*ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ನಮ್ಮೆಲ್ಲರ ಬೆಂಬಲ – ದಲಿತ ಮುಖಂಡ ರಮೇಶ್*

ದೊಡ್ಡಬಳ್ಳಾಪುರ ಏಪ್ರಿಲ್ 23 ( ವಿಜಯ ಮಿತ್ರ ) : ಸರ್ವಾಧಿಕಾರಿ ಧೋರಣೆಯ ಬಿಜೆಪಿ ಸರ್ಕಾರದಿಂದ ಬಿಡುಗಡೆ ಬಯಸಿ ಸಂವಿಧಾನದ ರಕ್ಷಣೆಗಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಒಮ್ಮತದಿಂದ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ನಿರ್ಣಯಿಸಿದೆ ಎಂದು ರಮೇಶ್ ರಾಮಗೊಂಡನಹಳ್ಳಿ ತಿಳಿಸಿದರು.   ನಗರದ ಖಾಸಗಿ ಹೋಟೆಲ್ ನಲ್ಲಿ ನೆಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಇಂದು ಇಡೀ ದೇಶದ ದುಡಿಯುವ ಜನರು. ದಮನಿತ ಸಮುದಾಯಗಳು, ಅಲ್ಪಸಂಖ್ಯಾತರು. ಪ್ರಜ್ಞಾವಂತರು ಒಂದಾಗಿದ್ದಾರೆ. […]

Continue Reading

*ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯಗೆ ಬೆಂಬಲ ಘೋಷಿಸಿದ ಕನ್ನಡ ಪಕ್ಷ*

ದೊಡ್ಡಬಳ್ಳಾಪುರ ಏಪ್ರಿಲ್ 20 (ವಿಜಯಮಿತ್ರ ) : ಕೇಂದ್ರ ಬಿಜೆಪಿ ಸರ್ಕಾರದ ನಿಲುವುಗಳನ್ನು ಖಂಡಿಸಿ ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಕನ್ನಡ ಪಕ್ಷದ ಬೆಂಬಲವನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಸೂಚಿಸುತ್ತಿದ್ದೇವೆ ಎಂದು ಹಿರಿಯ ಮುಖಂಡ ಸಂಜೀವ್ ನಾಯಕ್ ತಿಳಿಸಿದರು.   ನಗರದ ಕನ್ನಡ ಪಕ್ಷ ಕಚೇರಿಯಲ್ಲಿ ಆಯೋಜನೆಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು ತಾಲ್ಲೂಕಿನಲ್ಲಿ ಪಕ್ಷವನ್ನು ಕಟ್ಟಿ ಬೆಳಸಿದ ನಾಯಕ ವೆಂಕಟರೆಡ್ಡಿಯವರು ಅವರ ಆಶಾಯದಂತೆ ನಮ್ಮ ಪಕ್ಷವು ಸದಾ […]

Continue Reading

*ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರಿಗೆ ದೊಡ್ಡ ಗೆಲುವು ತಂದುಕೊಡಬೇಕು: ಪ್ರಧಾನಿ ನರೇಂದ್ರ ಮೋದಿ*

ಚಿಕ್ಕಬಳ್ಳಾಪುರ, ಏಪ್ರಿಲ್‌ 20, ( ವಿಜಯ ಮಿತ್ರ )ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರಿಗೆ ದೊಡ್ಡ ಗೆಲುವು ತಂದುಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಮತ್ತು ಜನರಿಗೆ ಮನವಿ ಮಾಡಿದ್ದಾರೆ. ಈ ಕರೆಯಿಂದಾಗಿ ಕ್ಷೇತ್ರದ ಎಲ್ಲ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರಲ್ಲಿ ಹೊಸ ಹುರುಪು ಉಂಟಾಗಿದೆ.   ಚೊಕ್ಕಹಳ್ಳಿಯಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶವು ಅತಿ ಹೆಚ್ಚು ಸಂಖ್ಯೆಯ ಜನರು ಹಾಗೂ ಕಾರ್ಯಕರ್ತರ ಪಾಲ್ಗೊಳ್ಳುವಿಕೆಯಿಂದಾಗಿ ಯಶಸ್ವಿಯಾಯಿತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ […]

Continue Reading

*ಕಾರ್ಮಿಕನ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಹಲ್ಲೆ : ಕಳ್ಳತನಕ್ಕೆ ಯತ್ನಿಸಿ ಬರೀಗೈಯಲ್ಲಿ ಎಸ್ಕಪ್ ಆದ ಕಳ್ಳರು*

ದೊಡ್ಡಬಳ್ಳಾಪುರ ಏಪ್ರಿಲ್ 20 ( ವಿಜಯಮಿತ್ರ ) : ಮುಂಜಾನೆ 5:00 ಸಮಯಕ್ಕೆ ಕೆಲಸ ಮುಗಿಸಿ ಬರುತ್ತಿದ್ದ ಕಾರ್ಮಿಕರ ಮೇಲೆ ಅಪರಿಚಿತರು ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಗರ ಹೊರಹೊಲಯದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನೆಡೆದಿದೆ.   ಜೀನ್ಸ್ ನೆಟ್ ಪ್ರೈವೇಟ್ ಲಿಮಿಟೆಡ್ ( FFI) ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ನರೇಂದ್ರಕುಮಾರ್ ವರ್ಮಾ ಹಲ್ಲೆಗೆ ಒಳಗಾದ ವ್ಯಕ್ತಿ. ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ಸಮಯದಲ್ಲಿ ನಾಲ್ವರು ಅಪರಿಚಿತರು ಕಾರಿನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಕಳ್ಳತನಕ್ಕೆ ಯತ್ನಿಸಿ […]

Continue Reading

*ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶ ನಮ್ಮದು – ಸುಧಾಭಾಸ್ಕರ್ ನಾಯ್ಕ್*

ದೊಡ್ಡಬಳ್ಳಾಪುರ ಏಪ್ರಿಲ್ 19 ( ವಿಜಯಮಿತ್ರ ) : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕರ್ನಾಟಕದಲ್ಲಿ 820 ಕೆರೆಗಳನ್ನು ರೈತರ ಹಾಗೂ ಗ್ರಾಮಸ್ಥರ ಸಹಕಾರದಿಂದ ಹೂಳೆತ್ತಲಾಗಿದೆ ಎಂದು ಯೋಜನಾಧಿಕಾರಿಗಳಾದ ಸುಧಾಭಾಸ್ಕರ್ ನಾಯ್ಕ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ಬೆಲವಂಗಲ ವಲಯದ ರಾಮೇಶ್ವರ ಗ್ರಾಮದಲ್ಲಿ *ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ* ತಾಲ್ಲೂಕು ಹಾಗೂ *ಹಾದ್ರಿಪುರ ಗ್ರಾಮ* ಪಂಚಾಯತಿ ಮತ್ತು *ಕೆರೆ ಅಭಿವೃದ್ಧಿ ಸಮಿತಿ ರಾಮೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ರಾಮೇಶ್ವರ ಗ್ರಾಮದ ಊರ […]

Continue Reading

*ನಿಜವಾದ ಮಹಿಳಾ ಸಬಲೀಕರಣ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಮಾತ್ರ: ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌*

ದೇವನಹಳ್ಳಿ, ಏಪ್ರಿಲ್‌ 18, ( ವಿಜಯಮಿತ್ರ) : ಪ್ರಧಾನಿ ನರೇಂದ್ರ ಮೋದಿಯವರು ನಿಜವಾದ ಮಹಿಳಾ ಸಬಲೀಕರಣ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ ಸರ್ಕಾರ ಕೇವಲ ಕೈಗೆ 2 ಸಾವಿರ ರೂಪಾಯಿ ನೀಡಿರುವುದನ್ನು ಬಿಟ್ಟರೆ ಮತ್ತೇನೂ ಮಾಡಿಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಏನು ಮಾಡಿದೆ ಎಂದು ಪ್ರಶ್ನಿಸಿದರೆ 2 ಸಾವಿರ ರೂಪಾಯಿ ಎನ್ನುತ್ತಾರೆ. ಆದರೆ ಕೋವಿಡ್‌ ಅವಧಿಯಿಂದ ಆರಂಭವಾಗಿ […]

Continue Reading

*ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 18(ವಿಜಯಮಿತ್ರ ) : ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.   ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು […]

Continue Reading

*ಏ.20ರಂದು ನಡೆಯುವ ತರಬೇತಿಗೆ ನಿಯೋಜಿತ ಮತಗಟ್ಟೆ ಅಧಿಕಾರಿಗಳು ಹಾಜರಾಗುವುದು ಕಡ್ಡಾಯ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಏಪ್ರಿಲ್ 18(ವಿಜಯಮಿತ್ರ ): ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿ/ನೌಕರರಿಗೆ 2 ನೇ ಹಂತದ ತರಬೇತಿಯನ್ನು ಏಪ್ರಿಲ್ 20 ರಂದು ಹಮ್ಮಿಕೊಳ್ಳಲಾಗಿದ್ದು 04 ವಿಧಾನಸಭಾ ಕ್ಷೇತ್ರವಾರು ಆಯಾ ತಾಲೂಕು ಕೇಂದ್ರಗಳಲ್ಲಿ ನಿಯೋಜಿಸಲಾದ ಮತಗಟ್ಟೆ ಮಟ್ಟದ ಅಧಿಕಾರಿಗಳು, ವಿವಿಧ ತಾಲೂಕುಗಳಿಂದ ಆಯಾ ನಿಯೋಜಿತ ತರಬೇತಿ ಸ್ಥಳಗಳಿಗೆ ಹಾಜರಾಗುವ ಸಲುವಾಗಿ ಜಿಲ್ಲೆಯ 04 ತಾಲೂಕು ಕೇಂದ್ರಗಳಿಂದ ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳಿಗೆ ತೆರಳಲು ಏಪ್ರಿಲ್ 20 ರಂದು ಬೆಳಿಗ್ಗೆ […]

Continue Reading

*ದೊಡ್ಡಬಳ್ಳಾಪುರದಲ್ಲಿ ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪರಿಶೀಲನೆ ನಡೆಸಿದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 18 (ವಿಜಯಮಿತ್ರ ): ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಯೋಜನೆಗಳನ್ನು ಪರಿಶೀಲನೆ ನಡೆಸಿದರು. ಎಸ್.ಎಸ್ ಘಾಟಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿದ ಅಮೃತ ಸರೋವರದ ಕೆರೆ ವೀಕ್ಷಿಸಿದರು. ನಂತರ ತೂಬಗೆರೆ ಗ್ರಾಮ ಪಂಚಾಯಿತಿಯಲ್ಲಿ ಕಾವನಹಳ್ಳಿ ವೆನ್ಸಾಯಿ ಪ್ಲೋರಿಟೆಕ್ (ಶ್ರೀಕಾಂತ್ ಫಾರಂ) ಭೇಟಿನೀಡಿ Cold room stagging, Refer van ಪಾಲಿಮನೆಯಲ್ಲಿ […]

Continue Reading

*ಮಹಿಳೆ ಕುರಿತು ಅವಹೇಳನಕಾರಿ ಮತ್ತು ವೈಯಕ್ತಿಕ ನಿಂದನೆ ಸಲ್ಲದು – ಪ್ರಮೀಳಾ ಮಹದೇವ್*

ದೊಡ್ಡಬಳ್ಳಾಪುರ ಏಪ್ರಿಲ್ 18 ( ವಿಜಯಮಿತ್ರ ) : ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಮಹಿಳಾ ಅಭ್ಯರ್ಥಿ ಹಾಗೂ ಮಹಿಳಾ ಮತದಾರರನ್ನು ಕುರಿತು ವೈಯಕ್ತಿಕ ನಿಂದನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಪ್ರಮೀಳಾ ಮಹದೇವ್ ತಿಳಿಸಿದರು.   ಏಪ್ರಿಲ್ 17 ರಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು ಈ ಕುರಿತು ಮಾತನಾಡಿ ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ […]

Continue Reading