ಶಿವಮೊಗ್ಗ: ಶ್ರೀ ಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಏಪ್ರಿಲ್ 14ರಿಂದ ವಸಂತ ವಿಹಾರ ಬೇಸಿಗೆ ಶಿಬಿರ

ಶಿವಮೊಗ್ಗದ ರಾಮಕೃಷ್ಣ ವಿವೇಕಾನಂದ ಆಶ್ರಮದ ಮಾರ್ಗದರ್ಶನದಲ್ಲಿ ವಿನೋಬ ನಗರದ ಮೂರನೇ ಹಂತದ 8ನೇ ತಿರುವಿನಲ್ಲಿರುವ ಶ್ರೀ ಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಏಪ್ರಿಲ್ 14ರಿಂದ 20ರವರೆಗೆ 5 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ವಾರದ ವಿಶೇಷ ಬೇಸಿಗೆ ಶಿಬಿರ “ ವಸಂತ ವಿಹಾರ 2025 “ ಹಮ್ಮಿಕೊಳ್ಳಲಾಗಿದೆ.   ಏಪ್ರಿಲ್ 14ರ ಸೋಮವಾರದಿಂದ ಏಪ್ರಿಲ್ 20ರ ಭಾನುವಾರದವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಶಿಬಿರ ನಡೆಯಲಿದೆ. ಧ್ಯಾನ, ದಿವ್ಯತ್ರಯರ ದಿವ್ಯ ಜೀವನ, ಸಂಸ್ಕೃತ ಶ್ಲೋಕಗಳು, […]

Continue Reading

ಇಂದಿನ ಮಕ್ಕಳಿಗೆ ಕಲಿಕೆಯ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಕಲೆ ಬಹಳ ಮುಖ್ಯ- ಎಸ್.ಸಿ.ರಾಮಚಂದ್ರ

ಶಿವಮೊಗ್ಗ : ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಕ್ರಿಯಾಶೀಲ ಚಟುವಟಿಕೆಗಳು ತುಂಬಾ ಪೂರಕ ಎಂದು ನಿವೃತ್ತ ಕಾರ್ಮಿಕ ಅಧಿಕಾರಿ ರೂ.ಣಿ.ಷ ಛಾರಟಿ/ಬಿಲ್ ಟ್ರಸ್ಟ್ ನ ಕಾರ್ಯದರ್ಶಿ ಎಸ್.ಸಿ.ರಾಮಚಂದ್ರ ಅಭಿಮತ ವ್ಯಕ್ತಪಡಿಸಿದರು.   ಶಿವಮೊಗ್ಗದ ರಾಜೇಂದ್ರ ನಗರದಲ್ಲಿರುವ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಚಿಕ್ಕ ಮಕ್ಕಳ ಗ್ರಾಜುಯೇಷನ್ ಸೆರಮನಿ 2024-25’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳಿಗೆ ಕಲಿಕೆಯ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಕಲೆ ಬಹಳ ಮುಖ್ಯ. ಚಿಕ್ಕ ಮಕ್ಕಳಿಗೆ ಈಗ ಗ್ರಾಜುಯೇಷನ್ ಡೇ ಅವರ […]

Continue Reading

ಜಿಲ್ಲಾ ಮಟ್ಟದ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ‌ ಪ್ರಥಮ‌ ಸ್ಥಾನ‌ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ತಾಲೂಕಿನ ಚೆಸ್ ಪ್ರತಿಭೆ ಎನ್.ಸನ್ವಿತ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ 9 ವರ್ಷದೊಳಗಿನ ಮಕ್ಕಳ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ದೊಡ್ಡಬಳ್ಳಾಪುರ ನಗರದ ಕಲ್ಲುಪೇಟೆಯ ಅಚೀವರ್ಸ್ ಚೆಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿ ಸನ್ವಿತ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.   ತಾಲೂಕಿನ ಸಾಸಲು ಹೋಬಳಿ ಪುಟ್ಟಲಿಂಗಯ್ಯನಪಾಳ್ಯ (ಲಿಂಗದವೀರನಹಳ್ಳಿ) ಗ್ರಾಮದ ವಾಣಿಜ್ಯತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ನರಸಿಂಹಮೂರ್ತಿ ಹಾಗೂ ದೊಡ್ಡಬಳ್ಳಾಪುರ ನಗರದ ಶಿಕ್ಷಣ ಸಂಯೋಜಕರಾದ […]

Continue Reading

ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಏ.04 ಕೊನೆಯ ದಿನ

ಬೆಂಗಳೂರು ಗ್ರಾಮಾಂತರ : ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.   ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM) ಬೆಂಗಳೂರು […]

Continue Reading

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವರ ದಾಸಿಮಯ್ಯ ಜಯಂತಿ ಆಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ದೇವರ ದಾಸಿಮಯ್ಯ’ ಜಯಂತಿಯನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.   ನೂತನ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ‘ದೇವರ ದಾಸಿಮಯ್ಯ’ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.   ವೃತ್ತಿಯಲ್ಲಿ ನೇಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು […]

Continue Reading

ದಾಸಿಮಯ್ಯ ಅವರ ಬಗ್ಗೆ ಸಂಶೋಧನಾತ್ಮಕ ಪ್ರಬಂಧಗಳು ಹೊರಬರಬೇಕಿದೆ – ಡಿ.ಶ್ರೀಕಾಂತ

ದೊಡ್ಡಬಳ್ಳಾಪುರ : ನಗರದ ಕುಚ್ಚಪ್ಪನ ಪೇಟೆಯಲ್ಲಿ ದೇವರ ದಾಸಿಮಯ್ಯ ಸೇವಾ ಸಮಿತಿ ವತಿಯಿಂದ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ದೇವರ ದಾಸಿಮಯ್ಯ ಅವರ ಬದುಕು ಹಾಗೂ ಸಾಹಿತ್ಯ ಕುರಿತು ತಾಲೂಕು ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ಮಾತನಾಡಿ, ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ ವಚನದಲ್ಲಿ ಬದುಕಿನ ಮೌಲ್ಯಗಳಿವೆ. ಸದಾ ಕಾಯಕದಲ್ಲಿಯೇ ನಿರತರಾಗಿದ್ದ ಅವರ ವಚನಗಳಲ್ಲಿ, ಕಾಯಕದ ಮಹತ್ವ ಅಡಗಿದ್ದು, ಅವರ ವಚನಗಳು ಹಲವಾರು ವಚನಕಾರರಿಗೆ ತತ್ವಜ್ಞಾನಿಗಳಿಗೆ ಸ್ಪೂರ್ತಿಯಾಗಿದೆ. […]

Continue Reading

ದೊಡ್ಡಬಳ್ಳಾಪುರ : ಪದ್ಮಭೂಷಣ ಡಾ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿಯವರ 118ನೇ ಜಯಂತಿ ಆಚರಣೆ

ತ್ರಿವಿದ ದಾಸೋಹಿಗಳು ಪದ್ಮಭೂಷಣ ಡಾ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿಯವರ 118ನೇ ಜಯಂತಿಯ ಪ್ರಯುಕ್ತ ದೊಡ್ಡಬಳ್ಳಾಪುರ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತ ತಾಲ್ಲೂಕು ಕಛೇರಿ ಹತ್ತಿರ ತಾಲ್ಲೂಕಿನ ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಶಾಸಕರಾದ ಧೀರಜ್ ಮುನಿರಾಜು ಮಾತನಾಡಿ ಪ್ರತಿನಿತ್ಯ ಸಾವಿರಾರು ಮಕ್ಕಳಿಗೆ ವಿದ್ಯಾದಾನ, ಲಕ್ಷಾಂತರ ಜನರಿಗೆ ಅನ್ನದಾನ ಮಾಡಿರುವ ಶ್ರೀಗಳ ಕಾರ್ಯ ನಮ್ಮೆಲ್ಲರಿಗೂ ಮಾರ್ಗದರ್ಶನ, ಕಾಯಕವೇ ಕೈಲಾಸ ಎಂಬ […]

Continue Reading

ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಉನ್ನತ ಮಟ್ಟದ ಕಂಪೆನಿಗಳಲ್ಲಿ ಇಂಟರ್ನ್ ಶಿಪ್ ನೀಡುವ ಸಲುವಾಗಿ 2024-25 ನೇ ಸಾಲಿನ ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಯೋಜನೆ (Prime Minister’s Internship Scheme in Top Companies) ಘೋಷಣೆ ಮಾಡಲಾಗಿದೆ. ಈ ಯೋಜನೆಯಡಿ ಒಂದು ಕೋಟಿ ಯುವಕ/ಯುವತಿಯರಿಗೆ ಇಂಟರ್ನ್ ಶಿಪ್ ಮೂಲಕ ಕೌಶಲ್ಯವನ್ನು ವೃದ್ಧಿಸಲು ಅವಕಾಶ ಕಲ್ಪಿಸಲಾಗಿದೆ.   ಅಸಕ್ತಿ ಇರುವ ಅಭ್ಯರ್ಥಿಗಳು www.pmintership.mca.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 15 ರೊಳಗಾಗಿ ಅರ್ಹತೆ ಆಧಾರದ ಮೇಲೆ […]

Continue Reading

ಹೊಸಕೋಟೆ:ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 14 ಅಂಗನವಾಡಿ ಕಾರ್ಯಕರ್ತೆ/ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 66 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   19 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಹೆಣ್ಣುಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು (ದೈಹಿಕ ವಿಕಲಚೇತನರಿಗೆ […]

Continue Reading

ಮಹಿಳೆಯರ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸಹಕಾರ ಅಗತ್ಯ. ಶಿವಾನಿ ಕೋಣಂದೂರ್

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರ ಬದುಕು ಹಸನವಾಗಲು ಹಾಗೂ ಸ್ವಾವಲಂಬಿ ಜೀವನ ನಡೆಸಲು ಸಂಘ ಸಂಸ್ಥೆಗಳ ನೆರವು ಅಗತ್ಯ ಎಂದು ಇಸ್ರೋ ಸಂಸ್ಥೆಯ ಡೆಪ್ಯೂಟಿ ಡೈರೆಕ್ಟರ್ ಶಿವಾನಿ ಕೋಣಂದೂರ್ ಅಬಿಮತ ವ್ಯಕ್ತಪಡಿಸಿದರು.   ಅವರು ನಗರದ ನವ್ಯಶ್ರೀ ಸಭಾಂಗಣದಲ್ಲಿ ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಹೊಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು ಇಂದು ತಂತ್ರಜ್ಞಾನ ಮುಂದುವರಿದ ಹಾಗೆ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾದ […]

Continue Reading