*ಯುವಕರು ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಸಮಯ ಮೀಸಲಿಡಿ – ಜೆ. ರಾಜೇಂದ್ರ*

ದೊಡ್ಡಬಳ್ಳಾಪುರ: ಯುವಕರು ಪಠ್ಯದ ಜೊತೆಗೆ ಪಠ್ಯೇತರ ಚಟುಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಿಕೆಗೂ ಸ್ವಲ್ಪ ಸಮಯ ಮೀಸಲಿಡಿ ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ. ರಾಜೇಂದ್ರ ತಿಳಿಸಿದರು. ಶ್ರೀ ದೇವರಾಜ ಅರಸ್ ಅಂತರಾಷ್ಟ್ರೀಯ ವಸತಿ ಪ್ರೌಢಶಾಲಾ ವಿಭಾಗದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ನಡೆಯಿತು.   ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ, ಶಿಕ್ಷಣವನ್ನು ಅಳೆಯುವ ಕಾಲ ಬದಲಾಗಿದೆ. ಆಧುನಿಕ ಕಾಲದಲ್ಲಿ ಯುವಕರ ಶಿಕ್ಷಣ […]

Continue Reading

*ಹವಾಮಾನ ಆಧಾರಿತ ಬೆಳೆ ವಿಮೆಗೆ ನೊಂದಾಯಿಸಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,ವಿಜಯಮಿತ್ರ :- 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸ ಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.   ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿ ಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು […]

Continue Reading

*ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ವಿಜಯಮಿತ್ರ :- ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25 ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 1.00 ಲಕ್ಷ, ಪ್ರವರ್ಗ-2ಎ, […]

Continue Reading

*ಮೋಟಾರ್ ರೀವೈಂಡಿಂಗ್ & ರಿಪೇರಿ ತರಬೇತಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ವಿಜಯಮಿತ್ರ :- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಮೋಟಾರ್ ರೀವೈಂಡಿಂಗ್ ಉಚಿತ ತರಬೇತಿಯು 10 ಜುಲೈ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.   ಆಸಕ್ತ 18 ರಿಂದ 45 ರ್ಷನ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು […]

Continue Reading

**ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ವಿಜಯಮಿತ್ರ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ತಾಲ್ಲೂಕು ಮಟ್ಟದಲ್ಲಿ ಖಾಲಿ ಇರುವ ದೇವನಹಳ್ಳಿ ತಾಲ್ಲೂಕು ಸಂಯೋಜಕರು-01 ಹುದ್ದೆಯನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು 21 ರಿಂದ 45 ವರ್ಷ ವಯೋಮಿತಿಯೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.     ವಿದ್ಯಾರ್ಹತೆ ಮತ್ತು ಮಾನದಂಡ: ಪದವೀಧರರಾಗಿರಬೇಕು, ಕಂಪ್ಯೂಟರ್ ನಿರ್ವಹಣೆ / ತಂತ್ರಜ್ಞಾನದಲ್ಲಿ ಮತ್ತು ಸಾಫ್ಟ್ ವೇರ್ ಅಪ್ಲಿಕೇಷನ್ನಲ್ಲಿ ಕಾರ್ಯನಿರ್ವಹಿಸಿರುವ ಕನಿಷ್ಠ […]

Continue Reading

*ಡಿಪ್ಲೊಮಾ ಕೋಸ್೯ಗಳ ಪ್ರವೇಶಾತಿಗೆ ಬಾಕಿ ಉಳಿದಿರುವ ಸೀಟುಗಳಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,ವಿಜಯಮಿತ್ರ :- ದೇವನಹಳ್ಳಿ ತಾಲ್ಲೂಕು ಚನ್ನರಾಯಪ್ಪಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಭೇತಿ ಕೇಂದ್ರವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ದೇವನಹಳ್ಳಿ ಜಿ.ಟಿ.ಟಿ.ಸಿ. ಕೇಂದ್ರದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ಗಳ ದಾಖಲಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ, ಸಂಬಂಧಿಸಿದಂತೆ, ಬಾಕಿ ಉಳಿದಿರುವ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಜುಲೈ 15 ಕೊನೆಯ ದಿನವಾಗಿದೆ.   ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), […]

Continue Reading

*ದೊಡ್ಡಬಳ್ಳಾಪುರ l ನಗರದಲ್ಲಿ ಮೂರು ದಿನಗಳ ಬೃಹತ್ ಕೇಸರಿ ಹಬ್ಬ : ಶ್ರೀ ರಾಮ ಶೋಭಯಾತ್ರೆಗೆ ಭರ್ಜರಿ ಸಿದ್ಧತೆ*

ದೊಡ್ಡಬಳ್ಳಾಪುರ : ನಗರದಲ್ಲಿ ಮೂರು ದಿನಗಳ “ಬೃಹತ್ ಕೇಸರಿ ಹಬ್ಬ “ವನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡದ ವತಿಯಿಂದ ಆಯೋಜನೆ ಮಾಡಲಾಗಿದೆ. ಜೂನ್ 29 ರಂದು ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮಹಾ ಸುದರ್ಶನ ಹೋಮ. ಶ್ರೀರಾಮ ತಾರಕ ಹೋಮ, ಶ್ರೀ ಮಹಾಗಣಪತಿ ಹೋಮ, ಶ್ರೀ ನವಗ್ರಹಶಾಂತಿ ಹೋಮ, ಶ್ರೀ ಮೃತ್ಯುಂಜಯ ಶಾಂತಿ ಹೋಮ, ಶ್ರೀ ಮಹಾಗ್ರಾಮದೇವತೆ ಶಾಂತಿ ಹೋಮ ಶ್ರೀ ಮಹಾಪೂರ್ಣಾಹುತಿ ಹೋಮ ನೆಡೆಯಿತು ಹಾಗೂ ಮತ್ತು ಮಧ್ಯಾಹ್ನ ಮಧ್ಯಾಹ್ನ ನೂರಾರು ಮಹಿಳೆಯರಿಂದ ‘ಲಲಿತ […]

Continue Reading

*SC/ST ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರ ಕ್ರಮ ಕೈಗೊಳ್ಳಿ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 29(ವಿಜಯಮಿತ್ರ ): ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ಮಾಡದೆ ಕೂಡಲೇ ಸಂಭಂದಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.   ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2024ನೇ ಕ್ಯಾಲೆಂಡರ್ ವರ್ಷದ 2ನೇ ತ್ರೈಮಾಸಿಕ ಜಿಲ್ಲಾ […]

Continue Reading

*ರಾಷ್ಟ್ರಮಟ್ಟದ ಅತ್ಯುತ್ತಮ ಗುಣಮಟ್ಟದ ಪ್ರಶಸ್ತಿ ( NQAS) ಪಡೆದ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ*

ದೊಡ್ಡಬಳ್ಳಾಪುರ.ವಿಜಯಮಿತ್ರ :ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯಿಂದ ಕೊಡಮಾಡುವ ರೋಗಿಗಳಿಗೆ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಅಂದರೆ ನ್ಯಾಷನಲ್ ಕ್ವಾಲಿಟಿ ಅಶುರೆನ್ಸ್ ಸ್ಟಾಂಡರ್ಸ್ ( NQAS) ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆ( ಸಾರ್ವಜನಿಕ ಆಸ್ಪತ್ರೆ) ಸಿಬ್ಬಂದಿ ಪಡೆಯುವ ಮೂಲಕ ತಾಲ್ಲೂಕಿನ ಹೆಮ್ಮೆ ಹೆಚ್ಚಿಸಿದ್ದಾರೆ.   ರೋಗಿಗಳಿಗೆ ಚಿಕಿತ್ಸೆ ನೀಡುವಾಗ ನಿಗದಿತ ಮಾರ್ಗಸೂಚಿಗಳನ್ನು ಅನುಪಾಲನೆ ಮಾಡುವುದು, ದಾಖಲೆಗಳನ್ನು ನಿರ್ವಹಿಸುವುದು, ವರದಿ ಸಲ್ಲಿಸುವುದು, ಸೂಕ್ತ ಸಮಯದಲ್ಲಿ ರೆಫರ್ ಮಾಡುವುದು ಮುಂತಾದ ಅಂಶಗಳನ್ನು ಆಧರಿಸಿ ರಾಜ್ಯ ಮಟ್ಟದ ತಂಡವು ಸರ್ಕಾರಿ […]

Continue Reading

*ಜೂನ್ 29 ರಂದು ಜಿಲ್ಲಾಡಳಿತ ಭವನದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 28 (ವಿಜಯಮಿತ್ರ ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜೂನ್ 29(ಶನಿವಾರ) ರಂದು ಬೆಳಗ್ಗೆ 10.30 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.   ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ […]

Continue Reading