ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.   ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡ ನಂತರ ಮಾತನಾಡಿದ ಅವರು ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ.   ಶಾಂತಿಗಾಗಿ […]

Continue Reading

ಶಾಸಕ ಧೀರಜ್ ಮುನಿರಾಜು ಅವರಿಗೆ ಹುಟ್ಟುಹಬ್ಬ ಶುಭಾಶಯ ಕೋರಿದ ಕರವೇ ಕುಟುಂಬ

ದೊಡ್ಡಬಳ್ಳಾಪುರ : ತಾಲೂಕಿನ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ರಾಜ್ಯ ಬಿಜೆಪಿ ಯುವ ಘಟಕ ಅಧ್ಯಕ್ಷರಾದ ಧೀರಜ್ ಮುನಿರಾಜುರವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ( ನಾರಾಯಣ ಗೌಡರ ಬಣ )ಯ ಪುರುಷೋತ್ತಮ್ ಗೌಡ ನೇತೃತ್ವದ ತಂಡ ಸನ್ಮಾನಿಸಿ ಹುಟ್ಟು ಹಬ್ಬದ ಶುಭಾಶಯಗಳು ಕೋರಿದರು. ಶಾಸಕರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಕೆ ಕತ್ತರಿಸುವ ಮೂಲಕ ಸನ್ಮಾನಿತರನ್ನು ಗೌರವಿಸಲಾಯಿತು .   ಬೆಂಗಳೂರು ಗ್ರಾಮಾಂತರ ಕರವೇ ಘಟಕದ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಮಾತನಾಡಿ ತಾಲೂಕಿಗೆ ಯುವ […]

Continue Reading

ಕೂಸಿನ ಮನೆ’ಗೆ ಯುನಿಸೆಫ್ ತಂಡ ಭೇಟಿ : ಸಾಧಕ, ಬಾಧಕಗಳ ಬಗ್ಗೆ ಅಧ್ಯಯನ ನಡೆಸಿದ ತಂಡ

ಹೊಸಕೋಟೆ ತಾಲ್ಲೂಕಿನ ಬೈಲನರಸಪುರ ಗ್ರಾಮ ಪಂಚಾಯಿತಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕೂಸಿನ ಮನೆ’ ಕಾರ್ಯಕ್ರಮದ ಪರಿಣಾಮಗಳ ಕುರಿತು ಅಧ್ಯಯನ ಮಾಡಲು ಯುನಿಸೆಫ್ ಸಂಸ್ಥೆಯ ರಿನಿ ಕುರಿನ್ ಮುಖ್ಯಸ್ಥರು ಮತ್ತು ಪರಿಣಿತರ ತಂಡ ಭೇಟಿ ನೀಡಿದರು.   ನರೇಗಾ ಕೆಲಸಕ್ಕೆ ಹೋಗುವ ಕೂಲಿಕಾರರ ಮಕ್ಕಳಿಗಾಗಿ ವಿಶೇಷವಾಗಿ ಗ್ರಾಮ ಪಂಚಾಯತಿಗೆ ಒಂದರಂತೆ ತೆರೆದಿರುವ ಕೂಸಿನ ಮನೆಯು ಹೇಗೆ ಕಾರ್ಯ ನಿರ್ವಹಿಸುತ್ತಿದೆ ಮತ್ತು ಅದರಿಂದ ಮಕ್ಕಳಿಗೆ ಸಿಗುತ್ತಿರುವ ಸಾಧಕ, ಬಾಧಕಗಳ ಬಗ್ಗೆ ಅಧ್ಯಯನ ನಡೆಸಿತು.   ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ […]

Continue Reading

ನಗರ ಭಾಗದಲ್ಲಿ ನಾಯಿ ಕೊಡೆಗಳಂತೆ ತಲೆ ಎತ್ತುತ್ತಿವೆ CL7 ಬಾರ್ ಅಂಡ್ ರೆಸ್ಟೋರೆಂಟ್ ಗಳು – ಯು ಮುನಿರಾಜು

ದೊಡ್ಡಬಳ್ಳಾಪುರ : ಕೆ.ಸಿ.ಪಿ.ಸರ್ಕಲ್ CL7 ಬಾರ್ ಅಂಡ್ ರೆಸ್ಟೋರೆಂಟ್ ಲೈಸೆನ್ಸ್ ಗಾಗಿ ನೀಡಿರುವ ಅರ್ಜಿಯನ್ನು ಪರಿಶೀಲಿಸಿ, ಅನುಮತಿ ಕೊಡಬಾರದೆಂದು ಪ್ರಬುದ್ಧ ಕರ್ನಾಟಕ ಭೀಮ ಸೇನೆ ಆಗ್ರಹಿಸಿ ತಾಲ್ಲೂಕಿನ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು.   ಈ ಕುರಿತು ಮಾತನಾಡಿದ ಅವರುದೊಡ್ಡಬಳ್ಳಾಪುರ ತಾಲ್ಲೂಕು, ಕೆ.ಸಿ.ಪಿ.ಸರ್ಕಲ್’ ಹತ್ತಿರವಿರುವ, ವಾರ್ಡ್ ನಂ.11ರ ಆರ್.ಡಿ.ಕಂಫರ್ಟ್ ನಲ್ಲಿ CL7 ಬಾರ್ ಅಂಡ್ ರೆಸ್ಟೋರೆಂಟ್ ಗಾಗಿ ಅನುಮತಿ ನೀಡುವಂತೆ ಕೋರಿ ಅಬಕಾರಿ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸಿರುವುದು ತಿಳಿದುಬಂದಿದ್ದು, ಸದರಿ ಕಟ್ಟಡದ ಮೇಲೆ ಮೊಬೈಲ್ ಟವರ್ ಇದ್ದು. […]

Continue Reading

ಹೆಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಅಸ್ತು ಎಂದ ರೇಲ್ವೆ ಸಚಿವ ಅಶ್ವಿನಿ ವೈಷ್ಣವ

ನವದೆಹಲಿ: ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ.   ನವದೆಹಲಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರ ಮನವಿಗೆ ತತ್ ಕ್ಷಣವೇ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಅವರು; ಇದು ಅತ್ಯಂತ ಮಹತ್ವದ ಪ್ರಸ್ತಾವನೆ. ಈ ಬಗ್ಗೆ ಖುದ್ದು ತಾವೇ ಗಮನ ಹರಿಸುವುದಾಗಿ ತಿಳಿಸಿದರು. […]

Continue Reading

ನಗರದ ಆಕ್ಸಿಡೆಂಟ್ ಝೋನ್ ಗಳಿಗೆ ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಅಮರೇಶ್ ಗೌಡ ಹಾಗೂ ಪಿಡಬ್ಲ್ಯೂಡಿ ಕಾರ್ಯಪಾಲಕ ಇಂಜಿನಿಯರ್ ಪುರುಷೋತ್ತಮ ಅವರು ಭೇಟಿ

ದೊಡ್ಡಬಳ್ಳಾಪುರ : ನಗರದಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿರುವ ಸ್ಥಳಗಳಿಗೆ ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಅಮರೇಶ್ ಗೌಡ ಹಾಗೂ ಪಿಡಬ್ಲ್ಯೂಡಿ ಕಾರ್ಯಪಾಲಕ ಇಂಜಿನಿಯರ್ ಪುರುಷೋತ್ತಮ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಗರಕೆರೆ ರಸ್ತೆ, ಶಾಂತಿನಗರ ರಸ್ತೆ, ಒಕ್ಕಲಿಗರ ಭವನ ಮುಂಭಾಗ, ಎಪಿಎಂಸಿ ಯಾರ್ಡ್ ಮುಖ್ಯದ್ವಾರದ ಮುಂದೆ ಮತ್ತು ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿದ್ದು, ಈ ಸ್ಥಳಗಳನ್ನು ಆಕ್ಸಿಡೆಂಟ್ ಝೋನ್ ಎಂದು ಪರಿಗಣಿಸಿ ಈ‌ ಸ್ಥಳಗಳಲ್ಲಿ ಹಂಪ್, ಸೂಚನಾ ಫಲಕಗಳು ಸೇರಿದಂತೆ ಇತರೆ […]

Continue Reading

ಅಂತಿಮ ಮತದಾರರ ಪಟ್ಟಿ ಪ್ರಕಟ:9.05 ಲಕ್ಷ ಮತದಾರರು : ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ 9,05,724 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ ಅವರು ಹೇಳಿದರು.   ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ರ ಸಂಬಂಧ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲೆಯ ನಾಲ್ಕು ತಾಲೂಕುಗಳ ಎಲ್ಲಾ ಮತಗಟ್ಟೆಗಳಲ್ಲಿ, ಮತದಾರ ನೋಂದಣಾಧಿಕಾರಿ ಕಚೇರಿಯಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಈ ಕಛೇರಿಗಳಲ್ಲಿ ಸಾರ್ವಜನಿಕರ […]

Continue Reading

ಇಂದಿನಿಂದ “ಕಬ್ಬಡಿ ಹಬ್ಬ”ಕ್ಕೆ ಚಾಲನೆ : ಅಂಜನಾದ್ರಿ ಕಪ್ -2025 ಗಾಗಿ ರಾಜ್ಯದ 26 ಜಿಲ್ಲೆ ಕ್ರೀಡಾಪಟುಗಳ ನಡುವೆ ನಡೆಯಲಿದೆ ರೋಚಕ ಪಂದ್ಯಾವಳಿ

ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್-2025 ( ಅಂಜನಾದ್ರಿ ಕಪ್ -2025) ಕಾರ್ಯಕ್ರಮವನ್ನುಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಆರ್. ವಿಶ್ವನಾಥ್ ಉದ್ಘಾಟಿಸಲಿದ್ದಾರೆ ಎಂದು ಮಧುರೆ ಗ್ರಾಮ ಪಂಚಾಯಿತಿ ಸದಸ್ಯ ಕಾರ್ಯಕ್ರಮದ ಆಯೋಜನ ಆ‌ರ್.ಆನಂದ ಮೂರ್ತಿ ತಿಳಿಸಿದರು.   ನಗರದ ಖಾಸ್ ಬಾಗ್ ಸಮೀಪದಲ್ಲಿ ಆಯೋಜನೆ ಮಾಡಲಾಗಿರುವ ಕಾರ್ಯಕ್ರಮದ ಪೂರ್ವ ಸಿದ್ಧತೆಯಲ್ಲಿ ಭಾಗವಹಿಸಿದ್ದವರು ಮಾಧ್ಯಮಗಳಿಗೆ ಮಾತನಾಡಿದರು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ರವರ […]

Continue Reading

PTCL ಕಾಯ್ದೆ ಸಮಸ್ಯೆ ಕುರಿತು ಸೂಕ್ತ ಕ್ರಮ ವಹಿಸುವಂತೆ ಒತ್ತಾಯಿಸಿ ನಿರಂತರ ಪ್ರತಿಭಟನೆ ಮಾಡಲಿದ್ದೇವೆ – ಆನೇಕಲ್ ಕೃಷ್ಣಪ್ಪ

ರಾಜ್ಯ ಸರ್ಕಾರ PTCL ಕಾಯ್ದೆದ 2023ರಲ್ಲಿ ತಿದ್ದುಪಡಿ ಮಾಡಿದ್ದರು ಸಹ ಉಚ್ಚನ್ಯಾಯಲಯ ಕಾಯ್ದೆ ವಿರುದ್ಧವಾಗಿ ಆದೇಶಗಳನ್ನು ಮಾಡುತ್ತಿರುವುದರಿಂದ ಮಾನ್ಯ ಮಖ್ಯಮಂತ್ರಿಗಳು ಗಂಭಿರವಾಗಿ ಪರಿಗಣಿಸಿ ಉನ್ನತ ಮಟ್ಟದ ಹಿರಿಯ ನ್ಯಾಯವಾದಿಗಳ ತಂಡ ರಚಿಸಿ ಸರ್ವೋಚ್ಚ ನ್ಯಾಯಲಯದಲ್ಲಿ ತಡೆಯಾಜ್ಞೆ ಮತ್ತು ಆದೇಶ ಅಗುತ್ತಿರುವ ಬಗ್ಗೆ ಕ್ರಮ ವಹಿಸುವಂತೆ ಒತ್ತಾಯಿಸಿ ಜನವರಿ 6 ರಿಂದ ನಿರಂತರ ಪ್ರತಿಭಟನೆ ಮಾಡಲಾಗುವುದು ಎಂದು ಪ್ರಜಾ ವಿಮೋಚನಾ ಚಳುವಳಿಯ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು PTCL […]

Continue Reading

ನಾಡಿನ ಖ್ಯಾತ ಸಾಹಿತಿ ಡಾ.ನಾ.ಡಿಸೋಜ ಅವರ ನಿಧನಕ್ಕೆ ಡಾ.ಹುಲಿಕಲ್ ನಟರಾಜ್ ಸಂತಾಪ

ಖ್ಯಾತ ಹಿರಿಯ ಸಾಹಿತಿ ಡಾ. ನಾ ಡಿಸೋಜ (Na D’Souza) ಅವರು ಇಂದು ಸಂಜೆ ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.     ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾ.ಡಿಸೋಜ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಗಣ್ಯರ ಅಗಲಿಕೆಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ಸಂತಾಪ ಸೂಚಿಸಿದ್ದಾರೆ.   ಈ ಕುರಿತು ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನ್ನಡ ಸಾಹಿತ್ಯ […]

Continue Reading