*ಜಿಲ್ಲಾಡಳಿತ ಭವನದಲ್ಲಿ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಜಯಂತಿ ಆಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 02:- ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ರವರ 144 ನೇ ಜಯಂತ್ಯೋತ್ಸವ ಅಂಗವಾಗಿ ಅಪರ ಜಿಲ್ಲಾಧಿಕಾರಿಗಳಾದ ಅಮರೇಶ ಹೆಚ್. ಅವರು ಡಾ. ಫ.ಗು ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.   ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕರಾದ ರಾಜೀವ್ ಸುಲೋಚನ, ಆರ್.ಹೆಚ್. ಎಂ ಗಂಗಾಧರ್, […]

Continue Reading

*ರೈತರು ಬೆಳೆ ವಿಮೆಗೆ ನೋಂದಾಯಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಸಲಹೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 02 (ವಿಜಯಮಿತ್ರ ):- ರೈತರಿಗೆ ಬೆಳೆ ವಿಮೆ ನೋಂದಣಿ ಮಾಡಿಸುವದರಿಂದ ಆಗುವ ಲಾಭ ಹಾಗೂ ಅನುಕೂಲಗಳ ಕುರಿತು ಸರಿಯಾದ ಮಾಹಿತಿ ಇರುವುದಿಲ್ಲ. ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸುವ ಮೂಲಕ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ […]

Continue Reading

*ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ*

ದೊಡ್ಡಬಳ್ಳಾಪುರ : ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಎಚ್.ಎಸ್.ವೆಂಕಟೇಶ್ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ರಾಜುಸಣ್ಣಕ್ಕಿ ಆಯ್ಕೆಯಾದರು. ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಘಟಕದನೂತನ ಪದಾಧಿಕಾರಿಗಳ ಆಯ್ಕೆ ಜೊತೆಗೆ ಪತ್ರಿಕಾದಿನ ಆಚರಣೆ ಮಾಡಲಾಯಿತು.   ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ದೇವರಾಜು ಅವರು ಮಾತನಾಡಿ 1843 ರ ಜುಲೈ ಒಂದರಂದು ರಾಜ್ಯದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪತ್ರಿಕೆ ಆರಂಭವಾಯಿತು. ಪತ್ರಿಕೋದ್ಯಮ ಸಾಹಿತ್ಯ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ, […]

Continue Reading

*ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಜಾಗೃತಿ ಅಭಿಯಾನ : ಅಧಿಕಾರಿಗಳಿಂದ ಅಂಗಡಿಗಳ ಮಾಲೀಕರಿಗೆ ಕರಪತ್ರ ವಿತರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 01 (ವಿಜಯಮಿತ್ರ ):- ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು.   ಈ ತಪಾಸಣೆ ವೇಳೆ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕನನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಿದರು.   […]

Continue Reading

*ದೊಡ್ಡಬಳ್ಳಾಪುರ l ಜೂಲೈ 7 ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ l ಕಾರ್ಯಕ್ರಮದ ಆಯೋಜನೆ ಕುರಿತು ಮುಖಂಡರ ಸುದ್ದಿಗೋಷ್ಠಿ*

ದೊಡ್ಡಬಳ್ಳಾಪುರ : ಜುಲೈ 7 ಭಾನುವಾರ ಬೆಳ್ಳಿ ರಥದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ನಗರಾದ್ಯಂತ ಮೆರವಣಿಗೆ ಮಾಡುವ ಮೂಲಕ ಅದ್ಧೂರಿಯಾಗಿ 515ನೇ ಕೆಂಪೇಗೌಡ ಜಯಂತೋತ್ಸವ ಆಚರಣೆ ಮಾಡಲಾಗುವುದು ಎಂದು ಕೆಂಪೇಗೌಡ ಜಯಂತೋತ್ಸವ ಸಮಿತಿ ಅಧ್ಯಕ್ಷ ಟಿ. ವಿ ಲಕ್ಷ್ಮೀನಾರಾಯಣ್ ತಿಳಿಸಿದರು. ನಗರದ ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಮುದಾಯದ ಎಲ್ಲಾ ಮುಖಂಡರು ಪಕ್ಷಾತೀತವಾಗಿ ಜು. 7ರಂದು ಜಯಂತೋತ್ಸವವನ್ನು ಅದ್ದೂರಿ ಆಚರಿಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮಕ್ಕೆ ಕೆಂಗೇರಿ ಶಾಖಾ ಮಠದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರ […]

Continue Reading