*ಕೊನಘಟ್ಟ ಪಂಚಾಯಿತಿ ಕಟ್ಟಡವನ್ನೇ ಖಾಸಗಿ ವ್ಯಕ್ತಿಗೆ ಖಾತೆ ಮಾಡಿರುವ ಆರೋಪ : ಗ್ರಾಮ ಪಂಚಾಯಿತಿ ಉಳಿಸಲು ಗ್ರಾಮಸ್ಥರ ಹೋರಾಟ*

ದೊಡ್ಡಬಳ್ಳಾಪುರ : ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ಕಟ್ಟಡವನ್ನು ಖಾಸಗಿ ವ್ಯಕ್ತಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಕೊನಘಟ್ಟ ಗ್ರಾಮ ಪಂಚಾಯಿತಿ ಕಟ್ಟಡವಿರುವ ಜಾಗ ಖಾಸಗಿ ವ್ಯಕ್ತಿಯ ಹೆಸರಿಗೆ ಖಾತೆ ಮಾಡುವ ಮೂಲಕ ಪಂಚಾಯಿತಿ ಕಟ್ಟಡವು ಖಾಸಗಿ ವ್ಯಕ್ತಿಯ ಪಾಲಾಗಿದೆ, ಪಂಚಾಯಿತಿ ಕಟ್ಟಡದ ಜಾಗವನ್ನು ಉಳಿಸಿಕೊಳ್ಳಲು ಗ್ರಾಮಸ್ಥರು ಹೋರಾಟಕ್ಕೆ ಮುಂದಾಗಿದ್ದಾರೆ.   ತಾಲ್ಲೂಕಿನ ಕೊನಘಟ್ಟ ಗ್ರಾಮದ ಸರ್ವೆ ನಂಬರ್ 351/2 ಹಾಗೂ 351/3ರ ಒಟ್ಟು 4 ಗುಂಟೆ ಜಾಗದಲ್ಲಿ ಗ್ರಾಮ ಪಂಚಾಯಿತಿ […]

Continue Reading

3ನೇ ದಿನಕ್ಕೆ ಕಾಲಿಟ್ಟ ಮೈಸೂರು ಚಲೋ ಪಾದಯಾತ್ರೆ : ಸಾವಿರಾರು ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ರಾಜ್ಯ ನಾಯಕರು

ಆಗಸ್ಟ್ 05 ( ವಿಜಯ ಮಿತ್ರ ) : ನಿರಂತರ 3ನೇ ದಿನಕ್ಕೆ ಕಾಲಿಟ್ಟಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಸಮಾಜ ಸೇವಕರು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಸ್ ಎಂ. ಹರೀಶ್ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡು 2 ನೇ ದಿನದ ಮೈಸೂರು ಚಲೋ ಪಾದಯಾತ್ರೆ ಯಶಸ್ವೀಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಪಾದಯಾತ್ರೆ ನಮ್ಮ ಶಕ್ತಿ ಪ್ರದರ್ಶನಕ್ಕಾಗಿ ಅಲ್ಲ ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಮಾಡುತ್ತಿದ್ದೇವೆ ಈ ಕಾರ್ಯದಲ್ಲಿ ರಾಜ್ಯ, ಜಿಲ್ಲೆ ಹಾಗೂ […]

Continue Reading

*ಪ್ರೊ. ಬಿ. ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ರ ಸಂಭ್ರಮ: ಮುಖಂಡರಿಂದ ಕಾರ್ಯಕ್ರಮದ ಕರಪತ್ರ ಬಿಡುಗಡೆ*

ದೊಡ್ಡಬಳ್ಳಾಪುರ ಆಗಸ್ಟ್ 04 ( ವಿಜಯಮಿತ್ರ) : ಪ್ರೊಫೆಸರ್ ಬಿ ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ. ಸಂಖ್ಯೆ. 47/74-75) ಯ ಚಳವಳಿಗೆ 50 ವರ್ಷಗಳು ಪೂರ್ಣಗೊಂಡಿದ್ದು ಸಂಭ್ರಮೋತ್ಸವದ ಕರಪತ್ರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ದೊಡ್ಡಬಳ್ಳಾಪುರ ತಾಲ್ಲೂಕು ಶಾಖಾ ಸಂಚಾಲಕ ರಾಮಮೂರ್ತಿ ( ರಾಮು )ನೇರಳೆಘಟ್ಟ ಬಿಡುಗಡೆ ಮಾಡಿದರು.   ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕದ ದಲಿತ ಚಳವಳಿ 50 ವರ್ಷಗಳನ್ನು ಪೂರೈಸಿದ್ದು ಸಂಭ್ರಮೋತ್ಸವನ್ನು ಆಗಸ್ಟ್ 7ರಂದು ಬೆಂಗಳೂರಿನ ವಸಂತ ನಗರದ ಮಿಲ್ಲರ್ಸ್ ರಸ್ತೆಯ ಡಾ.ಅಂಬೇಡ್ಕರ್‌ಭವನದಲ್ಲಿ ಹಮ್ಮಿಕೊಂಡಿದ್ದು, […]

Continue Reading

*ಮೈಸೂರು ಚಲೋ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಎಂ.ಹರೀಶ್ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ*

ಬೆಂಗಳೂರು ಆಗಸ್ಟ್ 03 ( ವಿಜಯಮಿತ್ರ) : ರಾಜ್ಯ ಕಾಂಗ್ರೆಸ್ ಸರ್ಕಾರದ ಅಕ್ರಮಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಟ್ಟಾಗಿ ಪ್ರತಿಭಟನೆ ಮುಂದಾಗಿದ್ದು ಪ್ರತಿಭಟನೆಯ ಭಾಗವಾಗಿ ಆಯೋಜನೆ ಮಾಡಿರುವ ಬೃಹತ್ ಪಾದಯಾತ್ರೆ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಜೆಡಿಎಸ್ ಮುಖಂಡರು ಭಾಗಿಯಾದರು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಎಂ. ಹರೀಶ್ ಗೌಡ ಮಾತನಾಡಿ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಿ, ಕರ್ನಾಟಕವನ್ನು ಉಳಿಸಿ ಎಂಬ ಧ್ಯೆಯ ವಾಕ್ಯದೊಂದಿಗೆ ಪ್ರಾರಂಭಿಸಿರುವ ಪಾದಯಾತ್ರೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಕೆಂಗೇರಿ […]

Continue Reading

*ಅತ್ಯುತ್ತಮ ನಿಲಯಪಾಲಕ ಪ್ರಶಸ್ತಿ ಪಡೆದ ಲಕ್ಷ್ಮಣ ಡಿ ಚವಾಣ್ : ಸನ್ಮಾನಿತರಿಗೆ ಬಂಜಾರ ಸೇವಾ ಸಂಘದ ವತಿಯಿಂದ ಗೌರವ ಸಮರ್ಪಣೆ*

ಲಿಂಗಸುಗೂರು ಆಗಸ್ಟ್ 03 ( ವಿಜಯಮಿತ್ರ) : ತಾಲೂಕಿನ ಅಲ್ಪಸಂಖ್ಯಾತರ. ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿಲಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷ್ಮಣ್ ಡಿ ಚವಾಣ್ ರವರಿಗೆ ರಾಜ್ಯಮಟ್ಟದ ಅತ್ಯುತ್ತಮ ನಿಲಯ ಪಾಲಕರಾಗಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯಮಟ್ಟದ ಪ್ರಶಸ್ತಿ ಪಡೆದು ತಾಲ್ಲೂಕಿನ ಗೌರವ ಹೆಚ್ಚಿಸಿದ ಶ್ರೀ ಲಕ್ಷ್ಮಣ್ ಡಿ ಚವಾಣ್ ಅವರಿಗೆ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. .ಈ ಸಂದರ್ಭದಲ್ಲಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘ […]

Continue Reading

*ಬೈಕ್ ರಿಪೇರಿ ಮತ್ತು ಸೇವೆ ಉಚಿತ ತರಬೇತಿ‌*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 03, 2024 (ವಿಜಯಮಿತ್ರ):- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಬೈಕ್ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್‌ 21 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ […]

Continue Reading

*ವಿದೇಶ ವ್ಯಾಸಂಗಕ್ಕಾಗಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 03,2024 (ವಿಜಯಮಿತ್ರ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಹತೆಗಳು:-ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಲ್, ಹಾಗೂ ಫಾರ್ಸಿ, […]

Continue Reading

*ಜಿಲ್ಲೆಯಲ್ಲಿ ಆಗಸ್ಟ್ 5 ರಿಂದ 8 ರವರೆಗೆ ಕನ್ನಡಜ್ಯೋತಿ ರಥಯಾತ್ರೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಆಗಸ್ಟ್ 03,2024 (ವಿಜಯಮಿತ್ರ):- ರಾಜ್ಯ ಸರ್ಕಾರವು ಕರ್ನಾಟಕ ಸಂಭ್ರಮ 50 ರಡಿ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಅಭಿಯಾನದ ಅಂಗವಾಗಿ ಕನ್ನಡಜ್ಯೋತಿ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿಯವರು 2023 ರ ನವೆಂಬರ್ 02 ರಂದು ವಿಜಯನಗರ ಜಿಲ್ಲೆಯ ಹಂಪಿಯಿಂದ ಚಾಲನೆ ನೀಡಿದ್ದಾರೆ. ಈ ರಥಯಾತ್ರೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುತ್ತಾ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಸ್ಟ್ 05(ಸೋಮವಾರ) ರಂದು ಬೆಳಿಗ್ಗೆ 09:00 ಗಂಟೆಗೆ ಕೋಲಾರದ ಮಾಲೂರಿನಿಂದ ಹೊಸಕೋಟೆಗೆ ರಥಯಾತ್ರೆ ಆಗಮಿಸಲಿದೆ, ಆಗಸ್ಟ್ 06(ಮಂಗಳವಾರ) […]

Continue Reading

*ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ: ಸಚಿವ ಕೆ.ಎಚ್. ಮುನಿಯಪ್ಪ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 03,2024 (ವಿಜಯಮಿತ್ರ):- ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ನಾವೆಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ […]

Continue Reading

*ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತು ದಾಸ್ತಾನು ಮಳಿಗೆಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್*

ಬೆಂಗಳೂರುಗ್ರಾಮಾಂತರಜಿಲ್ಲೆಆಗಸ್ಟ್02,2024(ವಿಜಯಮಿತ್ರ):- ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯವಾಗುವದನ್ನು ತಡೆಯುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಸಂಗ್ರಹ ಮಾಡುವ ಅಂಗಡಿ, ದಾಸ್ತಾನು ಮಳಿಗೆಗಳು ಹಾಗೂ ಗೋದಾಮುಗಳ ಮೇಲೆ ಅಧಿಕಾರಿಗಳ ತಂಡ ಆಗಾಗ್ಗೆ ದಾಳಿ ನಡೆಸಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮದಡಿಯಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಕುರಿತು ತೆಗೆದುಕೊಂಡಿರುವ ಕ್ರಮದ […]

Continue Reading