ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ :18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ:ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 30, 2024. – ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಅಕ್ಟೋಬರ್ 29 ರಂದು ಪ್ರಾರಂಭಗೊಂಡಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆಯುವಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್ ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ವೇಳಾಪಟ್ಟಿ ಯನ್ನು […]

Continue Reading

ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ‌ಆವರಣದಲ್ಲಿ 4 ಕೋಟಿ ವೆಚ್ಚದ ಒಪಿಡಿ ಬ್ಲಾಕ್ ಉಧ್ಘಾಟನೆ

ದೊಡ್ಡಬಳ್ಳಾಪುರ  ಅ.29:- ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿಂದು ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಅಹಾರ ನಾಗರೀಕ ಸರಬರಾಜು ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಉಧ್ಘಾಟಿಸಿದರು.   ಸಮಾರಂಭನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಕುಟುಂಬ Shorts ಇಲಾಖಾ ಸಚಿವರು ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ […]

Continue Reading

ಮಜರಾ ಹೊಸಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ :ನೂತನ ಅಧ್ಯಕ್ಷರಾಗಿ ಲೀಲಮ್ಮಪಿಳ್ಳೆಗೌಡ ಮತ್ತು ಉಪಾಧ್ಯಕ್ಷರಾಗಿ ಮಾರಪ್ಪ ಆಯ್ಕೆ

ದೊಡ್ಡಬಳ್ಳಾಪುರ : ಗ್ರಾಮ ಮಟ್ಟದ ಪಂಚಾಯಿತಿ,ಹಾಲಿನ ಡೈರಿ, ಸಹಕಾರಿ ಸಂಘಗಳಲ್ಲಿ ರಾಜಕೀಯ ಮಾಡಬಾರದು ಎಂಬುದಕ್ಕೆ ನಮ್ಮ ಪಂಚಾಯತಿ ಉತ್ತಮ ಉದಾಹರಣೆಯಾಗಿದೆ ಎಲ್ಲಾ ಸ್ಥಳೀಯ ಮುಖಂಡರ ಶ್ರಮದ ಫಲವಾಗಿ ಇಂದು ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ವೀರಾಪುರದ ಸದಸ್ಯೆ ಲೀಲಮ್ಮಪಿಳ್ಳೆಗೌಡ, ಉಪಾಧ್ಯಕ್ಷರಾಗಿ ಮಾರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತರೆ ಪಂಚಾಯತಿಗಳಿಗೆ ನಮ್ಮ ಮಜರಾ ಹೊಸಹಳ್ಳಿ ಪಂಚಾಯತಿ ಮಾದರಿಯಾಗಿದೆ, ಇದೊಂದು ಉತ್ತಮ ಬೆಳವಣಿಗೆಯಾಗಿದ್ದು, ಪಂಚಾಯತಿ ವ್ಯಾಪ್ತಿಯ ಬಡ ವರ್ಗದ ಸಮುದಾಯಗಳಿಗೆ ಧ್ವನಿಯಾಗಿ ಕರ್ತವ್ಯ ನಿರ್ವಹಿಸಲಿ, ಉತ್ತಮ ಸೇವೆ ಸಲ್ಲಿಸುವಲ್ಲಿ ಪಂಚಾಯತಿ ಸಮೃದ್ಧವಾಗಲಿ […]

Continue Reading

ತೂಬಗೆರೆ ಗ್ರಾಮಪಂಚಾಯತಿ ಚುನಾವಣೆ : ನೂತನ ಅಧ್ಯಕ್ಷರಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ, ಉಪಾಧ್ಯಕ್ಷರಾಗಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಪಂಚಾಯಿತಿ ಚುನಾವಣೆ ನೆಡೆದಿದ್ದು ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಮೀಸಲಿದ್ದು ನೂತನ ಅಧ್ಯಕ್ಷರಾಗಿ ತೂಬಗೆರೆ ಮುನಿಲಕ್ಷ್ಮಮ್ಮ ರಾಮಕೃಷ್ಣ,ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ( ಅ) ಮಹಿಳೆ ಹಿರೇಮುದ್ದೇನಹಳ್ಳಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸದಸ್ಯರು ಪುಷ್ಪಮಾಲೆ ನೀಡಿವ ಮೂಲಕ ಶುಭಕೋರಿದರು   ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ ಮಾತನಾಡಿ ತೂಬಗೆರೆಯಲ್ಲಿ ನೈರ್ಮಲ್ಯ ಕಲ್ಪಿಸುವುದರ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು […]

Continue Reading

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸುದ್ದಿಗೋಷ್ಠಿ : ರೈತರ ಪರ ನಿಲುವು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಗ್ರಹ

ದೊಡ್ಡಬಳ್ಳಾಪುರ ಅ 29.( ವಿಜಯಮಿತ್ರ ) : ರಾಜ್ಯದಲ್ಲಿ ಲಕ್ಷಾಂತರ ಜನರು ಸರ್ಕಾರಿ ಜಗಗಳಲ್ಲಿ ಮನೆ ಗುಡಿಸಲು ಕಟ್ಟಿಕೊಂಡಿದ್ದು ಅಂತಹ ಜನತೆಗೆ ಸರ್ಕಾರದಿಂದ ಯಾವುದೇ ಹಕ್ಕು ಪತ್ರಗಳಾಗಲಿ ಮಂಜೂರಾತಿ ಆಗಲಿ ನೀಡಿರುವುದಿಲ್ಲ ಅಂತಹ ಜನರ ಬೆಂಬಲವಾಗಿ ದೊರೆಸ್ವಾಮಿ ಅವರ ಆಶಯದಂತೆ ನಿರಂತರವಾಗಿ ನಮ್ಮ ಸಮಿತಿ ಹೋರಾಟ ನೆಡೆಸುತ್ತಿದೆ ಎಂದು ರಾಜ್ಯ ಸಮಿತಿ ಮುಖಂಡ ಸಿರಿಮನೆ ನಾಗರಾಜು ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಆಯೋಜನೆ ಮಾಡಲಾಗಿದ್ದ ಸುದ್ದಿಗೊಷ್ಟಿಯಲ್ಲಿ […]

Continue Reading

ಅನ್ನದಾಸೋಹ ಮಾಡುವ ಮೂಲಕ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ

ದೊಡ್ಡಬಳ್ಳಾಪುರ : ಶ್ರೀಮತಿ ಕಾಂತಾಮಣಿ ಹರೀಶ್ ಗೌಡ ಮಹಿಳಾ ಬಳಗದ ವತಿಯಿಂದ ನಿರಂತರ ಅನ್ನದಾಸೋಹ ಸಮಿತಿಯ ಸಹಕಾರದೊಂದಿಗೆ ಚಿತ್ರ ನಟ ಡಾ. ಪುನೀತ್ ರಾಜಕುಮಾರ್ ಸ್ಮರಣಾಥವಾಗಿ ವಯೋವೃದ್ಧರಿಗೆ, ಕಡುಬಡವರಿಗೆ ಆಹಾರ ವಿತರಣೆ ಮಾಡಲಾಯಿತು. ಗಾಯಕಿ ಮುನಿರತ್ನ ಮಾತನಾಡಿ ಹೆಸರಂತ ಚಿತ್ರನಟ ಪುನೀತ್ ರಾಜಕುಮಾರ್ ಅವರು ನಮ್ಮೆಲ್ಲರ ಸೇವ ಮನೋಭಾವಕ್ಕೆ ಮಾದರಿಯಾಗಿದ್ದಾರೆ, ತಮ್ಮ ಸೇವೆಗಳಿಂದಲೇ ಪರಮಾತ್ಮ ಎಂದು ಕರೆಸಿಕೊಳ್ಳುವ ಮಹಾನ್ ವ್ಯಕ್ತಿಯಾಗಿದ್ದಾರೆ, ಅವರ ಪುಣ್ಯ ಸ್ಮರಣೆಯಂದು ಮಲ್ಲೇಶ್ ರವರ ಸಹಕಾರದೊಂದಿಗೆ ವೃದ್ಧರಿಗೆ ಕಡುಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ […]

Continue Reading

ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ನವೆಂಬರ್‌ ಮೊದಲ ವಾರದಲ್ಲಿ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.   ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ […]

Continue Reading

ದೊಡ್ಡತುಮಕೂರು ವಿಎಎಸ್‌ಎಸ್‌ಎನ್ ಚುನಾವಣೆ ಕುರಿತು ಸುದ್ದಿಗೋಷ್ಠಿ : ಮೈತ್ರಿ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಆಕ್ರೋಶ ಹೊರಹಾಕಿದ ಮುಖಂಡರು

ದೊಡ್ಡಬಳ್ಳಾಪುರ : ಅಕ್ಟೋಬ‌ರ್ 26ರಂದು ನಡೆದ ವಿಎಎಸ್‌ಎಸ್‌ಎನ್‌ ಚುನಾವಣೆಯಲ್ಲಿ ಮೈತ್ರಿ ಧರ್ಮಪಾಲನೆಯಾಗಿಲ್ಲ ಜೆಡಿಎಸ್‌ನ ಹೈಕಮಾಂಡ್ ಸ್ಥಳೀಯ ನಾಯಕರಿಗೆ ಮೈತ್ರಿ ಪಾಲನೆ ಮಾಡುವಂತೆ ಸೂಚನೆ ನೀಡಿದ್ದರು ಸ್ಥಳೀಯ ಜೆಡಿಎಸ್ ನಾಯಕರು ಮೈತ್ರಿ ಉಲ್ಲಂಘನೆ ಮಾಡಿರುವುದು ಮೇಲ್ನೋಟಕೆ ಕಂಡುಬಂದಿದೆ ಎಂದು ಬಿಜೆಪಿ ಮುಖಂಡ ಮಂಜುನಾಥ್ ತಿಳಿಸಿದರು.   ದೊಡ್ಡತೂಮಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತುಮಕೂರು ವಿಎಎಸ್‌ಎಸ್‌ಎನ್ ಚುನಾವಣೆ ಕುರಿತು ನಗರದ ಪ್ರವಾಸಿಮಂದಿರದಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ ಜೆಡಿಎಸ್ ಮುಖಂಡ ಹರೀಶ್ ಗೌಡ ಮಾತನಾಡಿ, ಜೆಡಿಎಸ್‌ ಕಾಂಗ್ರೆಸ್ ಜೊತೆ ಹೊಂದಾಣಿಕೆ […]

Continue Reading

ದೊಡ್ಡಬಳ್ಳಾಪುರದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ಮಿರ್ಜಾ ಇಸ್ಮಾಯಿಲ್ ಅವರಿಗೆ ಬಹಳ ಪ್ರೀತಿಪಾತ್ರರಾಗಿದ್ದರು – ವಿ.ಎಸ್.ಹೆಗಡೆ

ಮೈಸೂರಿನ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್  ಅವರು ದೊಡ್ಡಬಳ್ಳಾಪುರದ ಸಮಗ್ರ ಅಭಿವೃದ್ದಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು  ಜವಾಹರ ನವೋದಯ  ವಿದ್ಯಾಲಯ  ನಿವೃತ್ತ  ಅಧ್ಯಾಪಕ. ವಿ.ಎಸ್.ಹೆಗಡೆ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ವತಿಯಿಂದ   ಶ್ರೀಲಕ್ಷ್ಮಿ ಲಲಿತ ನಾಟ್ಯ ಕಲಾ ಕೇಂದ್ರದಲ್ಲಿ   ನಡೆದ  ಸರ್ ಮಿರ್ಜಾ ಇಸ್ಮಾಯಿಲ್  ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ದೊಡ್ಡಬಳ್ಳಾಪುರದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ಮಿರ್ಜಾ ಇಸ್ಮಾಯಿಲ್ ಅವರಿಗೆ ಬಹಳ ಪ್ರೀತಿಪಾತ್ರರಾಗಿದ್ದರು. ಮಿರ್ಜಾ ಇಸ್ಮಾಯಿಲ್ ಅವರು […]

Continue Reading

Health Experts Advocate for Improved Vaccination Accessibility

Lorem ipsum dolor sit amet consectetur adipiscing elit suscipit hac tortor, ridiculus leo nisi donec dui id integer parturient orci, turpis pharetra porta libero aenean proin platea blandit litora. Phasellus parturient erat ut senectus conubia est, egestas convallis accumsan quis orci malesuada, eu leo suspendisse facilisis cursus. Nibh congue platea libero montes semper orci id […]

Continue Reading