ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ , ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ತೂಬಗೆರೆ ಷರೀಫ್

ತೂಬಗೆರೆ(ನ.30): ತೂಬಗೆರೆ ಹೋಬಳಿ ಹಿತರಕ್ಷಣಾ ಸಮಿತಿ ವತಿಯಿಂದ ಪಟ್ಟಣದ ಬಸ್ ನಿಲ್ದಾಣದಲ್ಲಿ 69 ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.   ಹಿರಿಯ ಕನ್ನಡಪರ ಹೋರಾಟಗಾರ ತೂಬಗೆರೆ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು ನವೆಂಬರ್ 1, 1956 ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು. ಆ ಸುದಿನದ ನೆನಪಿಗಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಮೂಲಕ ಇಂದಿನ ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, […]

Continue Reading

ನ. 30 ರಿಂದ ಡಿ. 3 ರವರೆಗೆ ಸಾಧಾರಣ ಮಳೆಯಾಗುವ ಸಾದ್ಯತೆ

ಬೆಂ.ಗ್ರಾ.ಜಿಲ್ಲೆ : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 3 ರವರೆಗೆ 5 ಮಿ.ಮೀ ಸಾಧಾರಣ ಮಳೆಯಾಗುವ ಸಾದ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮಾಹಿತಿ ನೀಡಿದೆ.   ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾಗಿ ಬೆಳೆಯ ಕಟಾವು ಕಾರ್ಯ ಪ್ರಗತಿಯಲ್ಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೈತರು ಕಟಾವಾದ ಬೆಳೆಯನ್ನು ಮಳೆಯಲ್ಲಿ ನೆನೆಯದಂತೆ ಟಾರ್ಪಲಿನ್ ಹೊದಿಕೆಯಿಂದ ಸಂರಕ್ಷಿಸಿಕೊಳ್ಳಬೇಕು.   ಒಂದು ವೇಳೆ ರಾಗಿ ಬೆಳೆ ಕಟಾವು ಮಾಡದೇ ಇರುವ ಸಂದರ್ಭದಲ್ಲಿ ಈ ದಿನಗಳಲ್ಲಿ […]

Continue Reading

ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗಾಗಿ ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ- 08029787448, ದೇವನಹಳ್ಳಿ ತಾಲ್ಲೂಕು ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ- 08027681784, ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ದೂ.ಸಂ-08027623681, ನೆಲಮಂಗಲ ತಾಲ್ಲೂಕು ಸಮಾಜ ಕಲ್ಯಾಣ […]

Continue Reading

ಡಿ.9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

ಮಂಗಳೂರು: ನ.29: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.   ಅವರು ಗುರುವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.   ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರ್ಕಾರವು ನಿರ್ಧರಿಸಿದೆ. ಅಧಿವೇಶನ ಮುಂದುವರಿಸುವ ಕುರಿತು ಡಿಸೆಂಬರ್ 9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಕಾನೂನು ಸಚಿವರು ಎಲ್ಲಾ […]

Continue Reading

ಉರುಳು ಸೇವೆ ಮಾಡುವ ಮೂಲಕ ರೈತರ ಪ್ರತಿಭಟನೆ : ಸ್ಥಳೀಯವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಸ್ಥಾಪಿಸುವಂತೆ ಅಗ್ರಹ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತಾಲ್ಲೂಕಿಗೆ ತರುವ ನಿಟ್ಟಿನಲ್ಲಿ ಅರ್ಕಾವತಿ ನದಿ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಲು ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.   ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ರೈತರು ಉರುಳು ಸೇವೆ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.   ತಾಲ್ಲೂಕಿನ ಭಾಷೆಟ್ಟಿ ಹಳ್ಳಿಯಲ್ಲಿ ಕಾರ್ಖಾನೆಗಳಲ್ಲಿ ಉತ್ಪತ್ತಿಯಾಗುವ ರಾಸಾಯನಿಕ ತ್ಯಾಜ್ಯನೀರನ್ನು ರಾಜಕಾಲವೇ ಮುಖಾಂತರ […]

Continue Reading

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ಕೊಡಲಿದ್ದೇವೆ – ಜೆಡಿಎಸ್ ಮುಖಂಡ ಶ್ರೀನಿವಾಸ್ ಗೌಡ

ದೊಡ್ಡಬಳ್ಳಾಪುರ : ಕಾಂಗ್ರೆಸ್ ಪಕ್ಷವು ಮತದಾರರಿಗೆ ಆಮಿಷಗಳನ್ನು ಒಡ್ಡಿ ಜಯಗಳಿಸಿದೆ , ತನ್ನ ಕುತಂತ್ರ ರಾಜಕಾರಣದಿಂದಾಗಿ ಈ ಉಪಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಮುಖಂಡ ಶ್ರೀನಿವಾಸ್ ಗೌಡ ತಿಳಿಸಿದರು.   ರಾಜ್ಯ ಉಪ ಚುನಾವಣೆ ಫಲಿತಾಂಶ ಕುರಿತಂತೆ ಮಾತನಾಡಿದ ಅವರು ಏನ್ ಡಿ ಎ ಅಭ್ಯರ್ಥಿಗಳ ಸೋಲನ್ನು ನಾವು ಪರಿಗಣಿಸುವುದಿಲ್ಲ ಕಾರಣ ರಾಜ್ಯದಲ್ಲಿ ಆಡಳಿತ ನೆಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತನ್ನ ಹಣಬಲ ಹಾಗೂ […]

Continue Reading

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮಸ್ತ ಕನ್ನಡಿಗರನ್ನು ಆಹ್ವಾನಿಸುವ ಉದ್ದೇಶದಿಂದ ಕನ್ನಡ ರಥ ಸಂಚಾರಿಸಲಿದೆ – ಪಿ.ಗೋವಿಂದರಾಜು

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ   ‘ಕನ್ನಡ ಜ್ಯೋತಿ ರಥ’ ದೊಡ್ಡಬಳ್ಳಾಪುರ ತಾಲ್ಲೂಕಿಗೆ ನ.25 ರಂದು ಸೋಮವಾರ  ಆಗಮಿಸುತ್ತದೆ. ನ.26 ರಂದು  ದೊಡ್ಡಬಳ್ಳಾಪುರ ನಗರದಲ್ಲಿ  ಕನ್ನಡ ರಥದ ಮೆರವಣಿಗೆ ನಡೆಯಲಿದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ  ನಡೆದ  ಅಖಿಲ ಭಾರತ ಕನ್ನಡ‌ ಸಾಹಿತ್ಯ ಸಮ್ಮೇಳನದ ಅಂಗವಾಗಿ  ನಡೆಯುವ ಕನ್ನಡ ರಥ ಮೆರವಣಿಗೆ ಪೂರ್ವ ಸಿದ್ದತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನ.25 ರಂದು ಸೋಮವಾರ ದೇವನಹಳ್ಳಿ ತಾಲ್ಲೂಕಿನ ಮೂಲಕ ಆಗಮಿಸುವ […]

Continue Reading

ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಇರುವುದು ಆಸೆ ಅಲ್ಲ ದುರಾಸೆ – ರಾಜಘಟ್ಟ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ : ಉಪಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ವಿರೋಧ ಪಕ್ಷಗಳು ಮಾಡಿದ ಸುಳ್ಳು ಆರೋಪಗಳಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣ ಸ್ವಾಮಿ ತಿಳಿಸಿದ್ದಾರೆ.   ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯದ ಉಪಚುನಾವಣೆ ಫಲಿತಂಶ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಜನತೆಗೆ ನೀಡಿರುವ ವಿಶೇಷ ಯೋಜನೆ ಹಾಗೂ ಕಾರ್ಯಕ್ರಮಗಳು ಈ ಉಪಚುನಾವಣೆಯಲ್ಲಿ ಗೆಲುವು […]

Continue Reading

ಪ್ರಪ್ರಥಮ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಕಡಲೆಕಾಯಿ ಪರಿಷೆ ಪ್ರಯುಕ್ತ 9 ಜಿಲ್ಲೆಗಳ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ

ದೊಡ್ಡಬಳ್ಳಾಪುರ : ಬಯಲು ಬಸವಣ್ಣ ಜಾತ್ರಾ ಪ್ರಯುಕ್ತ (ಕಡಲೆಕಾಯಿ ಪರಿಷೆ)ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ವತಿಯಿಂದ 9 ಜಿಲ್ಲೆಗಳ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ತಿಳಿಸಿದರು. ನಗರದ ಪ್ರವಾಸಿಮಂದಿರದಲ್ಲಿ ನೆಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಈ ಪಂದ್ಯಾವಳಿ ಮೂಲಕ ತಾಲೂಕಿನ ಯುವಕರಿಗೆ, ಮಕ್ಕಳಿಗೆ ಕುಸ್ತಿ ಕಲೆಯ ಬಗ್ಗೆ ಆಸಕ್ತಿ ಮೂಡಿಸಲು ಮುಂದಾಗಿದ್ದೇವೆ, ಈ ಕಾರ್ಯಕ್ರಮದಲ್ಲಿ ಸುಮಾರು 9 ಜಿಲ್ಲೆಗಳ ಕುಸ್ತಿಪಟುಗಳು ಪಾಲ್ಗೊಳ್ಳುತ್ತಿದ್ದು ಇದೇ ಮೊದಲ ಬಾರಿಗೆ ತಾಲೂಕಿನಲ್ಲಿ ಕುಸ್ತಿ ಪಂದ್ಯಾವಳಿಗಳನ್ನು […]

Continue Reading

ಕೊನೆ ಕ್ಷಣದಲ್ಲಿ ಅಭ್ಯರ್ಥಿಗಳ ಆಯ್ಕೆ ಉಪಚುನಾವಣೆಯಲ್ಲಿ ಸೋಲಿಗೆ ಕಾರಣವಾಗಿದೆ – ಆರ್. ಅಶೋಕ್

ಚನ್ನಪಟ್ಟಣ ಹಾಗೂ ಶಿಗ್ಗಾವಿ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯು ಕೊನೆ ಹಂತದವರೆಗೂ ನಿರ್ಧಾರವಾಗದ ಕಾರಣ ಸೂಕ್ತ ಪಕ್ಷ ಸಂಘಟನೆ ಯಾಗದ ಕಾರಣ ಚುನಾವಣೆಯಲ್ಲಿ ಸೋಲುಂಟಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.   ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಗೆ ಕೊನೆ ಕ್ಷಣದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಭರತ್ ಬೊಮ್ಮಾಯಿ ಯವರನ್ನು ಅಭ್ಯರ್ಥಿಗಳ ಆಯ್ಕೆ ಮಾಡಲಾಯಿತು, ಮೊದಲಿನಿಂದಲೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದ ನಿಖಿಲ್ ಕುಮಾರಸ್ವಾಮಿ ಏಕಾಏಕಿ ಚನ್ನಪಟ್ಟಣ ಚುನಾವಣೆಯಲ್ಲಿ ಸ್ಪರ್ಧೆಗೆ ಮುಂದಾದರು, ಅಂತೆಯೇ ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ ಸ್ಪರ್ಧಿಸುವುದು ಬೇಡ […]

Continue Reading