*ರೈತರಿಗೆ ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಸಮಸ್ಯೆ ಆಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 01(ವಿಜಯಮಿತ್ರ):- ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸೇರಿದಂತೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ ರೈತರಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ರೈತರಿಗೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಲು ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]
Continue Reading