ನಮ್ಮ ಭಾಷೆ,ಸಂಸ್ಕೃತಿ,ನೆಲ, ಜಲಕ್ಕೆ ಗೌರವ ಕೊಡಿ – ಎ. ನಂಜಪ್ಪ

ದೊಡ್ಡಬಳ್ಳಾಪುರ ( ವಿಜಯಮಿತ್ರ ) : ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡಕ್ಕೆ ಆದ್ಯತೆ ನೀಡಬೇಕು ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಪಾಲಿಸುವಂತೆ ಅಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಅಂಗಡಿ, ಆಸ್ಪತ್ರೆ, ಹೋಟೆಲ್ ಸೇರಿದಂತೆ ಹಲವು ವಾಣಿಜ್ಯ ಮಳಿಗೆಗಳಿಗೆ ಭೇಟಿಕೋಟ್ಟು ತಮ್ಮ ನಾಮಫಲಕಗಳಲ್ಲಿ ಕನ್ನಡ ಬಳಸುವಂತೆ ಒತ್ತಾಯಿಸಲಾಯಿತು   ಕನ್ನಡಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಎ.ನಂಜಪ್ಪ ತಾಲ್ಲೂಕಿನಲ್ಲಿ […]

Continue Reading

ಮಹಿಳೆಯರು ಪುರುಷರಷ್ಟೇ ಸಮಾನವಾಗಿ ಎಲ್ಲರಂಗಗಳಲ್ಲೂ ಸಾಧನೆ ಮಾಡಿರುವುದನ್ನು ನಾವು ನೋಡಬಹುದು – ಎಂ ನಾಗಮಣಿ

ದೊಡ್ಡಬಳ್ಳಾಪುರ (ವಿಜಯಮಿತ್ರ) : ಮಹಿಳೆಯರು ವ್ಯಾಪಾರ, ಕ್ರೀಡೆ, ಸ್ವ ಉದ್ಯೋಗ, ಇತ್ಯಾದಿ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಇಂದು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಸಹಾಯಕ ಯೋಜನಾಧಿಕಾರಿ ಎಂ ನಾಗಮಣಿ ಹೇಳಿದರು. ಅವರು ತಾಲ್ಲೂಕಿನ ಮದುರೆ ಹೋಬಳಿಯ ಕೊಡಿಹಳ್ಳಿಪಾಳ್ಯ ಗ್ರಾಮದಲ್ಲಿ ಚೆನ್ನದೇವಿ ಅಗ್ರಹಾರ ಗ್ರಾಮ ಪಂಚಾಯತಿ ಹಾಗೂ ಜೈಭಾರತಿ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ‌ ದಿನಾಚರಣೆಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಮಹಿಳಾ ದಿನದಂದು ಮಹಿಳೆಯರ ಹಲವು ಸಾಧನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.ಮಹಿಳೆಯರು ಸ್ವಾವಲಂಬಿ ಬದುಕಿನ ಕಡೆ […]

Continue Reading

ಮಾರ್ಚ್ 19ರಂದು ನಡೆಯಲಿದೆ ಇತಿಹಾಸ ಪ್ರಸಿದ್ಧ ಮದುರೆ ಶನಿಮಹಾತ್ಮ ಸ್ವಾಮಿಯ 69ನೇ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ, (ಮಾ.15)ವಿಜಯ ಮಿತ್ರ : ಚಿಕ್ಕಮಧುರೆ (ಕನಸವಾಡಿ) ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ಬ್ರಹ್ಮರಥೋತ್ಸವ ಮಾರ್ಚ್ 19ರಂದು ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಧರ್ಮದರ್ಶಿ ಕೆ.ವಿ.ಪ್ರಕಾಶ್ ತಿಳಿಸಿದರು. ತಾಲ್ಲೂಕಿನ ಚಿಕ್ಕಮಧುರೆಯ ಶ್ರೀ ಶನಿಮಹಾತ್ಮ ಸ್ವಾಮಿ ಅನ್ನ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು ಇತಿಹಾಸ ಪ್ರಸಿದ್ಧ ಬ್ರಹ್ಮರಥೋತ್ಸವ ಕಾರ್ಯಕ್ಕೆ ಸಕಲ ಸಿದ್ಧತೆಗಳು ನೆಡೆದಿದ್ದು. 69ನೇ ಬ್ರಹ್ಮ ರಥೋತ್ಸವ  ಕಾರ್ಯಕ್ರಮವು ಮಾರ್ಚ್ 19ರಂದು ಮಧ್ಯಾಹ್ನ 01-10 ರಿಂದ 01-55ರ ವರೆಗೆ ಸಲ್ಲುವ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ನೆಡೆಯಲಿದೆ […]

Continue Reading

*ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ : ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ ಎಸ್ ಸುರೇಶ್ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ*

ದೊಡ್ಡಬಳ್ಳಾಪುರ, ಮಾ.14 (ವಿಜಯ ಮಿತ್ರ ಸುದ್ದಿ ) : ಹಾಲು ಉತ್ಪಾದಕ ರೈತರನ್ನು ಹೆಚ್ಚಿಸುವುದು ನಮ್ಮ ಮುಂದಿನ ಗುರಿಯಾಗಿದೆ. ಸಂಘದ ಅಭಿವೃದ್ಧಿಗೆ ಹಲವು ವಿಶೇಷ ಯೋಜನೆ ರೂಪಿಸುವ ಮೂಲಕ ಶ್ರಮಿಸಲಾಗುವುದು ಎಂದು ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಬಿ ಎಸ್ ಸುರೇಶ್ ತಿಳಿಸಿದರು. ತಾಲ್ಲೂಕಿನ ರಾಜಘಟ್ಟ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಕುರಿತು ಚುನಾವಣೆ ನೆಡೆಸಲಾಯಿತು . ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೈತ್ರಿ ಅಭ್ಯರ್ಥಿಗಳಾಗಿ […]

Continue Reading

31 ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ : ಫಲಾನುಭವಿಗಳಿಗೆ ಗಣ್ಯರಿಂದ ಶುಭ ಹಾರೈಕೆ

ಸ್ಥಳೀಯ ಶಾಸಕರ ಸಹಯೋಗದೊಂದಿಗೆ 31 ವಿಕಲಚೇತನರ ದೈನಂದಿಕ ಅನುಕೂಲಕ್ಕಾಗಿ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಗಳಾದ ಕೆ.ಎಚ್. ಮುನಿಯಪ್ಪ ತಿಳಿಸಿದರು     ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ದೈಹಿಕ ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ […]

Continue Reading

ಸಂಸದ ಅನಂತ್ ಕುಮಾರ್ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಸಜ್ಜಾದ ಕೆಪಿಸಿಸಿ

ಸಂವಿಧಾನ ತಿದ್ದುಪಡಿ ಕುರಿತು ಸಂಸದರಾದ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ಜಿ.ಲಕ್ಷ್ಮೀಪತಿ ಹೇಳಿದರು.     ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂವಿಧಾನವನ್ನು ತಿದ್ದುಪಡಿ ಮಾಡಲು ಬಹುಮತದ ಅಗತ್ಯ ಇದೆ. ಹೀಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲಲೇ ಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದು ಅವರ ಹೇಳಿಕೆ ಸಂವಿಧಾನದಕ್ಕೆ ಮಾಡಿದ ಅಪಮಾನ […]

Continue Reading

ಪ್ರತಿಷ್ಠಿತ ಗೀತಂ ಕಾಲೇಜಿನಲ್ಲಿ ಆಂಧ್ರ ಮೂಲದ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ : ತಾಲ್ಲೂಕಿನ ನಾಗದೇನಹಳ್ಳಿ ಸಮೀಪದ ಗೀತಮ್ ಕಾಲೇಜಿನಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.   ಆಂಧ್ರ ಮೂಲದ ವಿದ್ಯಾರ್ಥಿ ದಾಸರಿ ಬ್ರಹ್ಮಾ ಸಾಯಿ ರೆಡ್ಡಿ(19) ಮೃತಪಟ್ಟ ದುರ್ದೇವಿ ಸ್ಥಳೀಯ ಪ್ರತಿಷ್ಠಿತ ಗೀತಮ್ ಕಾಲೇಜಿನಲ್ಲಿ ಬಿ.ಟೆಕ್ ಪದವಿಯನ್ನು ಓದುತ್ತಿರುವ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು. ಈ ಕುರಿತು ಸೂಕ್ತ ತನಿಖೆ ಆಗಬೇಕಿದೆ ಎಂದು ಸ್ಥಳೀಯರು ಅಗ್ರಹಿಸಿದ್ದಾರೆ.   ಕಾಲೇಜು ವಿದ್ಯಾರ್ಥಿಗಳ ಮೊಬೈಲ್ ನಲ್ಲಿ ವಿದ್ಯಾರ್ಥಿ ದಾಸರಿ ಬ್ರಹ್ಮಾ ಸಾಯಿ ರೆಡ್ಡಿಯ ಮೃತ ದೇಹವನ್ನು ಕೊಂಡೊಯ್ಯುತ್ತಿರುವ ದೃಶ್ಯಾವಳಿಗಳು […]

Continue Reading

*ನಾಮಫಲಕಗಳಲ್ಲಿ ಕನ್ನಡ ಬಳಕೆ ಕುರಿತು ಜಿಲ್ಲಾಧಿಕಾರಿಗಳ ಆದೇಶ ಸ್ವಾಗತರ್ಹ : ಇದು ನಮ್ಮ ಹೋರಾಟಕ್ಕೆ ಸಿಕ್ಕ ಪ್ರತಿಫಲ – ಪುರುಷೋತ್ತಮ್ ಗೌಡ*

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಕನ್ನಡ ಭಾಷೆಯನ್ನು ಫಲಕಗಳ ಮೇಲ್ಬಾಗದಲ್ಲಿ ಶೇ 60%ರಷ್ಟು ಕಾಣುವಂತೆ ಕಡ್ಡಾಯವಾಗಿ ಅನುಷ್ಠಾನಕ್ಕೆ ತರಲು ಜಿಲ್ಲಾಧಿಕಾರಿ ಶಿವಶಂಕರ್ ಆದೇಶ ಮಾಡಿದ್ದಾರೆ.   ತಮ್ಮ ಆದೇಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ರಾಜ್ಯ ಸರ್ಕಾರದ ಇಲಾಖೆಗಳು, ಸ್ವಾಯುತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಗಳು ಇತರೆ ಹಣಕಾಸು ಸಂಸ್ಥೆಗಳು, ಖಾಸಗಿ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ […]

Continue Reading

ಕರ್ನಾಟಕ ಯಾದವ ಯುವ ವೇದಿಕೆ ವತಿಯಿಂದ ಮಹಿಳಾ ದಿನದ ಆಚರಣೆ : ಮಹಿಳೆಯರಿಗಾಗಿ ವಿಶೇಷ ಕ್ರೀಡಾಕೂಟ ಆಯೋಜನೆ

ಕರ್ನಾಟಕ ಯಾದವ ಯುವ ವೇದಿಕೆ ರಾಜ್ಯ ಮಹಿಳಾ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲೂಕಿನ ಭೂಮೇನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿತ್ತು.   ಗ್ರಾಮದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಸಂಗೀತ ಕುರ್ಚಿ, ಬಾಟಲಿಗೆ ನೀರು ತುಂಬಿಸುವ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಸ್ಪರ್ಧೆಯಲ್ಲಿ ಜಯಗಳಿಸಿದ ಹಾಗೂ ಭಾಗಿಯಾದ ಎಲ್ಲಾ ಮಹಿಳೆಯರಿಗೂ ಬಹುಮಾನ ವಿತರಣೆ ಮಾಡಲಾಯಿತು.   ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಮಾಜಿ ಸದಸ್ಯರು, ವಕೀಲರು ಆದ ಕಣಿವೇಪುರ ಸುನಿಲ್ ಕುಮಾರ್ ಮಾತನಾಡಿ ನಮ್ಮ ವೇದಿಕೆ ವತಿಯಿಂದ […]

Continue Reading

*ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 12 : “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022” ನ್ನು ಸಮರ್ಪಕವಾಗಿ ಜಾರಿಗೊಳಿಸುವ ಸಂಬಂಧ ಹಾಗೂ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ವಿಧೇಯಕ-2024” ರನ್ವಯ ಕನ್ನಡ ಭಾಷೆಯನ್ನು ಫಲಕಗಳ ಮೇಲ್ಬಾಗದಲ್ಲಿ ಶೇ 60%ರಷ್ಟು ಕಾಣುವಂತೆ ಕಡ್ಡಾಯವಾಗಿ ಅನುಷ್ಠಾನಕ್ಕೆ ತರಲು ಆದೇಶವಾಗಿರುತ್ತದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ರಾಜ್ಯ ಸರ್ಕಾರದ ಇಲಾಖೆಗಳು, ಸ್ವಾಯುತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ […]

Continue Reading