*8ನೇ ಫೆಡರೇಷನ್ ಯೋಗ ಸ್ಪೋರ್ಟ್ಸ್ ಕಪ್ – 2024 : ಸ್ಪರ್ಧೆಯಲ್ಲಿ ಗೆದ್ದ ಯೋಗಪಟುಗಳಿಗೆ ಅಭಿನಂದನೆ ಸಲ್ಲಿಸಿದ ನಿಸರ್ಗ ಯೋಗ ಕೇಂದ್ರ*

ದೊಡ್ಡಬಳ್ಳಾಪುರ: ಯೋಗ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ದಿನಾಂಕ 08,09,15,16 ಜೂನ್ 2024 ಆನ್‌ಲೈನ್ ನಲ್ಲಿ ನಡೆದ 8ನೇ ಫೆಡರೇಷನ್ ಯೋಗ ಸ್ಪೋರ್ಟ್ಸ್ ಕಪ್ -2024 ಯೋಗ ಚಾಂಪಿಯನ್‌ಷಿಪ್ ನಲ್ಲಿ ದೊಡ್ಡ ಬಳ್ಳಾಪುರದ ಯೋಗಪಟುಗಳು ಪ್ರತಿಭೆಗಳು ಭಾಗವಹಿಸಿ ಜಯಗಳಿಸಿದ್ದಾರೆ. ತಾಲೂಕಿನ ನಿಸರ್ಗ ಯೋಗ ಕೇಂದ್ರ (ರಿ) ದ ಯೋಗಪಟುಗಳಾದ ಎನ್ ಖುಷಿಪ್ರಿಯ ಆದಿತ್ಯ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಮತ್ತು ನಳಂದ ಪ್ರೌಢಶಾಲೆಯ ಹಿತಶ್ರೀ ಕೆ.ಎಂ ಬಾಲಕಿಯರ ರಿದಮಿಕ್ ಪೇರ್ ಯೋಗದಲ್ಲಿ ಬೆಳ್ಳಿಯ ಪದಕ ಪಡೆದಿದ್ದಾರೆ.ಬಾಲಕರ ವಿಭಾಗದಲ್ಲಿ ಲಿಟ್ಸ್ […]

Continue Reading

*ದೇವನಹಳ್ಳಿ:ಜೂನ್ 21ರಂದು ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 18 : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಕಛೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ 10 ನೇ ಜಿಲ್ಲಾಮಟ್ಟದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21(ಶುಕ್ರವಾರ) ರಂದು ಬೆಳಗ್ಗೆ 06 ಗಂಟೆಗೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ನಡೆಯಲಿದೆ.   “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಈ ವರ್ಷದ ಘೋಷವಾಕ್ಯ ವಾಗಿದೆ.   ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು […]

Continue Reading

*ಕಲಾವಿದರ ಗುರುತಿನ ಚೀಟಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 18 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಕಲಾವಿದರುಗಳ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿಯನ್ನು ನೀಡಲು ಸರ್ಕಾರವು ಅವಕಾಶ ಕಲ್ಪಿಸಿದೆ.   ಅದುದ್ದರಿಂದ ಜಿಲ್ಲೆಯ ಎಲ್ಲಾ ಅರ್ಹ ಕಲಾವಿದರುಗಳು ತಮ್ಮ ಹಾಗೂ ತಮ್ಮ ತಂಡದ ಎಲ್ಲಾ ಸಹ ಕಲಾವಿದರ ದಾಖಲೆಗಳ ಸಮೇತ ಮಾಹಿತಿಯನ್ನು ನಿಗದಿತ ಅರ್ಜಿ ನಮೂನೆಯೊಂದಿಗೆ ಜೂನ್ 26 ರ ಸಂಜೆ 5:00 ಗಂಟೆಯ ಒಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು […]

Continue Reading

*ತಾಲ್ಲೂಕಿನ ಕನಸವಾಡಿಯಲ್ಲಿ ಶಾಸಕರಿಂದ ತಾಲ್ಲೂಕು ಜನಸ್ಪಂದನಾ ಕಾರ್ಯಕ್ರಮ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 18 : ಜೂನ್ 19(ಬುಧವಾರ) ರಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಂಟಿಯಾಗಿ ಜಿಲ್ಲಾ & ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ, ಮಧುರೆ ಹೋಬಳಿಯ ಕನಸವಾಡಿ ಗ್ರಾಮದ “ಡಾ. ಬಿ ಆರ್ ಅಂಬೇಡ್ಕರ್ ಭವನ” ದಲ್ಲಿ ಬೆಳಗ್ಗೆ 10-00 ಗಂಟೆಗೆ ” ಜನಸ್ಪಂದನಾ ” ಕಾರ್ಯಕ್ರಮ ನಿಗಧಿಪಡಿಸಲಾಗಿರುತ್ತದೆ.   ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ […]

Continue Reading

ಮೊಬೈಲ್ ಕ್ಲಿನಿಕ್ ಗೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್. 18 (ವಿಜಯಮಿತ್ರ ):- ವೋಲ್ವೋ ಗ್ರೂಪ್ ಹಾಗೂ ನಾರಾಯಣ ಹೆಲ್ತ್ ಸಹಯೋಗದಲ್ಲಿ ಸಿಎಸ್ ಆರ್ ಯೋಜನೆಯಡಿ ಒದಗಿಸಿರುವ ಸoಚಾರಿ ಆರೋಗ್ಯ ವಾಹನಕ್ಕೆ ದೇವನಹಳ್ಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ‘ವೆಲ್ ನೆಸ್ ಆನ್ ವ್ಹೀಲ್ಸ್’ ಎಂಬ ಪರಿಕಲ್ಪನೆಯಲ್ಲಿ ಪ್ರಾರಂಭಗೊಂಡ ಸಂಚಾರಿ ಸಮುದಾಯ ಆರೋಗ್ಯ ಕೇಂದ್ರವು […]

Continue Reading

*ಯೋಗೋತ್ಸವ 2024 : ಶಾಲಾಮಕ್ಕಳಿಗೆ ಯೋಗ ತರಬೇತಿ ಜೊತೆಗೆ ಆಯುಷ್ ಪದ್ಧತಿಗಳ ಬಗ್ಗೆ ಅರಿವು*

ದೊಡ್ಡಬಳ್ಳಾಪುರ : ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ದಿನಾಚರಣೆಯ ಅಂಗವಾಗಿ ಜೂನ್ 21ರಂದು ಆಯೋಜಿಸಿರುವ  ಯೋಗೋತ್ಸವ 2024 ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಸರ್ಕಾರಿ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯ ಹಣಬೆ ಇಲ್ಲಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಹಣಬೆ,ವತಿಯಿಂದ ಯೋಗಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಆಯುಷ್ ಪದ್ಧತಿಗಳ ಬಗ್ಗೆ ಅರಿವು ಆರೋಗ್ಯಕರ ಜೀವನ ಶೈಲಿ ಹಾಗೂ ಯೋಗದ ಮಹತ್ವದ ಬಗ್ಗೆ ತಿಳಿಸಲಾಯಿತು.   ಈ ಕಾರ್ಯಕ್ರಮದಲ್ಲಿ ಹಣಬೆ ಗ್ರಾಮದ ಆಯುರ್ವೇದ ಚಿಕಿತ್ಸಾಲಯ ವೈದ್ಯಾಧಿಕಾರಿಗಳಾದ ಡಾ// ಎ […]

Continue Reading

*ಸಿಡಿಲು ಬಡಿದು ಮನೆ ಗೋಡೆ ಕುಸಿತ : ನೆರವಿನ ನಿರೀಕ್ಷೆಯಲ್ಲಿ ಕುಟುಂಬಸ್ಥರು*

ದೊಡ್ಡಬಳ್ಳಾಪುರ : ರಾತ್ರಿ ಸುರಿದ ಗುಡುಗು ಸಿಡಿಲು ಸಹಿತ ಜಡಿ ಮಳೆಗೆ ಮನೆಯೊಂದರ ಗೋಡೆ ಕುಸಿದಿರುವ ಘಟನೆ ತಾಲ್ಲೂಕಿನ ಮುಕ್ಕಡಿಘಟ್ಟ ಗ್ರಾಮದಲ್ಲಿ ನೆಡೆದಿದೆ. ಗ್ರಾಮದ ಗಂಗರಾಜ್ ಎಂಬುವವರಿಗೆ ಸೇರಿದ ಮನೆಗೆ ಸಿಡಿಲು ಬಡಿದ ಕಾರಣ ಮನೆಯ ಗೋಡೆ ಕುಸಿತವಾಗಿದೆ. ಘಟನಾ ವೇಳೆ ಮನೆಯ ಕುಟುಂಬಸ್ಥರು ಬೇರೆ ಕೋಣೆಯಲ್ಲಿದ್ದ ಕಾರಣ ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಆದರೆ ಮನೆಯಲ್ಲಿದ್ದ ವಸ್ತುಗಳು ಗೋಡೆ ಕುಸಿದ ಕಾರಣ ಸಂಪೂರ್ಣ ಹನಿಗೋಳಗಾಗಿದೆ ಎಂದು ತಿಳಿದು ಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ‌ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ […]

Continue Reading

*ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ l ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದ ಆಸ್ಪತ್ರೆ ಸಿಬ್ಬಂದಿ*

ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆ ಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಆರೋಗ್ಯ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆ, ಸೌಭಾಗ್ಯ ಸೇವಾ ಟ್ರಸ್ಟ್, ನೈಟಿಂಗೇಲ್ ಮೆಡಿಕಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾವಹಿಸಿದ್ದ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ರಮೇಶ್ ರವರು ಮಾತನಾಡಿ ನಮ್ಮ ಆಸ್ಪತ್ರೆಯಲ್ಲಿ ಪ್ರತಿ ಮಾಹೆ 250 ಕ್ಕಿಂತಲೂ ಹೆಚ್ಚಿನ ಹೆರಿಗೆಗಳು ಸಂಭವಿಸುತ್ತವೆ, ವಿವಿಧ ರೀತಿಯ 200 ಕ್ಕೂ ಹೆಚ್ಚಿನ ಶಸ್ತ್ರಚಿಕಿತ್ಸೆ ಗಳು […]

Continue Reading

*10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ಸಭೆ : ಯೋಗ ದಿನಾಚರಣೆಯ ಪೋಸ್ಟರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಡಾ. ಏನ್. ಶಿವಶಂಕರ*

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 14 : 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಸಂಬಂಧ […]

Continue Reading

*ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡರ ಹುಟ್ಟು ಹಬ್ಬದ ಸಂಭ್ರಮ : ಅಭಿಮಾನಿಗಳಿಂದ ಭರ್ಜರಿ ಕಾರ್ಯಕ್ರಮ ಯೋಜನೆ*

ದೊಡ್ಡಬಳ್ಳಾಪುರ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಎಂ ಹರೀಶ್ ಗೌಡರವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ನಗರದ ನೆಲದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಅದ್ದೂರಿಯಾಗಿ ಆಚರಣೆ ಮಾಡಿದ್ದರು. ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಶುಭ ಕೋರಿದರು. ತಾಲೂಕಿನಾದ್ಯಂತ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಪುಷ್ಪಹಾರ ಸಮರ್ಪಿಸುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಹುಟ್ಟುಹಬ್ಬದ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಹರೀಶ್ ಗೌಡರು ಪಾಲ್ಗೊಂಡು ಮಾತನಾಡಿ […]

Continue Reading