ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ : ಒಟ್ಟು ರೂ.64,51,009 ಹಣ ಸಂಗ್ರಹ

ದೊಡ್ಡಬಳ್ಳಾಪುರ : ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ, ದೇವಾಲಯದಲ್ಲಿ ಈ ದಿವಸ ಹುಂಡಿ ಎಣಿಕೆ ಮಾಡಲಾಯಿತು. ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಹುಂಡಿಯ ಎಣಿಕೆ ಮಾಡಲಾಗಿದ್ದು ರೂ.64,51,009 ಹಣ ಸಂಗ್ರಹವಾಗಿದೆ.ಹಾಗು ಇದರೊಂದಿಗೆ 44100 ರೂ.ಬೆಲೆ ಬಾಳುವ 7 ಗ್ರಾಂ ಚಿನ್ನ, 77500 ರೂ. ಬೆಲೆ ಬಾಳುವ 1.550 ತೂಕದ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಕಾಣಿಕೆ ರೂಪದಲ್ಲಿ ಹರಕೆ ತೀರಿಸಿಕೊಂಡಿದ್ದಾರೆ ದೇವಾಲಯದ ಹುಂಡಿಯನ್ನು ನಿಯಮಾನುಸಾರ ತೆಗೆದು ದೇವರ ದರ್ಶನಕ್ಕೆ ಬಂದ ಭಕ್ತರಿಂದ ಎಣಿಕೆ […]

Continue Reading

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರುಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ವಿಶೇಷ ಸೂಚನೆಗಳು

ಯುಗಾದಿ ಮತ್ತು ರಂಜಾನ್ ಹಬ್ಬದ ಧಾರ್ಮಿಕ ಆಚರಣೆಯ ಮೆರವಣಿಗೆ ಇತ್ಯಾದಿ ಕಾರ್ಯಕ್ರಮಗಳಿದ್ದಲ್ಲಿ ಅನುಮತಿ ಮೇರೆಗೆ ಶಾಂತಿಯುತವಾಗಿ ಆಚರಿಸಲು ಸೂಚಿಸಲಾಗಿದೆ.   ಪ್ರಮುಖ ಅಂಶಗಳು :  1.ಯಾವುದೇ ಧಾರ್ಮಿಕ ವಿಚಾರವಾಗಿ ಪ್ರಚೋದನಾಕಾರಿ ಪೋಸ್ಟ್ ಅಥವಾ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದು ಅಪರಾಧ.   2.ಬೆಂಗಳೂರು ಜಿಲ್ಲಾ ಸರಹದ್ದಿನಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.   3.ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಪ್ರಚೋದನಾಕಾರಿ ಬರವಣಿಗೆ, ಸಂದೇಶ ಹಾಗೂ ಭಾಷಣ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವದು.   4.ಜೂಜು, ಮಟ್ಕಾ, ಇಸ್ಪೀಟ್ […]

Continue Reading

ಪುಷ್ಪಾಂಡಜ ಮಹರ್ಷಿ ಆಶ್ರಮದಲ್ಲಿ ಅರಣಿಕರಣ ಮತ್ತು ಹಣ್ಣಿನ ಗಿಡ ನಾಟಿ ಕಾರ್ಯಕ್ರಮ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮ ಗುರುಪೀಠದಲ್ಲಿ ಸಾಮಾಜಿಕ ಅರಣಿಕರಣ ಮತ್ತು ಹಣ್ಣಿನ ಗಿಡ ನಾಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಪುಷ್ಪಾಂಡಜ ಮಹರ್ಷಿ ಆಶ್ರಮ ಗುರುಪೀಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ದಿವ್ಯ ಜ್ಞಾನಾನಂದ ಸ್ವಾಮಿಜಿ ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಮಾತಾನಾಡಿದ ಸ್ವಾಮಿಜಿ ಗಳು,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಅದರಲ್ಲಿ ವಿಶೇಷವಾಗಿ ಕೆರೆ […]

Continue Reading

ಏನಿದು ಆರ್‌ಡಿಎಸ್ಎಸ್ : ಹೊಸ ವಿದ್ಯುತ್ ಮೀಟರ್ ಕುರಿತಂತೆ ಒಂದಿಷ್ಟು ಮಾಹಿತಿ

ಕೇಂದ್ರ ಇಂಧನ ಪ್ರಾಧಿಕಾರದ ನಿರ್ದೇಶನದಂತೆ 2021-22 ನೇ ಸಾಲಿನಲ್ಲಿ ಕೇಂದ್ರದ ಇಂಧನ ಸಚಿವಾಲಯವು ಪರಿಷ್ಕೃತ ವಿತರಣಾ ವಲಯ ಯೋಜನೆ (RDSS- Revamped Distribution Sector Scheme) ರೂಪಿಸಿತ್ತು. ಈ ಯೋಜನೆ ಒಪ್ಪಿಕೊಂಡಿದ್ದರೆ, ಎಲೆಕ್ಟ್ರಿಕಲ್ ಮೂಲ ಸೌಕರ್ಯವನ್ನು ಒದಗಿಸಲು ಕೇಂದ್ರ ಸರ್ಕಾರ ಶೇ. 60ರಷ್ಟು ಅನುದಾನ ನೀಡುತ್ತಿತ್ತು. ಜತೆಗೆ, ಸ್ಮಾರ್ಟ್ ಮೀಟರ್‌ಗಳ ಬದಲಾವಣೆ ಮಾಡಲು ಒಟ್ಟು ವೆಚ್ಚದ ಶೇ.15ರಷ್ಟು ಅಥವಾ ಗರಿಷ್ಠ 900 ರೂ. ಕೇಂದ್ರ ಸರ್ಕಾರ ನೀಡುತ್ತಿತ್ತು. ಆದರೆ, ರಾಜ್ಯ ಸರ್ಕಾರಗಳು ಸಂಬಂಧಿಸಿದ ವಿದ್ಯುತ್ ಸರಬರಾಜು ಕಂಪನಿಗಳಿಗೆ […]

Continue Reading

ತೂಬಗೆರೆ : ಅಭಿವೃದ್ಧಿ ಕಾಣದ ರಸ್ತೆಗಳಿಗೆ ಕಾಂಕ್ರೀಟ್ ಭಾಗ್ಯ : ಗ್ರಾಮಸ್ಥರಿಂದ ವಾರ್ಡ್ ಸದಸ್ಯರಾದ ಲೋಕೇಶ್ವರಿ ರವಿ ಸಿದ್ದಪ್ಪ ರವರಿಗೆ ಅಭಿನಂದನೆ

ದೊಡ್ಡಬಳ್ಳಾಪುರ ತೂಬಗೆರೆ : ಸಂಪೂರ್ಣ ಹಾಳಾಗಿದ್ದ ರಸ್ತೆಯನ್ನು ವಾಹನ ಸವಾರರು ಪಾದಚಾರಿಗಳು ಸಂಚರಿಸಲು ಸಹಕಾರಿಯಾಗುವಂತೆ ಸಚಿವರ ಸಹಕಾರದಿಂದ ಉತ್ತಮ ಕಾಂಕ್ರೀಟ್ ರಸ್ತೆ ನಿರ್ಮಿಸುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ತೂಬಗೆರೆ ಗ್ರಾಮಸ್ಥರು ಸ್ಥಳೀಯ 3ನೇ ವಾರ್ಡ್ ನ ಸದಸ್ಯರಾದ ಲೋಕೇಶ್ವರಿ ರವಿಸಿದ್ದಪ್ಪ ಅವರನ್ನು ಅಭಿನಂದಿಸಿದ್ದಾರೆ. ತೂಬಗೆರೆ ಗ್ರಾಮದ ಅಂಗಡಿ ಬೀದಿಯ ರಸ್ತೆಗಳು ಹಲವು ವರ್ಷಗಳಿಂದ ಯಾವುದೇ ರೀತಿಯ ಅಭಿವೃದ್ಧಿ ಕಾಣದೆ ಸಂಪೂರ್ಣ ಹಳ್ಳಗಳಿಂದ ಕೂಡಿದ್ದು, ಸಾರ್ವಜನಿಕರು ಸಂಚರಿಸಲು ಪರದಾಡುತ್ತಿದ್ದೆವು, ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಹಲವು ಬಾರಿ […]

Continue Reading

ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಾಗೂ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಮೂರು ತಿಂಗಳ ಉಚಿತ ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಇಂದು ಪ್ರಮಾಣಪತ್ರ ವಿತರಿಸಲಾಯಿತು.   ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ನೀಡಲಾಯಿತು.   ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು ಜೊತೆಗೆ ಆರ್ಥಿಕವಾಗಿ ಸಧೃಡರಾಗಬೇಕು ಎಂಬ ಉದ್ದೇಶದಿಂದ ಸ್ವ-ಸಹಾಯ ಗುಂಪುಗಳ ಮಹಿಳೆಯರಿಗೆ ಸೂಕ್ಷ್ಮ ಕೌಶಲ್ಯ ಪೂರ್ವಭಾವಿ ಅಭಿವೃದ್ಧಿ […]

Continue Reading

ಕ್ಷಯ ಮುಕ್ತ ಭಾರತವನ್ನು ನಿರ್ಮಿಸಲು ಟಿಬಿ ಚಾಂಪಿಯನ್ ಗಳ ಸಹಭಾಗೀತ್ವದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ ಆಚರಣೆ

ದೊಡ್ಡಬಳ್ಳಾಪುರ : ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಕ್ಷಯ ರೋಗಕ್ಕೆ ಚಿಕಿತ್ಸೆ ಪಡೆದು ಕಾಯಿಲೆಯ ವಿರುದ್ಧ ಹೋರಾಡಿ ಟಿಬಿ ಯನ್ನು ಗೆದ್ದು ಬಂದ ಟಿಬಿ ಚಾಂಪಿಯನ್ ಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲೆಕ್ಕ ಕೃಷ್ಣಾರೆಡ್ಡಿ ಹಾಗೂ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಅಧಿಕಾರಿ ಡಾ ನಾಗೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಈಗಾಗಲೇ ತಾಲೂಕಿನ ವ್ಯಾಪ್ತಿಯಲ್ಲಿ ಚಿಕಿತ್ಸೆಯನ್ನು ಪಡೆದು ಟಿಬಿ ಯಿಂದ ಗುಣಮುಖರಾಗಿರುವ ವ್ಯಕ್ತಿಗಳು ಟಿಬಿ ಚಾಂಪಿಯನ್ […]

Continue Reading

ಜಿಲ್ಲಾಧಿಕಾರಿಗಳು ನಮ್ಮ ಕೆರೆಯ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಲಿ : ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಕೆರೆ ಹೊರಾಟ ಸಮಿತಿ ಅಗ್ರಹ

ದೊಡ್ಡಬಳ್ಳಾಪುರ – ನಿಜವಾಗಲೂ ವಿಶ್ವ ಜಲ ದಿನಾಚರಣೆ ಆ ದಿನಕ್ಕೆ ಅರ್ಥ ಪೂರ್ಣ ಸಿಗಬೇಕಾದರೆ ಕೆರೆಗಳಿಗೆ ಹರಿಯುತ್ತಿರುವ ಕೊಳಚೆ ನೀರನ್ನು ನಿಲ್ಲಿಸಬೇಕು ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಕೆರೆಗಳ ಶುದ್ಧೀಕರಣಕ್ಕೆ ಮುಂದಾಗಬೇಕು ಇಲ್ಲವಾದಲ್ಲಿ ವಿಶ್ವ ಜಲ ದಿನಾಚರಣೆ ದಿನದಂದು ಗ್ರಾಮಸ್ಥರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಆರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಸಮಿತಿ ಹಾಗೂ ಕೆರೆ ಹೊರಾಟ ಸಮಿತಿ ಎಚ್ಚರಿಕೆ ನೀಡಿದರು.   ನಗರದ ಪ್ರವಾಸಿ […]

Continue Reading

ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸುವುದಿಲ್ಲ – ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ

ದೊಡ್ಡಬಳ್ಳಾಪುರ:ಕನ್ನಡ ನಾಡು ನುಡಿ ಭಾಷೆಗೆ ಅವಹೇಳನಕಾರಿ ರೀತಿಯಲ್ಲಿ ವರ್ತಿಸಿದ ಎಂ ಇ ಎಂ ಪುಂಡರ ವಿರುದ್ಧ ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆ ಇರುವುದರಿಂದ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣ ಗೌಡರ ಬಣ)ಯ ಬೆಂಬಲವಿರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ತಿಳಿಸಿದ್ದಾರೆ.   ಅವರು ಮಾತನಾಡಿ ಮಾ.21ರಿಂದ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಮುಖ್ಯ ಪರೀಕ್ಷೆ ಪ್ರಾರಂಭವಾಗುತ್ತಿದ್ದು,ಪರೀಕ್ಷಾ ಸಮಯದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ […]

Continue Reading

ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಈ ಕುರಿತು ಮಾತನಾಡುತ್ತಾ ಒಂದು ಅಧ್ಯಯನ ವರದಿಯಂತೆ ನಮ್ಮ ದೇಶದ 100 ಕೋಟಿ ದೇಶದ ಜನರಿಗೆ ಕೊಂಡುಕೊಳ್ಳುವ ಆಯ್ಕೆಯಿಲ್ಲ, ಶಕ್ತಿ ಇಲ್ಲ.ಮೊದಲ ವರ್ಗದಲ್ಲಿ 14 ಕೋಟಿ ಜನರಿದ್ದು, ಅವರ ಸರಾಸರಿ ವಾರ್ಷಿಕ ಆದಾಯ 15 ಸಾವಿರ ಡಾಲರ್ (13 ಲಕ್ಷ ರೂ.), 7 ಕೋಟಿ ಕುಟುಂಬಗಳ ತಲಾ ಆದಾಯ […]

Continue Reading