ಘಾಟಿ ಸುಬ್ರಮಣ್ಯ ಬ್ರಹ್ಮ ರಥೋತ್ಸವ : ರಥೋತ್ಸವಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ದೊಡ್ಡಬಳ್ಳಾಪುರ : ತಾಲ್ಲೂಕಿನ ಶ್ರೀ ಕ್ಷೇತ್ರ ಎಸ್.ಎಸ್ ಘಾಟಿಯಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು.   ದೇವಾಲಯಕ್ಕೆ ಸಚಿವರು ತಮ್ಮ ಪುತ್ರ ಕೇಂದ್ರ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿ ನರಸಿಂಹರಾಜು, ಶೃತಿ ಶ್ರೀ, ಪುತ್ರಿ ಡಾ. ಜ್ಞಾನೇಶ್ವರಿ, ಡಾ. ಜಯಕುಮಾರ್, ಸೇರಿದಂತೆ ಕುಟುಂಬಸ್ಥರೊಂದಿಗೆ ಭೇಟಿ ನೀಡಿ, ಘಾಟಿ […]

Continue Reading

1745ನೇ ದಿನದ ಅನ್ನದಾಸೋಹ ಕಾರ್ಯಕ್ರಮ :ಆಹಾರ ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ

ದೊಡ್ಡಬಳ್ಳಾಪುರ : ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಹಸಿದವರಿಗೆ ಆಹಾರ ವಿತರಿಸುವ ಮೂಲಕ ಶಿವಕುಮಾರ್ ಮತ್ತು ಕುಟುಂಬಸ್ಥರು ಪುಟಾಣಿ ಸುಶ್ವತ್ ರವರ 3ನೇ ವರ್ಷದ ಹುಟ್ಟುಹಬ್ಬದವನ್ನು ಆಚರಿಸಿದರು. 1745 ದಿನಗಳಿಂದಲೂ ನಿರಂತರ ದಾನಿಗಳ ಸಹಾಯದೊಂದಿಗೆ ಅನ್ನದಾಸೋಹ ಕಾರ್ಯಕ್ರಮವನ್ನು ಮಲ್ಲೇಶ್ ಮತ್ತು ತಂಡ ನಡೆಸಿಕೊಂಡು ಬರುತ್ತಿದ್ದು, ತಾಲ್ಲೂಕಿನ ಮಲ್ಲತಳ್ಳಿಯ ಶಿವಕುಮಾರ್ ಮತ್ತು ಕುಟುಂಬಸ್ಥರು ಇಂದಿನ( ಜ. 04) ರಂದು ನಿರಾಶ್ರಿತ ಕಡು ಬಡವರಿಗೆ ಆಹಾರ ವಿತರಣೆ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ […]

Continue Reading

ಭಾರತ ಸೇವಾದಳ ಸಪ್ತಾಹ : ದೊಡ್ಡಬಳ್ಳಾಪುರದಲ್ಲಿ ಅರ್ಥಪೂರ್ಣ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ

ದೊಡ್ಡಬಳ್ಳಾಪುರ : ಇಂದಿನ ಕಾರ್ಯಕ್ರಮ ಮಕ್ಕಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವ ಮುಖ್ಯ ಉದ್ದೇಶ ಹೊಂದಿದ್ದು, ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಶಾಲೆಯ ಮಕ್ಕಳು ತುಂಬಾ ಉತ್ಸಾಹದಿಂದ ಪಾಲ್ಗೊಂಡಿದ್ದು ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್ ವಿ ಮಹೇಶ್ ತಿಳಿಸಿದರು ನಗರದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸೇವಾದಳ ಸಪ್ತಾಹದ ಅಂಗವಾಗಿ ಆಯೋಜನೆ ಮಾಡಲಾಗಿದ್ದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಡಾ. ಬಿ […]

Continue Reading

ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿವಾಸಕ್ಕೆ ಭೇಟಿ ಕೊಟ್ಟು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಂಸದ ಡಾ. ಕೆ.ಸುಧಾಕರ್

ದೊಡ್ಡಬಳ್ಳಾಪುರ: ಇತ್ತೀಚೆಗೆ ನಿಧನರಾದ ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಹಿರಿಯ ಮುಖಂಡರಾದ ಶ್ರೀ ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿವಾಸಕ್ಕೆ ಇಂದು ಸಂಸದ ಸುಧಾಕರ್ ಭೇಟಿ ನೀಡಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು   ಸುಮಾರು ನಾಲ್ಕು ದಶಕಗಳ ಕಾಲ ರಾಜಕಾರಣದಲ್ಲಿದ್ದ ಅಪ್ಪಯ್ಯಣ್ಣನವರು ಬೆಂಗಳೂರು ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಬಮುಲ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ಹೀಗೆ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕ ಜೀವನದಲ್ಲಿ […]

Continue Reading

ಹಿಂದಿನ ವರ್ಷಗಳ ಅನುಭವ ಮತ್ತು ಪಾಠಗಳಿಂದ ಕಲಿತು ಈ ವರ್ಷದ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳೋಣ: ಸಿ.ಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು ಜ1: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು IAS-IPS ಅಧಿಕಾರಿಗಳಿಗೆ ಕರೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯಗಳನ್ನು ಕೋರಿ ಮಾತನಾಡಿದರು.   ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ […]

Continue Reading

ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಸ್ಥಾನಗಳಿಗೆ ಚುನಾವಣೆ : ನೂತನ ಅಧ್ಯಕ್ಷರಾಗಿ ಆರ್ ಮುರುಳಿಧರ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ಕೃಷಿ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಸ್ಥಾನಗಳಿಗೆ ಚುನಾವಣೆ ನಡೆಯಿತು.ನೂತನ ಅಧ್ಯಕ್ಷ ಮುರುಳಿಧರ್.ಆರ್, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.     ದೊಡ್ಡಬಳ್ಳಾಪುರ ಕೃಷಿಕ ಸಮಾಜದ ಅಧ್ಯಕ್ಷ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಆಯ್ಕೆಯಾದವರನ್ನು ಹೊರತುಪಡಿಸಿ ಬೇರೆಯವರು ತಮ್ಮ ನಾಮಪತ್ರಗಳನ್ನು ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ಸಹಾಯಕ ಕೃಷಿ ನಿರ್ದೇಶಕರು ಅವಿರೋಧ ಆಯ್ಕೆ ಪ್ರಕಟಿಸಿದ್ದಾರೆ.     ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳ ಅವಧಿ 5 ವರ್ಷಗಳಾಗಿದ್ದು, 2029-30ನೇ ಸಾಲಿನಲ್ಲಿ ಇವರ ಅವಧಿ ಅಂತ್ಯವಾಗಲಿದೆ .     ಈ […]

Continue Reading