ತಾಲೂಕಿನ ಸಾಮಾನ್ಯ ಜನರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಿ – ಎ. ನಂಜಪ್ಪ

ದೊಡ್ಡಬಳ್ಳಾಪುರ : ಬಡ ವರ್ಗದ ಜನರ ಪಡಿತರ ಚೀಟಿಗಳನ್ನು ಏಕಾ ಏಕಿ ರದ್ದುಗೊಳಿಸಿ ಬಡವರ ಅನ್ನಕ್ಕೆ ಕನ್ನ ಹಾಕಿದಂತಾಗಿದೆ, ಬಡ ಜನರು ಪಡಿತರ ಚೀಟಿಗಾಗಿ ಪ್ರತಿನಿತ್ಯವೂ ತಾಲೂಕು ಕಚೇರಿಗೆ ಅಲೆದಾಡುವಂತಾಗಿದೆ ಈ ಕೂಡಲೇ ಈ ಸಮಸ್ಯೆಯನ್ನ ಸೂಕ್ತರೀತಿಯಲ್ಲಿ ಪರಿಹರಿಸಬೇಕು ಎಂದು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ನಂಜಪ್ಪ ಆಕ್ರೋಶ ವ್ಯಕ್ತಪಡಿಸಿದರು.   ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ವತಿಯಿಂದ ತಾಲೂಕಿನ ಸಾಮಾನ್ಯ ಜನರ […]

Continue Reading

ಟೋಲ್ ಶುಲ್ಕ ತಪ್ಪಿಸಲು ಅಡ್ಡದಾರಿಯಲ್ಲಿ ಬಂದ ಬಿಬಿಎಂಪಿ ಕಸದ ಲಾರಿಗಳು: ಕುರುಬರಹಳ್ಳಿ ಸಮೀಪದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಗ್ರಾಮಸ್ಥರು

ದೊಡ್ಡಬಳ್ಳಾಪುರ : ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ಚಿಗರೇನಹಳ್ಳಿ ಸಮೀಪದ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕಕ್ಕೆ ಪ್ರತಿದಿನ ನೂರಾರು ಲಾರಿಗಳು ಬಿಬಿಎಂಪಿ ವ್ಯಾಪ್ತಿಯಿಂದ ಕಸ ತುಂಬಿಕೊಂಡು ಬರುತ್ತಿವೆ. ಇವರೆಗೂ ಕಸ ತುಂಬಿದ ದಾಬಸ್‌ಪೇಟೆ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕಕ್ಕೆ ಬರುತ್ತಿದ್ದವು. ಆದರೆ, ಹುಲಿಕುಂಟೆ ಸಮೀಪ ಟೋಲ್ ಪ್ರಾರಂಭವಾದ ನಂತರ ಟೋಲ್ ಶುಲ್ಕ ತಪ್ಪಿಸಿಕೊಳ್ಳಲು ಈಗ ದೊಡಬಳ್ಳಾಪುರ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಮೂಲಕ ಸಂಚರಿಸಲು ಪ್ರಾರಂಭಿಸಿವೆ ಎಂದು ನಗರಸಭೆ ಸದಸ್ಯ ಬಂತಿ ವೆಂಕಟೇಶ್ ತಿಳಿಸಿದರು. ತಾಲೂಕಿನ […]

Continue Reading

ರೈಲಿಗೆ ಸಿಲುಕಿ ಆಟೋ ಚಾಲಕನ ಆತ್ಮಹತ್ಯೆ : ಮೃತಸ್ಥಳದಲ್ಲಿ ಆಟೋ ಪತ್ತೆ

ಸರ್ಜಾಪುರ – ಮಾರತಹಳ್ಳಿ ಮಾರ್ಗದ ಹುಸ್ಕೂರು ಗೇಟ್ ಬಳಿ ಅಪರಿಚಿತ ವ್ಯಕ್ತಿ ಸಾವಿಗೆ ಶರಣಾಗಿರುವ ಘಟನೆ ನೆಡೆದಿದೆ.   ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಓರ್ವ ಆಟೋ ಚಾಲಕನಾಗಿದ್ದು, ತಾಲ್ಲೂಕಿನ ಹುಸ್ಕೂರು ಗೇಟ್ ಬಳಿ ರೈಲಿಗೆ ಸಿಲುಕಿ ಸಾವನಪ್ಪಿದ್ದಾಗಿ ತಿಳಿದುಬಂದಿದೆ.   ಮೃತಪಟ್ಟ ವ್ಯಕ್ತಿಯು ಆಟೋ ಚಾಲಕರ ಸಮವಸ್ತ್ರ ಧರಿಸಿದ್ದು, ಮೃತ ವ್ಯಕ್ತಿಯ ಸಮೀಪದಲ್ಲಿ ಆಟೋ(KA01A P1242)ಒಂದು ಪತ್ತೆಯಾಗಿದೆ. ಸಂಬಂಧಪಟ್ಟ ವಾರಸುದಾರರು ಕೂಡಲೇ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.   ಆಟೋ ಚಾಲಕರ ಆತ್ಮಹತ್ಯೆ ಕುರಿತು ಬೆಂಗಳೂರು ಆಟೋ […]

Continue Reading

ಶೇಕಡಾ 100 ರಷ್ಟು ಕನ್ನಡ ಬಳಕೆ ನಮ್ಮಲ್ಲಿ ಮಾಡುತ್ತಿದ್ದಾರೆ ಎಂಬುದು ನಮ್ಮ ಹೆಮ್ಮೆ – ವಿ. ಬಸವರಾಜು

ದೊಡ್ಡಬಳ್ಳಾಪುರ, ( ವಿಜಯಮಿತ್ರ ) : 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ರಸ್ತೆ ನಿಗಮ ದೊಡ್ಡಬಳ್ಳಾಪುರ ಘಟಕ ಹಾಗೂ ಕನ್ನಡ ಕ್ರಿಯಾ ಸಮಿತಿ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.   ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಾಧಿಕಾರಿ ವಿ. ಬಸವರಾಜು ಮಾತನಾಡಿ ಕನ್ನಡ ಭಾಷೆಯನ್ನು ಶೇಕಡಾ 100ರಷ್ಟು ನಮ್ಮ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಬಳಸುತ್ತಿದ್ದೇವೆ ಎಂದು ಹೇಳಲು ಹೆಮ್ಮೆ ಅನಿಸುತ್ತದೆ. […]

Continue Reading

ಜಿಲ್ಲೆಗೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ರಾಷ್ಟ್ರೀಯ ಸದಸ್ಯರಾದ ಡಾ. ಪಿ ಪಿ. ವಾವಾ ಭೇಟಿ :ಸಫಾಯಿ ಕರ್ಮಚಾರಿಗಳ ಕುಂದು ಕೊರತೆ ಕುರಿತು ಅಹವಾಲುಗಳ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ರಾಷ್ಟ್ರೀಯ ಸದಸ್ಯರಾದ ಡಾ. ಪಿ ಪಿ. ವಾವಾ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ PEHS ಸಲಹಾ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.   ಸೋಮವಾರ ಭಾರತ ಸರ್ಕಾರ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಡಾ. ಪಿ ಪಿ. ವಾವಾ ಅವರು ಭೇಟಿನೀಡಿ ಕರ್ಮಚಾರಿಗಳ ಅಹವಾಲುಗಳನ್ನು ಸ್ವೀಕರಿಸಿದರು.   ಈ ಸಂದರ್ಭದಲ್ಲಿ ಆಯೋಗದ ಜಿಲ್ಲಾ ಸದಸ್ಯರಾದ ಆರ್ ವಿ ಮನು ಮಾತನಾಡಿ ಸಫಾಯಿ […]

Continue Reading

ಮಹಿಳೆಯರು ಶೌರ್ಯ-ಧೈರ್ಯ ಬೆಳೆಸಿಕೊಳ್ಳಿ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ.11: ಮಹಿಳೆಯರು ವೀರ ವನಿತೆ ಒನಕೆ ಓಬವ್ವರ ಆತ್ಮಸ್ಥೈರ್ಯದೊಂದಿಗೆ ಸಮಯ ಪ್ರಜ್ಞೆ, ಧೈರ್ಯ, ಶೌರ್ಯ ಮತ್ತು ಸಾಹಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ವೀರವನಿತೆ ಒನಕೆ […]

Continue Reading

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಸಹಕರಿಯಾಗಿದೆ – ಪ್ರೊ. ಕೆ. ಆರ್.ರವಿಕಿರಣ್

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ತಾಲ್ಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜನೆ ಮಾಡಲಾಗಿತ್ತು.     ಕ್ಷೇತ್ರ ಯೋಜನಾಧಿಕಾರಿಗಳಾದ ಸುಧಾ ಭಾಸ್ಕರ್ ನಾಯಕ್ ಕಾರ್ಯಕ್ರಮ ಕುರಿತು ಪ್ರಸ್ತಾವಿಕ ಮಾತನಾಡುವ ಮೂಲಕ ಯೋಜನೆಯಿಂದ ರಾಜ್ಯದಾದ್ಯಂತ ಜನತೆ ಪಡೆದುಕೊಂಡಿರುವ ಉಪಯೋಗವನ್ನು ಹಾಗೂ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿಗಳಾಗಿ ಹೇಗೆ ಜೀವನ ಸಾಗಿಸುತ್ತಾರೆ ಎಂಬುದನ್ನು ಸಭಿಕರಿಗೆ ತಿಳಿಸಿದರು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. […]

Continue Reading

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ : ಸಚಿವ ಡಾ ಹೆಚ್ ಸಿ ಮಹದೇವಪ್ಪ

IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ […]

Continue Reading

ಶೈಕ್ಷಣಿಕ ಸಾಲಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಆರ್ಯ ವೈಶ್ಯ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.     ಅರಿವು ಯೊಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ಸಿ.ಇ.ಟಿ./ ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ 1,00,000 ರೂ.ಗಳ ಸಾಲವನ್ನು ಶೇ.02 ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು.   ವ್ಯಾಸಂಗ […]

Continue Reading

ಮಕ್ಕಳ ಮಾರಾಟ ಶಿಕ್ಷಾರ್ಹ ಅಪರಾಧ*: ಜಿಲ್ಲಾಧಿಕಾರಿ ಎನ್. ಶಿವಶಂಕರ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರನ್ವಯ 05 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ 01 ಲಕ್ಷ ರೂಗಳ ದಂಡ ವಿಧಿಸಲಾಗುವುದು.   ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 03 ವರ್ಷಗಳಿಗೆ ಕಡಿಮೆ ಇಲ್ಲದಂತೆ 07 ವರ್ಷಗಳವರೆಗೆ ವಿಸ್ತರಣೆ’ ಮಾಡಬಹುದಾಗಿದೆ.     ಈ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ […]

Continue Reading