ನಗರಸಭಾ ಕಾರ್ಯಾಲಯದಲ್ಲಿ ಅನಧಿಕೃತ ವ್ಯಕ್ತಿಗಳ ಹಾವಳಿ ತಪ್ಪಿಸುವಂತೆ ಕರ್ನಾಟಕ ನವನಿರ್ಮಾಣ ಸೇನೆ ಮನವಿ

ದೊಡ್ಡಬಳ್ಳಾಪುರ : ನಗರಸಭಾ ಕಾರ್ಯಾಲಯದಲ್ಲಿ ಅನಧಿಕೃತ ವ್ಯಕ್ತಿಗಳ ಕೈಯಲ್ಲಿ ಕೆಲಸ ಮಾಡಿಸಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ನಗರಸಭೆಯ ಪೌರಾಯುಕ್ತರಿಗೆ ಕರ್ನಾಟಕ ನವನಿರ್ಮಾಣ ಸೇನೆ ವತಿಯಿಂದ ದೂರು ಸಲ್ಲಿಸಲಾಯಿತು.   ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಮುರಳಿ ಮೋಹನ ಮಾತನಾಡಿ ದೊಡ್ಡಬಳ್ಳಾಪುರ ನಗರಸಭಾ ಕಾರ್ಯಾಲಯದಲ್ಲಿ ಅನಧಿಕೃತವಾಗಿ ನೇಮಕಾತಿಯಿಲ್ಲದ ವ್ಯಕ್ತಿಗಳ ಕೈಯಲ್ಲಿ ನಗರಸಭಾ ಸಿಬ್ಬಂದಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಇಂತಹ ವ್ಯಕ್ತಿಗಳಿಂದ ನಗರಸಭೆಯ ದಾಖಲೆಗಳು ಹೊರಗಿನ ಕೆಲವು ಆಯ್ದ ವ್ಯಕ್ತಿಗಳಿಗೆ ರವಾನೆಯಾಗುತ್ತಿದೆ ಇದಲ್ಲದೆ ಅನಧಿಕೃತ ನೌಕರರೆನಿಸಿಕೊಂಡವರು ಅಧಿಕಾರಿಗಳ ಏಜೆಂಟರಾಗಿ ಸಾರ್ವಜನಿಕ […]

Continue Reading

ಯುವ ಕಾಂಗ್ರೆಸ್ ತೂಬಗೆರೆ ಹೋಬಳಿ ಅಧ್ಯಕ್ಷರಾಗಿ ನರಸಿಂಹಮೂರ್ತಿ ನೇಮಕ : ಗಣ್ಯರಿಂದ ಶುಭ ಹಾರೈಕೆ

ರಾಜ್ಯ ಯುವ ಕಾಂಗ್ರೆಸ್ ತೂಬಗೆರೆ ಹೋಬಳಿ ಅಧ್ಯಕ್ಷರಾಗಿ ಹಿರೇಮುದ್ದೇನಹಳ್ಳಿಯ ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ   ಎಐಸಿಸಿ ಚುನಾವಣಾ ಸಮಿತಿ ಯುವ ಕಾಂಗ್ರೆಸ್ ನ ಎಲ್ಲ ಹಂತದ ಘಟಕಗಳಿಗೆ ನೋಂದಣಿ ಮಾಡಿಕೊಂಡಿತ್ತು, ರಾಜ್ಯ ಘಟಕ, ಜಿಲ್ಲಾ ಘಟಕ, ಬ್ಲಾಕ್ ಘಟಕಗಳ ವಿವಿಧ ಹುದ್ದೆಗಳಿಗೆ ಏಕ ಕಾಲಕ್ಕೆ ಮತದಾನ ನಡೆದಿತ್ತು, ಅತಿ ಹೆಚ್ಚು ನೋಂದಣಿ ಮಾಡಿಸಿದ ಅಭ್ಯರ್ಥಿ ವಿಚೇತ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿತು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನರಸಿಂಹಮೂರ್ತಿ 960 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ. […]

Continue Reading

ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ಕಾಗದ ಪತ್ರಗಳ ಪರಿಶೀಲನೆ

ದೊಡ್ಡಬಳ್ಳಾಪುರ : ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ     ದೊಡ್ಡಬಳ್ಳಾಪುರ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಹಳೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ, ಕಳೆದ ಎರಡು ವರ್ಷದ ಹಿಂದೆ ಪಂಚಾಯಿತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಮತ್ತು ಎರಡು ತಿಂಗಳ ಹಿಂದೆಯೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು     ಕೈಗಾರಿಕಾ ಪ್ರದೇಶವನ್ನ ಒಳಗೊಂಡಿರುವ ಮಜರಾಹೊಸಹಳ್ಳಿ […]

Continue Reading

ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜರುಗಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.   ಸ್ವಯಂ ಸೇವಾ ಸಂಘ ಸಂಸ್ಥೆಯು ನೊಂದಾಯಿತ ಸಂಸ್ಥೆಯಾಗಿದ್ದು ನೊಂದಣಿ ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು ಹಾಗೇ ಪ್ರತೀ ವರ್ಷ ಆಡಿಟ್ ಮಾಡಿಸಿರಬೇಕು,ಜೊತೆಗೆ 3 ವರ್ಷದ ಲೆಕ್ಕ ಪರಿಶೋಧನಾ ವರದಿ ದೃಡೀಕರಣ ಪತ್ರ ಸಲ್ಲಿಸಬೇಕು, ಮುಖ್ಯವಾಗಿ ಈ ಸಂಸ್ಥೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಅಭಿೃದ್ಧಿಗಾಗಿ 5 ವರ್ಷ ಸೇವೆ ಸಲ್ಲಿಸಿರುವ ದಾಖಲೆಯನ್ನು ಇಲಾಖೆಗೆ […]

Continue Reading

ಫೆ.20 ರಂದು ದೇವನಗುಂದಿ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆಯ ಅಣುಕು ಪ್ರದರ್ಶನ

ಬೆಂಗಳೂರು ಗ್ರಾಮಾಂತರ : ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಫೆಬ್ರವರಿ 20 ರಂದು ನಡೆಯಲಿರುವ ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಎ ಬಸವರಾಜು ಅವರು ಸೂಚಿಸಿದರು.   ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ “ಸಿ.ಬಿ.ಆರ್.ಎನ್” ಅಣುಕು ಪ್ರದರ್ಶನ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ನೈಸರ್ಗಿಕ ವಿಕೋಪಗಳು, ಕೈಗಾರಿಕಾ […]

Continue Reading

ರೈತರಿಗಾಗಿ ಅಟಲ್ ಭೂ ಜಲ ಯೋಜನೆ ತರಬೇತಿ ಕಾರ್ಯಾಗಾರ

ಬೆಂ.ಗ್ರಾ.ಜಿಲ್ಲೆ, ಫೆ. 07:- ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೇವನಹಳ್ಳಿ ತಾಲೂಕಿನ ಬೊಮ್ಮವಾರದ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ರೈತರಿಗಾಗಿ 2024-25ನೇ ಸಾಲಿನ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.   ತರಬೇತಿಯಲ್ಲಿ ದೇವನಹಳ್ಳಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಸುಶೀಲಮ್ಮ ಅವರು ಆಟಲ್ ಭೂಜಲ್ ಯೋಜನೆಯಡಿ (ABY) ಸಮುದಾಯ ಸಹಭಾಗಿತ್ವದೊಂದಿಗೆ ಅಂತರ್ಜಲ ನಿರ್ವಹಣೆ, ಜಲ ಭದ್ರತಾ ಯೋಜನೆ ಸಿದ್ದಪಡಿಸುವುದು, ನೀರಿನ ಬಳಕೆ ಕಡಿಮೆ ಮಾಡುವ ಸೂಕ್ಷ್ಮ […]

Continue Reading

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

ಬೆಂಗಳೂರು :ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ.   ಅವರು ಇಂದು ( ಫೆಬ್ರವರಿ 07, 2025) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ […]

Continue Reading

ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳ ವಿರುದ್ಧ ದೂರು ನೀಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ನೊಂದಾಯಿತ ಲೇವಾದೇವಿ/ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಟ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವಾರ್ಷಿಕ ಶೇಕಡಾ 16 ರಷ್ಟು ಬಡ್ಡಿ ವಿಧಿಸಬೇಕು.   ಹೆಚ್ಚುವರಿ ಬಡ್ಡಿ ವಿಧಿಸುತ್ತಿರುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕಂಡುಬಂದಲ್ಲಿ ಸಾರ್ವಜನಿಕರು ಕೆಳಕಂಡ ಕಛೇರಿಗೆ ದೂರು ಸಲ್ಲಿಸಬಹುದು.   ಸಹಕಾರ ಸಂಘಗಳ ಜಂಟಿ ನಿಬಂಧಕರ ಕಛೇರಿ, ಬೆಂಗಳೂರು ಪ್ರಾಂತ-ದೂ.ಸಂಖ್ಯೆ:080-26612911, ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ, […]

Continue Reading

ಬಣ್ಣದ ಘಟಕಗಳಿಗೆ ನಗರಸಭೆ ನೋಟೀಸ್ ಹಿನ್ನಲೆ ಸಂಸ್ಕರಣಾ ಘಟಕ ನಿರ್ಮಿಸಿಕೊಡಲು ನೇಕಾರರ ಒತ್ತಾಯ

ದೊಡ್ಡಬಳ್ಳಾಪುರ :ನಗರದಲ್ಲಿ ರೇಷ್ಮೆ ಬಣ್ಣ ಮಾಡುವ ಘಟಕಗಳು ಮಾಲಿನ್ಯಕಾರಕ ಎಂದು ನಗರಸಭೆಯಿಂದ ನೋಟೀಸ್ ನೀಡಿ ಘಟಕಗಳನ್ನು ಮುಚ್ಚಲು ಹೊರಟಿರುವ ಕ್ರಮದಿಂದ ನೇಕಾರಿಕೆ ಸಂಕಷ್ಟ ಎದುರಾಗಲಿದ್ದು,ನಗರಸಭೆ ಈ ಬಗ್ಗೆ ಕ್ರಮ ಕೈಗೊಂಡು ರೇಷ್ಮೆ ಮತ್ತು ಕೃತಕ ರೇಷ್ಮೆ ಬಣ್ಣ ಮಾಡುವ ಘಟಕಗಳಿಗೆ ಬಣ್ಣದ ನೀರು ಸಂಸ್ಕರಣಾ ಘಟಕವನ್ನು ನಿರ್ಮಾಣ ಮಾಡಿಕೊಡಬೇಕೆಂದು ಒತ್ತಾಯಿಸಿ, ನೇಕಾರರ ಹೋರಾಟ ಸಮಿತಿ ನೇತೃತ್ವದಲ್ಲಿ ನೇಕಾರರು ಹಾಗೂ ಬಣ್ಣದ ಘಟಕಗಳ ಮಾಲೀಕರು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.     ಈ ವೇಳೆ ನೇಕಾರರ ಹೋರಾಟ […]

Continue Reading

ಫೆ.18,19 ರಂದು ಕ್ರೀಡಾ ಶಾಲೆ /ವಸತಿ ನಿಲಯ ಪ್ರವೇಶಕ್ಕೆ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ

ಬೆಂಗಳೂರು ಗ್ರಾಮಾಂತರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಕ್ರೀಡಾಶಾಲೆ /ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ.   ಕ್ರೀಡಾಶಾಲೆ /ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಪ್ರವೇಶಕ್ಕೆ ಬೆಂಗಳೂರು ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಗೆ ಈ ಹಿಂದೆ ನಿಗದಿ ಪಡಿಸಿದ್ದ ದಿನಾಂಕಗಳನ್ನು ಪರಿಷ್ಕರಿಸಿ ಫೆಬ್ರುವರಿ 18 ರಂದು ಕಿರಿಯರ ವಿಭಾಗಕ್ಕೆ ಹಾಗೂ ಫೆಬ್ರುವರಿ 19 ರಂದು ಹಿರಿಯರ ವಿಭಾಗಕ್ಕೆ ಆಯ್ಕೆ ಪ್ರಕ್ರಿಯೆ […]

Continue Reading