ಯಶಸ್ವಿನಿ ಯೋಜನೆಯ ಸೌಲಭ್ಯ ಪಡೆಯಲು ಬೇಕಾಗುವ ಒಂದಷ್ಟು ಮಾಹಿತಿ… ಸುದ್ದಿ ನೋಡಿ…

. ಗ್ರಾ.ಜಿಲ್ಲೆ, :-ಸಹಕಾರ ಇಲಾಖೆಯು 2025–26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ.   ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, ನೌಕರರ ಸಹಕಾರ ಸಂಘಗಳ ಸದಸ್ಯರು ಯೋಜನೆಗೆ ಅರ್ಹರಾಗಿರುವುದಿಲ್ಲ.   ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯ ಸರ್ಕಾರಿ ನೌಕರರಾಗಿದ್ದರೂ ಸೌಲಭ್ಯ ಸಿಗುವುದಿಲ್ಲ. ಈಗಾಗಲೇ ಒಂದು ಯೋಜನೆ ಅಡಿ ಆರೋಗ್ಯ ಸೌಲಭ್ಯ ಪಡೆಯುತ್ತಿರುವವರು ಯಶಸ್ವಿನಿ ಅಡಿ ನೋಂದಾಯಿಸಿಕೊಳ್ಳುವಂತಿಲ್ಲ ಎಂದು ವಿವರಿಸಲಾಗಿದೆ.   ಗ್ರಾಮೀಣ ಪ್ರದೇಶದ ಒಂದು ಕುಟುಂಬದಲ್ಲಿ ನಾಲ್ಕು […]

Continue Reading

ಗಿರಿಜನ ಉಪಯೋಜನೆಯಡಿ ಕುರಿ / ಮೇಕೆ ಘಟಕ ಸ್ಥಾಪನೆಗಾಗಿ ಅರ್ಜಿ ಆಹ್ವಾನ*

ಬೆಂ.ಗ್ರಾ. ಜಿಲ್ಲೆ, : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.   ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಲ್ಲಿ ನೊಂದಾಯಿತ, ಜಿಲ್ಲೆಯ ಚಾಲ್ತಿಯಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯತ್ವ ಹೊಂದಿರುವ 18 ರಿಂದ 60 ವರ್ಷ ವಯೋಮಿತಿಯೊಳಗಿನ ಪರಿಶಿಷ್ಟ ಪಂಗಡದ (ಮಹಿಳಾ ಸದಸ್ಯರಿಗೆ ಮೊದಲ ಆದ್ಯತೆ ಕೊಡಲಾಗುವುದು) ಅರ್ಹ ಅರ್ಜಿದಾರರು ಡಿಸೆಂಬರ್ 17 ರೊಳಗಾಗಿ ಅರ್ಜಿಗಳನ್ನು ಭರ್ತಿ ಮಾಡಿ […]

Continue Reading

ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್. ಧೀರಜ್ ಮುನಿರಾಜು ಯುವ ಬ್ರೀಗೆಡ್ ವತಿಯಿಂದ ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್ ಆಯೋಜನೆ

ದೊಡ್ಡಬಳ್ಳಾಪುರದಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಕಬ್ಬಡಿ ಚಾಂಪಿಯನ್ ಶಿಪ್ ಪಂದ್ಯಾವಳಿಯನ್ನ ಶ್ರೀ ಧೀರಜ್ ಮುನಿರಾಜು ಯುವ ಬ್ರಿಗೇಡ್ ವತಿಯಿಂದ ಜನವರಿ 6, 7 ಮತ್ತು 8ರಂದು ಆಯೋಜಿಸಲಾಗಿದೆ ಎಂದು ಕರ್ನಾಟಕ ಕಬಡ್ಡಿ ಅಸೋಸಿಯೇಷನ್ ಮಾಜಿ ಕಾರ್ಯದರ್ಶಿ ಮುನಿರಾಜು ತಿಳಿಸಿದರು.   ನಗರದ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ನಡೆದ ಪಂದ್ಯಾವಳಿ ಕುರಿತ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ […]

Continue Reading

ಕೆರೆಯ ಸುತ್ತ ಕಾಂಪೌಂಡ್ ನಿರ್ಮಿಸುವ ಮೂಲಕ ಕೆರೆ ಅಂಗಳದ ಒತ್ತುವರಿಯನ್ನು ತಪ್ಪಿಸಿ – ಯು. ಮುನಿರಾಜು

ದೊಡ್ಡಬಳ್ಳಾಪುರ : ಕೆರೆಯಂಗಳದಲ್ಲಿ ಕಸ ವಿಲೇವಾರಿಯನ್ನು ಸಂಪೂರ್ಣವಾಗಿ ನಿಷೇಧಿಸಬೇಕಿದೆ ಹಾಗೂ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತರದೇ ಕೆರೆ ಅಂಗಳದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆಯನ್ನು ಅಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಭೇಟಿ ಕೊಟ್ಟು ರಸ್ತೆ ತೆರವುಗೊಳಿಸಬೇಕಿದೆ ಎಂದು ಪ್ರಬುದ್ಧ ಕರ್ನಾಟಕ ಭೀಮಸೇನೆ ರಾಜ್ಯಾಧ್ಯಕ್ಷ ಯು.ಮುನಿರಾಜು ಅಗ್ರಹಿಸಿದರು. ಕಂಟನಕುಂಟೆ ಪಂಚಾಯಿತಿ ವ್ಯಾಪ್ತಿಯ ಪಾಲನ ಜೋಗಹಳ್ಳಿ ಕೆರೆ ಅಂಗಳದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆಯನ್ನು ತೆರವುಗೊಳಿಸುವಂತೆ ಅಗ್ರಹಿಸಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ಹಿಂದೆ […]

Continue Reading

ಅಂತರ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟ 2024: ವಿಜೇತರನ್ನು ಅಭಿನಂದಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ವರ್ಗ

ದೊಡ್ಡಬಳ್ಳಾಪುರ :ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವತಿಯಿಂದ ನಡೆದ ಅಂತರ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟ 2024 ರಲ್ಲಿ ಭಾಗವಹಿಸಿ ಜಯಗಳಿಸಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಪಟುಗಳನ್ನು ಕಾಲೇಜಿನ ಸಿಬ್ಬಂದಿ ವರ್ಗ ಅಭಿನಂದಿಸಿ ಶುಭಹಾರೈಸಿದರು.   ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಪಟುಗಳು ಅಂತರ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟ 2024ದಲ್ಲಿ ಭಾಗವಹಿಸಿ ಚಿನ್ನದ ಪದಕ (10),ಬೆಳ್ಳಿ ಪದಕ – (6), ಕಂಚು ಪದಕ – (4 ) ಗಳನ್ನು ಗಳಿಸಿ 122 ಅಂಕಗಳನ್ನು ಪಡೆಯುವ ಮೂಲಕ ಪುರುಷ […]

Continue Reading

2 ಕೋಟಿ ವೆಚ್ಚದಲ್ಲಿ 5 ಚೆಕ್ ಡ್ಯಾಂಗಳಿಗೆ ಸಚಿವರಿಂದ ಗುದ್ದಲಿ ಪೂಜೆ

ದೇವನಹಳ್ಳಿ : ತಾಲ್ಲೂಕಿನ ಹಳ್ಳಿಗಳಲ್ಲಿ ನೀರಿನ ಉಳಿತಾಯ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ 5 ಚೆಕ್ ಡ್ಯಾಂಗಳ ನಿರ್ಮಾಣದ ಕಾಮಗಾರಿಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಚಾಲನೆ ನೀಡಿದರು.   ಸಣ್ಣ ನೀರಾವರಿ ಇಲಾಖೆ ವತಿಯಿಂದ ಮಾಳಿಗೆಹಳ್ಳಿ – ಅತ್ತಿಬೆಲೆ ಬಳಿ ನಿರ್ಮಿಸಲಾಗುತ್ತಿರುವ ಚೆಕ್ ಡ್ಯಾಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅವರು ಒಟ್ಟು 5 ಚೆಕ್ ಡ್ಯಾಂಗಳನ್ನು ಮಾಳಿಗೆಹಳ್ಳಿ, […]

Continue Reading

ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ‌ಎಲ್ಲಾ ಕನ್ನಡಿಗರ ಮೇಲಿದೆ – ಶಾಂತಮ್ಮನಾಗರಾಜ್

ದೊಡ್ಡಬಳ್ಳಾಪುರ : ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗಳ ಹಿರಿಮೆಯನ್ನು ನಮ್ಮ  ವಿದ್ಯಾರ್ಥಿಗಳು ಅರಿಯುವಂತೆ   ಮಾಡಬೇಕು.  ಕನ್ನಡ ಮಾಧ್ಯಮದಲ್ಲಿ‌ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಬೇಕೆಂದು ಎಂದು  ಮುಖ್ಯಶಿಕ್ಷಕಿ ಶಾಂತಮ್ಮನಾಗರಾಜ್ ತಿಳಿಸಿದರು.   ‌‌‌‌      ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ  ವಿದ್ಯಾರ್ಥಿನಿಲಯದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ‌ ಕನ್ನಡ ಭಾಷೆಗೆ ಸಾವಿರಾರು ವರ್ಷಗಳ‌ ಇತಿಹಾಸವಿದೆ. ಕನ್ನಡ ಭಾಷೆಯನ್ನು ಉಳಿಸಿ […]

Continue Reading

ದೊಡ್ಡಬಳ್ಳಾಪುರ: ಕೆಆರ್‌ಎಸ್ ಪಕ್ಷದ ನೂತನ ಕಚೇರಿ ಪ್ರಾರಂಭ: ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗಿ

ದೊಡ್ಡಬಳ್ಳಾಪುರ : ಕರ್ನಾಟಕ ರಾಷ್ಟ್ರ ಸಮಿತಿಯು ಭ್ರಷ್ಟಾಚಾರ ನಿರ್ಮೂಲನೆಗಾಗಿ ಶ್ರಮಿಸುವುದಷ್ಟೇ ಅಲ್ಲದೆ ನಾಡು-ನುಡಿ ಭಾಷೆ ಜಲದ ವಿಚಾರಗಳಲ್ಲಿ ಹೋರಾಟಕ್ಕೆ ಸದಾ ಸಿದ್ಧ, ರವಿಕೃಷ್ಣ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ನಮ್ಮ ಹೋರಾಟ ನಿರಂತರವಾಗಿ ಸಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ತಿಳಿಸಿದರು. ಕೆ ಆರ್ ಎಸ್ ಪಕ್ಷ ತಾಲೂಕು ಘಟಕದ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆ ಆರ್ ಎಸ್ ಸೇನಾನಿಗಳ ಸಹಾಯದೊಂದಿಗೆ ಇಂದು ತಾಲೂಕಿನಲ್ಲಿ ಕಚೇರಿಯನ್ನು ಪ್ರಾರಂಭಿಸಲಾಗಿದೆ . ಸಾರ್ವಜನಿಕರ ಅನುಕೂಲಕ್ಕಾಗಿ ಪಕ್ಷದ […]

Continue Reading

ಜಿಲ್ಲಾ ಮಟ್ಟದ ಯುವಜನೋತ್ಸವ : ಕಾರ್ಯಕ್ರಮದಲ್ಲಿ ಸಂಸದ ಡಾ. ಕೆ. ಸುಧಾಕರ್ ಭಾಗಿ

ಬೆಂ. ಗ್ರಾ. ಜಿಲ್ಲೆ :- ಭಾರತವು ಜನಸಂಖ್ಯೆಯಲ್ಲಿ ಶೇ. 60 ರಷ್ಟು ಯುವಕರಿಂದ ಕೂಡಿದ ದೇಶ. ನಮ್ಮ ಯುವಶಕ್ತಿಯೇ ಭಾರತ ದೇಶದ ನಿಜವಾದ ಆಸ್ತಿ. ಶಾಲಾ-ಕಾಲೇಜು ಹಂತದಲ್ಲೇ ಯುವ ಸಮೂಹಕ್ಕೆ ಕೌಶಲ್ಯಭರಿತ ಶಿಕ್ಷಣ ನೀಡುವ ಕೆಲಸ ಆಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ನವದೆಹಲಿ, ಬೆಂಗಳೂರು […]

Continue Reading