗಳನ್ನು ಆಲಿಸಿ ಪ್ರಾಮಾಣಿಕವಾಗಿ ಸ್ಪಂದಿಸುವ ಸರ್ಕಾರ. ಕನ್ನಡಿಗರ ಹಿತಾಸಕ್ತಿ ಕಾಪಾಡಲು ಸರ್ವ ರೀತಿಯಲ್ಲೂ ಶ್ರಮಿಸುತ್ತಿರುವ ಸಾರ್ಥಕ ಸರ್ಕಾರ.   ನಿನ್ನೆಯಷ್ಟೆ ದೆಹಲಿಯಲ್ಲಿ ಒಕ್ಕೂಟ ಸರ್ಕಾರದ ಆರ್ಥಿಕ ಅನ್ಯಾಯಗಳ ವಿರುದ್ಧ ಘರ್ಜಿಸಿದ್ದ ನಿಮ್ಮ ಸರ್ಕಾರ, ಇಂದು ವಿಧಾನ […]

Continue Reading

ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ: ವಿಜಯೇಂದ್ರ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಭಾಗಿ

ಯಶವಂತಪುರ ವಿಧಾನಸಭಾ ಕ್ಷೇತ್ರದ ಗೊಲ್ಲಹಳ್ಳಿ ಗ್ರಾಮದಲ್ಲಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ರವರಿಂದ “ಗ್ರಾಮ ಚಲೋ ಅಭಿಯಾನಕ್ಕೆ”ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಧಾನಿ ಶ್ರೀ ನರೇಂದ್ರಮೋದಿ ಜೀ ಅವರ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡ ಜೀ ಅವರುಗಳ ಅಪೇಕ್ಷೆಯಂತೆ ಫೆಬ್ರವರಿ 9 ರಿಂದ 11 ರವರೆಗೆ 3 ದಿನಗಳ ಕಾಲ ನಡೆಯಲಿರುವ “ಗ್ರಾಮ ಚಲೋ ಅಭಿಯಾನಕ್ಕೆ” ಯಶವಂತಪುರ ವಿಧಾನಸಭಾ ಕ್ಷೇತ್ರದ ಗೊಲ್ಲಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.   ರಾಜ್ಯದ 28 ಸಾವಿರಕ್ಕೂ […]

Continue Reading

ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದಿರುವ ಆಡಳಿತ ಯಂತ್ರಕ್ಕೆ ಜೀವಂತ ನಿದರ್ಶನ ಈ ಜನಸ್ಪಂದನ ಕಾರ್ಯಕ್ರಮ – ಆರ್. ಅಶೋಕ್

ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಗುಡುಗಿದ ವಿಪಕ್ಷ ನಾಯಕ ಆರ್ ಅಶೋಕ್   ಸಿಎಂ ಸಿದ್ದರಾಮಯ್ಯನವರ ಮೇಲೆ ಎಕ್ಸ್ ಸಂದೇಶದ ಮೂಲಕ ವಾಗ್ದಾಳಿ ನೆಡೆಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ವಿಧಾನಸೌಧದ ಮುಂದೆ ನಡೆಯುತ್ತಿರುವ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಅದೇನೋ ಮಹಾ ದೊಡ್ಡ ಸಾಧನೆ ಅಂತ ಮೆರೆಯುತ್ತಿದ್ದೀರಲ್ಲ ಸಿಎಂ ಸಿದ್ದರಾಮಯ್ಯ ನವರೇ, ಅಸಲಿಗೆ ಅದು ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದಿರುವ ಆಡಳಿತ ಯಂತ್ರಕ್ಕೆ ಜೀವಂತ ನಿದರ್ಶನ.   ರಾಜ್ಯದಲ್ಲಿ 34 ಸಂಪುಟ ಸಚಿವರಿದ್ದಾರೆ. ಪ್ರತೀ ಜಿಲ್ಲೆಗೆ […]

Continue Reading

COPTA ಕಾಯ್ದೆ ತಿದ್ದುಪಡಿ : ಕರ್ನಾಟಕದಲ್ಲಿ ಇನ್ಮುಂದೆ ಹುಕ್ಕಾ ಬ್ಯಾನ್

ಸಾರ್ವಜನಿಕರ ಆರೋಗ್ಯ ಮತ್ತು ಯುವ ಜನತೆಯ ಭವಿಷ್ಯದ ರಕ್ಷಣೆಗಾಗಿ ರಾಜ್ಯದಾದ್ಯಂತ ಹುಕ್ಕಾ ನಿಷೇಧ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮಂತ್ರಿಗಳಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.   ಹುಕ್ಕಾ ಸೇವನೆಯಿಂದ ಜನರ ಆರೋಗ್ಯದ ಮೇಲೆ ಉಂಟಾಗುತ್ತಿರುವ ಗಂಭೀರ ಪರಿಣಾಮಗಳನ್ನು ಗಮನದಲ್ಲಿರಿಸಿ ರಾಜ್ಯದಾದ್ಯಂತ ಹುಕ್ಕಾ ಸೇವನೆಯನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಲಾಗಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆಗೆ (COTPA) ತಿದ್ದುಪಡಿ ಮಾಡುವ ಮೂಲಕ ಹುಕ್ಕಾ ಸೇವನೆಯ ನಿಷೇಧವನ್ನು ಕರ್ನಾಟಕದಲ್ಲಿ ಜಾರಿಗೆ ತರುತ್ತಿದ್ದೇವೆ.   ನಮ್ಮ ಮುಂದಿನ […]

Continue Reading

ರಾಜ್ಯದ ಪಾಲಿಗೆ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆ ಬರದೆ ಅನ್ಯಾಯವಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿದ ಅವರು ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ. 2017-18 ರಿಂದ ಇಲ್ಲಿಯವರೆಗೆ ರಾಜ್ಯದ ಪಾಲಿಗೆ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆ ಬರದೇ ಅನ್ಯಾಯವಾಗಿದೆ. ರಾಜ್ಯಕ್ಕೆ ಈ ಮಟ್ಟದ ನಷ್ಟವಾಗಿರುವುದನ್ನು ಸರಿಯೆಂದು ಬಿಜೆಪಿಯವರು ಹೇಳುತ್ತಾರೆಯೇ? ನಿನ್ನೆಯ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅಧಿವೇಶನದಲ್ಲಿ ಮಾತನಾಡುತ್ತಾ, ರಾಜ್ಯ ತನ್ನ ಹಕ್ಕಿನ ಬಗ್ಗೆ ಪ್ರಶ್ನಿಸಿರುವುದನ್ನು ದೇಶ ವಿಭಜನೆ ಮಾಡುವ ವಿಷಯ ಎಂದು ವ್ಯಾಖ್ಯಾನಿಸಿದ್ದಾರೆ.   ಪ್ರತಿಭಟನೆ ಮಾಡಿದ ರಾಜ್ಯದ ನಡೆಯನ್ನು ಟೀಕಿಸಿದ […]

Continue Reading

25 ದಿನಕ್ಕೆ ಕಾಲಿಟ್ಟ ರೈತರ ಹೋರಾಟ: ಕೇರ್ ಮಾಡದ ಕೆಐಎಡಿಬಿ ಅಧಿಕಾರಿಗಳು

ದೊಡ್ಡಬಳ್ಳಾಪುರ : ಕಳೆದ 25 ದಿನಗಳಿಂದ ರೈತರು ಬಿಸಿಲಿನಲ್ಲಿ ದೂಳಿನ ವಾತಾವರಣದಲ್ಲಿ ಧರಣಿ ನಡೆಸುತ್ತಿದ್ದೇವೆ . ರೈತರ ಕುರಿತು ಕಿಂಚಿತ್ತೂ ಕರುಣೆ ಇಲ್ಲದ ಕೆಐಎಡಿಬಿ ಕನಿಷ್ಠ ಸೌಜನ್ಯಕ್ಕಾದರೂ ಸ್ಪಂದಿಸಿಲ್ಲ.ರೈತರ ಫಲವತ್ತಾದ ಭೂಮಿಯೊಂದಿಗೆ ದಂಧೆಗೆ ಇಳಿದಿರುವ ಅಧಿಕಾರಿಗಳಿಗೆ ರೈತರ ನೋವು ಅರ್ಥವಾಗುತ್ತಿಲ್ಲ ಎಂದು ರೈತ ಮುಖಂಡ ಆನಂದ್ ತಮ್ಮ ನೋವನ್ನು ವ್ಯಕ್ತಪಡಿಸಿದರು .   ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದ ಕಾಮನ ಬಂಡೆ ( ಕಡ್ಡಿಪುಡಿ ಕಾರ್ಖಾನೆ ಸಮೀಪ) ಕೆಐಎಡಿಬಿ ವಿರುದ್ಧ ಭೂ ಸ್ವಾಧೀನ ಕುರಿತಂತೆ ಕೋನಘಟ್ಟ, ಕೋಡಿಹಳ್ಳಿ, […]

Continue Reading

ರೈತರಿಂದ ಮೌನ ಪ್ರತಿಭಟನೆ : ದೊಡ್ಡಬಳ್ಳಾಪುರಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ವರ್ಗಾಯಿಸುವಂತೆ ಒತ್ತಾಯ

ದೇವನಹಳ್ಳಿ : ಇಂದು ನಾವು ಸಾಂಕೇತಿಕವಾಗಿ ಬಾಯಿಗೆ ಬಟ್ಟೆ ಕಟ್ಟಿಕೊಳ್ಳುವ ಮೂಲಕ ಮೌನ ಪ್ರತಿಭಟನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ನಡೆಸಿದ್ದೇವೆ ಕಾರಣ ನಮ್ಮ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಇಲ್ಲದಿರುವುದು. ಆದಷ್ಟು ಬೇಗ ನಮ್ಮ ತಾಲ್ಲೂಕಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಘಟಕವನ್ನು ನೀಡುವ ಮೂಲಕ ರೈತರಿಗೆ ಜಿಲ್ಲಾಧಿಕಾರಿಗಳು ನೆರವಾಗಬೇಕೆಂದು ರೈತ ಮುಖಂಡ ವಸಂತ್ ಕುಮಾರ್ ಒತ್ತಾಯಿಸಿದರು .   ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕ ತುಮಕೂರು ಹಾಗೂ ಮಜಾರಹೊಸಹಳ್ಳಿ ಗ್ರಾಮಗಳ ಕೆರೆಗಳು ಕಾರ್ಖಾನೆಗಳ ತ್ಯಾಜ್ಯ ನೀರಿನಿಂದ ಸಂಪೂರ್ಣ […]

Continue Reading