ನನ್ನ ಸೋಲು ನನಗೆ ಸಂತೋಷ ತಂದಿದೆ ಚನ್ನಪಟ್ಟಣದ ಗೆಲುವು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತಂದಿದೆ – ಡಿ ಕೆ ಸುರೇಶ್

ರಾಜ್ಯದ ಉಪಚುನಾವಣೆ ಫಲಿತಾಂಶ ಕುರಿತು ರಾಜ್ಯದ ಜನತೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಅಭಿವೃದ್ಧಿಯನ್ನು ಬೆಂಬಲಿಸಿದ್ದಾರೆ ಎಂದು ಮಾಜಿ ಲೋಕಸಭಾ ಸದಸ್ಯ ಡಿ ಕೆ ಸುರೇಶ್ ತಿಳಿಸಿದರು.   ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಆರೋಪಗಳಿಗೆ ತಕ್ಕ ಉತ್ತರ ನೀಡಿದ್ದಾರೆ, ರಾಜ್ಯದ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರ ಕುರಿತು ನಿರಂತರವಾಗಿ ಎನ್.ಡಿ.ಎ ಪಕ್ಷದ […]

Continue Reading

ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ಬೆಂ.ಗ್ರಾ.ಜಿಲ್ಲೆ ನ. 21: ಕ್ಷಯ ರೋಗಿಗಳಿಗೆ ಹಾಗೂ ಹೆಚ್.ಐ.ವಿ ಬಾದಿತರಿಗೆ ಅವಶ್ಯಕ ಔಷಧಿಗಳನ್ನು ಪೂರೈಸುವ ಜೊತೆಗೆ ತಪ್ಪದೇ ಸಾಮಾಜಿಕ ಸವಲತ್ತುಗಳ ಒದಗಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು.   ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ಜಿಲ್ಲೆಯಲ್ಲಿರುವ ಕ್ಷಯ ರೋಗ ಹಾಗೂ ಹೆಚ್.ಐ.ವಿ. ಸೋಂಕಿತ […]

Continue Reading

ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವಿಗಾಗಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಅವಧಿಯನ್ನು ವಿಸ್ತರಣೆ ಮಾಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.   ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವಘಟಕಗಳ […]

Continue Reading

ವರದಕ್ಷಿಣೆ ಕಿರುಕುಳ 6ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು

ದೊಡ್ಡಬಳ್ಳಾಪುರ : 6 ತಿಂಗಳ ಗರ್ಭಿಣಿ ನೇಣು ಬಿಗಿದುಕೊಂಡು ಸಾವನಪ್ಪಿರುವ ಘಟನೆ ತಾಲ್ಲೂಕಿನ ಗುಮ್ಮನಹಳ್ಳಿ ಗ್ರಾಮದಲ್ಲಿ ನೆಡೆದಿದೆ.     ರತ್ನಮ್ಮ ( 32 ವರ್ಷ ) ಮೃತ ದುರ್ದೈವಿ 3ವರ್ಷಗಳ ಹಿಂದೆ ಗುಮ್ಮನಹಳ್ಳಿ ಗ್ರಾಮದ ಸುರೇಶ್ ಅನ್ನು ಪ್ರೀತಿಸಿ ಮದುವೆಯಾಗಿದ್ದು, 3ತಿಂಗಳು ಸುಖವಾಗಿ ಸಾಗಿದ ಸಂಸಾರ ತುಂಬಾ ದಿನ ಉಳಿಯಲಿಲ್ಲ ನಂತರ ಪ್ರತಿನಿತ್ಯ ರತ್ನಮ್ಮಳಿಗೆ ಮನೆಯಿಂದ ಹಣ ತರುವತ್ತೆ ಅತ್ತೆ ಮಾವ ಮತ್ತು ಗಂಡ ಪೀಡಿಸುತ್ತಿದ್ದರು ಈ ಕಾಟ ತಾಳಲಾರದೆ ನೆನ್ನೆ ಕುಟುಂಬಸ್ಥರಿಗೆ ವಾಟ್ಸ್ ಆಪ್ […]

Continue Reading

ಸಕ್ಕರೆಗೊಲ್ಲಹಳ್ಳಿ ನೂತನ ಗ್ರಾಮಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : ಹಲವು ಆರೋಪ ಗೊಂದಲಗಳ ನಡುವೆಯೂ ಸಕ್ಕರೆ ಗೊಲ್ಲಹಳ್ಳಿ ಪಂಚಾಯಿತಿಯ ನೂತನ ಕಚೇರಿಯನ್ನು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕರಾದ ಧೀರಜ್ ಮುನಿರಾಜು ಉದ್ಘಾಟಿಸಿ ಶುಭಹಾರೈಸಿದರು. ಸುಮಾರು 28,50,000 ರೂಪಾಯಿಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಆಡಳಿತ ಕಚೇರಿಯನ್ನು ಗ್ರಾಮ ಪಂಚಾಯತಿಯ ಆಡಳಿತ ವರ್ಗದ ಜೊತೆಗೂಡಿ ಉದ್ಘಾಟಿಸಿದರು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆಧುನಿಕತೆಗೆ ಸರಿ ಹೊಂದುವಂತೆ ಸಕ್ಕರೆ ಗೊಲ್ಲಹಳ್ಳಿ ಪಂಚಾಯತಿಯು ತನ್ನ ಸ್ವಂತ ಅನುದಾನದಿಂದ ನರೇಗಾ ಯೋಜನೆಯ ಸಹಯೋಗದೊಂದಿಗೆ […]

Continue Reading

ನವೋದಯ ಚಾರಿಟೇಬಲ್ ಟ್ರಸ್ಟ್ ನವತಿಯಿಂದ ಗ್ರಾಮೀಣ ಆರೋಗ್ಯ ಮತ್ತುಪರಿಸರ ಅಧ್ಯಯನ ಕೇಂದ್ರ ಉದ್ಘಾಟನೆ : ಪದ್ಮಶ್ರೀ ಪುರಸ್ಕೃತರಾದ ಡಾ.ಸಿ.ಆರ್. ಚಂದ್ರಶೇಖರ್ ಭಾಗಿ

ದೊಡ್ಡಬಳ್ಳಾಪುರ: ಕರೋನಾ ನಂತರ ಶೇಕಡಾ ಮೂವತ್ತರಷ್ಷು ಜನತೆ ಮಾನಸಿಕ ಖಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಖ್ಯಾತ ಮನೋವೈದ್ಯರು ಪದ್ಮಶ್ರೀ ಪುರಸ್ಕೃತರಾದ ಡಾ.ಸಿ.ಆರ್‌.ಚಂದ್ರಶೇಖರ್ ತಿಳಿಸಿದರು. ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸುರಾನಾ ಕಾಲೇಜು ಇವರ ಸಹಬಾಗಿತ್ವದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚಿನ ಸಮೀಕ್ಷೆ ಪ್ರಕಾರ ಮನುಷ್ಯ ಅತಿಯಾದ ಒತ್ತಡಗಳಿಗೆ ಒಳಗಾಗಿ ಮಾನಸಿಕವಾಗಿ ಕುಗ್ಗುತ್ತಿದ್ದಾನೆ […]

Continue Reading

ನವ ಕರ್ನಾಟಕ ಯುವ ಶಕ್ತಿ ವೇದಿಕೆ: ಉಚಿತ ಜಾನುವಾರು ಮೇವು ಮತ್ತು ನೀರು ವಿತರಣೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿದ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ.

ಬೆಂಗಳೂರು:ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರರಾದ ಕೆ.ಹೆಚ್ ಮುನಿಯಪ್ಪ ಅವರು, ನವ ಕರ್ನಾಟಕ ಯುವ ಶಕ್ತಿ ವೇದಿಕೆ, ವತಿಯಿಂದ ಘಾಟಿ ಸುಬ್ರಹ್ಮಣ್ಯ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ ಭಾಗವಾಗಿ ಆಯೋಜಿಸಿರುವ “ಉಚಿತ ಜಾನುವಾರು ಮೇವು ಮತ್ತು ನೀರು ವಿತರಣೆ” ಎಂಬ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿದರು.   ನಂತರ ಮಾತನಾಡಿದ ಅವರು ದನಗಳ ಜಾತ್ರೆಯ ರೈತರಿಗೆ ಉಚಿತ ಮೇವು ವಿತರಿಸಲು ಮುಂದಾಗಿರುವ ನವ ಕರ್ನಾಟಕ ಯುವಶಕ್ತಿ ವೇದಿಕೆಯವರು […]

Continue Reading

ಮಾಜಿ ಅರೆಸೇನಾ ಪಡೆ ಯೋಧನ ಕುಟುಂಬದ ಮೇಲೆ ಹಲ್ಲೆ ಸಲ್ಲದು : ಕೂಡಲೇ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ – ನರಸಿಂಹ ರೆಡ್ಡಿ

ದೊಡ್ಡಬಳ್ಳಾಪುರ : ಭಾರತ ದೇಶದ ಗಡಿ ಭಾಗವನ್ನು ಕಾಯುತ್ತಿರುವುದು ನಮ್ಮ ಅರೇಸೇನಾ ಪಡೆಗಳು ದೇಶದ ನಕ್ಸಲ್ ಹಾಗೂ ಭಯೋತ್ಪಾದನೆ ವಿರುದ್ಧ ಸದಾ ಹೋರಾಟ ನೆಡೆಸುವ ನಮ್ಮ ಅರೆಸೇನಾ ಪಡೆಯ ಯೋಧರ ಕುಟುಂಬಕ್ಕೆ ರಕ್ಷಣೆ ಇಲ್ಲಾ ಎಂದು ಕರ್ನಾಟಕ ಸಿಎಪಿಎಫ್ ನ ಅಧ್ಯಕ್ಷರಾದ ನರಸಿಂಹ ರೆಡ್ಡಿ ತಮ್ಮ ಆಕ್ರೋಶವ್ಯಕ್ತಪಡಿಸಿದರು.   ದೊಡ್ಡಬಳ್ಳಾಪುರ ತಾಲೂಕು ತೂಬಗೆರೆಯ ನಿವಾಸಿ ರಾಜಗೋಪಾಲ್ 20 ವರ್ಷ ಸಿಆರ್ ಪಿಎಫ್ ನಲ್ಲಿ ಯೋಧನಾಗಿ ಸೇವೆ ಸಲ್ಲಿಸಿ, ಇತ್ತಿಚೇಗೆ ನಿವೃತ್ತಿಯನ್ನ ಪಡೆದು, ಖಾಸಗಿ ಸಂಸ್ಥೆಯಲ್ಲಿ ಭದ್ರತಾ ಮುಖ್ಯಸ್ಥರಾಗಿ […]

Continue Reading

ಸಮಾಜ ಪರಿವರ್ತನೆಗೆ ದಾಸಶ್ರೇಷ್ಠ ಕನಕರ ದಾರಿಯಲ್ಲಿ ನಡೆಯೋಣ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಬೆಂ.ಗ್ರಾ.ಜಿಲ್ಲೆ, ನ.18(ವಿಜಯ ಮಿತ್ರ ):- 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತರಾದ ಕನಕದಾಸರು ಪ್ರಮುಖರು. ಸಮಾಜದ ಪರಿವರ್ತನೆ ಹಾಗೂ ಮೇಲು ಕೀಳು ಎಂಬ ಮನೋಭಾವನೆ ಹೋಗಲಾಡಿಸಲು ದಾಸಶ್ರೇಷ್ಠ ಕನಕದಾಸರ ದಾರಿಯಲ್ಲಿ ನಾವೇಲ್ಲರೂ ನಡೆಯಬೇಕಿದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.   ಬೆಂಗಳೂರು ಗ್ರಾಮಾಂತರ […]

Continue Reading

ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ

ದೊಡ್ಡಬಳ್ಳಾಪುರ(ನ.18): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ  ದಾಸವರೇಣ್ಯ ಕನಕದಾಸ ಜಯಂತಿಯನ್ನು  ಆಚರಿಸಲಾಯಿತು.   ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ ಭಾವಚಿತ್ರವಿಟ್ಟು  ಪುಷ್ಪಾರ್ಚನೆ, ಅನ್ನದಾನ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು.ತೂಬಗೆರೆ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ರವಿಸಿದ್ದಪ್ಪ ಮಾತನಾಡಿ ಕನಕದಾಸರ ಹುಟ್ಟು, ಬಾಲ್ಯದ ಜೀವನ ಅವರ ಸಾಧನೆಗಳನ್ನು ತಿಳಿಸಿಕೊಟ್ಟರು. ಕನಕದಾಸರು ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ನೀಡಿದ ಕೊಡುಗೆ ಅನನ್ಯವಾಗಿದೆ. ಉಡುಪಿ ಶ್ರೀ ಕೃಷ್ಣನ ಪರಮ ಭಕ್ತರಾದ ಕನಕದಾಸರು, […]

Continue Reading