*ಮಾದಕ ವಸ್ತುಗಳ ಸೇವನೆ ಹಾಗೂ ತಂಬಾಕಿನಿಂದ ಯುವ ಪೀಳಿಗೆ ದೂರ ಉಳಿಯಬೇಕು – ಡಾ. ವೀಣಾ*

ದೊಡ್ಡಬಳ್ಳಾಪುರ ಮೇ 31 ( ವಿಜಯಮಿತ್ರ ) : ತಾಲ್ಲೂಕಿನ ರೋಜಿಪುರ ದಲ್ಲಿ ತಂಬಾಕು ವಿರೋಧಿ ದಿನಾಚರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಆಚರಿಸಲಾಯಿತು.     ಯೋಜನೆಯ ತಾಲ್ಲೂಕು ಯೋಜನಾಧಿಕಾರಿಗಳಾದ ಸುಧಾ ಭಾಸ್ಕರ್ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯುವ ಜನತೆ ತಂಬಾಕು ಮಾದಕ ವಸ್ತುಗಳ ಸೇವನೆಯಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದು ,ಮನೆಗೆ ಆಸರೆಯಾಗ ಬೇಕಿದ್ದ ಮಕ್ಕಳು ಕ್ಯಾನ್ಸರ್ ನಂತಹ ಮಾರಕ ರೋಗಕ್ಕೆ […]

Continue Reading

*ಘಾಟಿ ಸುಬ್ರಹ್ಮಣ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ಎಂ ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ*

ದೊಡ್ಡಬಳ್ಳಾಪುರ ಮೇ 31 ( ವಿಜಯಮಿತ್ರ ) :ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಎಂ. ನಾರಾಯಣಸ್ವಾಮಿ ರವರು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ವಹಿಸಿಕೊಂಡಿರುತ್ತಾರೆ.   ಘಾಟಿ ಶ್ರೀ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳ ಹುದ್ದೆಯಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿ, ನಾಗರಾಜ್, ರವರು ಮೇ 31ರಂದು ವಯೋನಿವೃತ್ತಿ ಹೊಂದಲಿರುವುದರಿಂದ, ಘಾಟಿ ಶ್ರೀ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಶ್ರೀ ಎಂ.ನಾರಾಯಣಸ್ವಾಮಿ, ಕಾರ್ಯನಿರ್ವಾಹಕ […]

Continue Reading

*ತಂಬಾಕು ನಿಯಂತ್ರಣಕ್ಕೆ ಹಲವು ಕ್ರಮ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 30 (ವಿಜಯಮಿತ್ರ ): ಜಿಲ್ಲೆಯಾದ್ಯಂತ ತಂಬಾಕು ಬಳಕೆ ನಿಯಂತ್ರಿಸಲು ಹಲವು ಕ್ರಮಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕ್ರಮವಹಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ತಿಳಿಸಿದರು.   ಪ್ರತಿ ವರ್ಷ ಮೇ 31ರಂದು “ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. “ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು”. ಈ ವರ್ಷದ”ವಿಶ್ವ ತಂಬಾಕು ರಹಿತ ದಿನಾಚರಣೆಯ ಧೈಯ ವಾಕ್ಯ. ಈ […]

Continue Reading

*ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 30(ವಿಜಯಮಿತ್ರ ):- 2024-25 ನೇ ಸಾಲಿನ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆಗೆ (NOS) ಆನೆಲೈನ್ನಲ್ಲಿ https://overseas.tribal.gov.in ವೆಬ್ಸೈಟ್ ಮೂಲಕ ಅರ್ಜಿಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನ ಮೇ 31 ಆಗಿರುತ್ತದೆ. ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಸಲ್ಲಿಸಲು 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ನಿರ್ದೇಶಕರವರ ಕಛೇರಿ, ನಂ.34ಲೋಟಸ್ ಟವರ್ಸ ಮೊದಲನೇ ಮಹಡಿ. ರೇಸ್ ಕೋರ್ಸ್ ರಸ್ತೆ, […]

Continue Reading

*ಈ ವರ್ಷ ಸುಮಾರು 45 ಮಕ್ಕಳು ದಾಖಲಾಗುವ ನಿರೀಕ್ಷೆಯಿದೆ – ಚಂದ್ರಶೇಖರ್*

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಆರಂಭವಾಗಿದೆ ದಿನಾಂಕ 29 ರಿಂದ 2024- 25 ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ ಈ ಕಾರಣದಿಂದಾಗಿ ತಾಲೂಕಿನ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಪ್ರಾರಂಭ ಮಾಡಲಾಗಿದೆ ಎಂದು ಪ್ರಭಾರ ವಿದ್ಯಾರ್ಥಿ ನಿಲಯ ಮೇಲ್ವಿಚಾರಕ ಚಂದ್ರಶೇಖರ್ ತಿಳಿಸಿದರು.   ವಿದ್ಯಾರ್ಥಿನಿಲಯಕ್ಕೆ ಆಗಮಿಸಿದ ಮಕ್ಕಳಿಗೆ ಪುಷ್ಪವನ್ನು ನೀಡುವುದರ ಮೂಲಕ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ದಿನ ಶೈಕ್ಷಣಿಕ ವರ್ಷದ ಮೊದಲ ದಿನವಾಗಿದ್ದು. […]

Continue Reading

*ವಿವಿಧ ವಸತಿ ಶಾಲೆಗಳ ಉಳಿಕೆ ಸೀಟು ಭರ್ತಿಗಾಗಿ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 29(ವಿಜಯಮಿತ್ರ ):- ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ/ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ ಡಾ।।ಬಿ.ಆರ್.ಅಂಬೇಡ್ಕರ್/ ಇಂದಿರಾಗಾಂಧಿ ವಸತಿ ಶಾಲೆಗಳಿಗೆ 2024-25ನೇ ಸಾಲಿನ 7, 8 ಮತ್ತು 9ನೇ ತರಗತಿಗಳ ಉಳಿಕೆ ಸೀಟುಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, 29 ಮೇ 2024 ರಿಂದ 05 ಜೂನ್ 2024 ರವರೆಗೆ ಸಮೀಪದ ವಸತಿ ಶಾಲೆಗಳಲ್ಲಿ ಅರ್ಜಿ ಪಡೆದು […]

Continue Reading

*ಲೋಕಸಭಾ ಚುನಾವಣೆ : ಮತ ಎಣಿಕೆ ದಿನದಂದು ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ. 29(ವಿಜಯಮಿತ್ರ ):- ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತ ಏಣಿಕೆ ಕಾರ್ಯ ಜೂನ್ 4 ರಂದು ನಡೆಯಲಿರುವ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ನಾಗಾರ್ಜುನ ಕಾಲೇಜಿನಲ್ಲಿ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ಜೂನ್. 03 ರ ಸಂಜೆ 6:00 ಗಂಟೆಯಿಂದ ಜೂನ್ 05 ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ […]

Continue Reading

*ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ದೊಡ್ಡಬಳ್ಳಾಪುರದ ಎಂ. ಚರಣ್ ಕುಮಾರ್ ಆಯ್ಕೆ : ಕ್ರೀಡಾಪಟುವಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ನೆರವಾದ ಹೆಚ್. ವಿ. ಪ್ರವೀಣ್*

ದೊಡ್ಡಬಳ್ಳಾಪುರ ಮೇ 29 ( ವಿಜಯಮಿತ್ರ ) : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ‌ ಎಂ ಎ ವಿದ್ಯಾರ್ಥಿ ಎಂ.ಚರಣ್ ಕುಮಾರ್ ರಾಷ್ಟ್ರಮಟ್ಟದ ಅಂತರ ವಿಶ್ವವಿದ್ಯಾಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.   ಕ್ರೀಡಾಕೂಟದಲ್ಲಿ ಭಾಗವಹಿಸಲು ಕ್ರೀಡಾಪಟು ಚೆನೈ ಗೆ ತೆರಳುತ್ತಿದ್ದು. ವಿಚಾರ ತಿಳಿದ ಹಳೆ ವಿಧ್ಯಾರ್ಥಿಗಳ ಸಂಘದ ಅಧ್ಯಕ್ಷ ಹೆಚ್. ವಿ. ಪ್ರವೀಣ್ ಕುಮಾರ್ ಸಂಘದ ಪರವಾಗಿ ಅವರಿಗೆ ಹುರಿದುಂಬಿಸಿ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಘದ ಪರವಾಗಿ ಆರ್ಥಿಕವಾಗಿ ಸಹಾಯವಾಗಲೆಂದು ಪ್ರೋತ್ಸಹ ಧನದ […]

Continue Reading

*ದೊಡ್ಡಬಳ್ಳಾಪುರ: ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನ ಆಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 28 (ವಿಜಯಮಿತ್ರ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ *ವಿಶ್ವ ಮಲೇರಿಯಾ ದಿನ* ದ ಅಂಗವಾಗಿ “ಹೆಚ್ಚು ಸಮಾನತೆಯ ಜಗತ್ತಿಗೆ, ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ” ಎಂಬ ಘೋಷವಾಕ್ಯದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶ್ವ ಮಲೇರಿಯಾ ದಿನದ ಅರಿವು ಮೂಡಿಸುವ ಸಲುವಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಿಂದ ನಗರದ ಟಿ.ಬಿ ವೃತ್ತದ ವರೆಗೆ ಜಾಥಾವನ್ನು ಮಾಡಲಾಯಿತು. ಮಾನವ […]

Continue Reading

*ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ವಿಜಯಮಿತ್ರ): ರಾಜ್ಯದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 2023-24ನೇ ಸಾಲಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು 2024 ರ ಜುಲೈ 01 ರಿಂದ 2025 ಮಾರ್ಚ್ 31ರ ವರೆಗೆ ಆಯೋಜಿಸುವ ಸಂಬಂಧ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ 2024 ಜೂನ್ 03 ರಂದು ಸಂಜೆ 5.30 ರ ವರೆಗೆ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ ಹಾಗೂ ಸಂದರ್ಶನದ ದಿನಾಂಕ: 06 ಜೂನ್ 2024 ಆಗಿರುತ್ತದೆ, ಆದುದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಇಲಾಖೆಯ […]

Continue Reading