ಬಮೂಲ್ ನಿರ್ದೇಶಕರ ಸ್ಥಾನದ ಚುನಾವಣೆಗೆ ಹುಸ್ಕೂರ್ ಟಿ ಆನಂದ್ ನಾಮಪತ್ರ ಸಲ್ಲಿಕೆ

ಮೇ 25 ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಗೆ ಹುಸ್ಕೂರ್ ಟಿ ಆನಂದ್ ಶನಿವಾರ ನಾಮಪತ್ರ ಸಲ್ಲಿಸಿದರು.   ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಮುನೇಗೌಡ , ಜೆಡಿಎಸ್ ರಾಜ್ಯ ಕಾರ್ಯದರ್ಶಿ ಡಾ. ವಿಜಯಕುಮಾರ್ ಸೇರಿದಂತೆ ಹಲವು ಪ್ರಮುಖರು ಸಾಥ್ ನೀಡಿದ್ದಾರೆ,   ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ” ನಮ್ಮ ಜೆಡಿಎಸ್ ಪಕ್ಷದ ವರಿಷ್ಠರಾದ ಬಿ ಮುನೇಗೌಡರವರ ಆದೇಶಕ್ಕೆ ನಾನು ಕಾಯುತ್ತಿದ್ದೇನೆ, ಸ್ಥಳೀಯವಾಗಿ ಜೆಡಿಎಸ್ ಪಕ್ಷವನ್ನು […]

Continue Reading

ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ ಫಲಿತಾಂಶ ಪ್ರಕಟ : 9 ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ- ಜೆಡಿಎಸ್ ಮೈತ್ರಿ ಭರ್ಜರಿ ಗೆಲುವು

ದೊಡ್ಡಬಳ್ಳಾಪುರ : ದೊಡ್ಡತುಮಕೂರು ತಾಲ್ಲೂಕಿನ ವ್ಯವಸಾಯ ಸೇವಾ ಸಹಕಾರ ಸಂಘ( ನಿ ) (ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ) ದ 12 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ 9 ಸ್ಥಾನಗಳನ್ನು ಪಡೆಯುವ ಮೂಲಕ ಜಯಭೇರಿ ಸಾಧಿಸಿದೆ.     ಅಕ್ಟೋಬರ್ 26 (26-10-2024)ರಂದು ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ ನೆಡೆದಿದ್ದ ಚುನಾವಣೆಯಲ್ಲಿ ಏನ್ ಡಿ ಎ ಬೆಂಬಲಿತ 9 (ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ) ಅಭ್ಯರ್ಥಿಗಳು ಗೆಲುವು […]

Continue Reading

ನಿಮ್ಮ ವಿಶೇಷ ದಿನಗಳನ್ನು ನಿರಂತರ ಅನ್ನದಾಸೋಹ ಸಮಿತಿ ಒಟ್ಟಿಗೆ ಆಚರಿಸಿ – ಎಚ್. ಶಿವಕುಮಾರ್

ದೊಡ್ಡಬಳ್ಳಾಪುರ : ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ಹಸಿದವರಿಗೆ ಆಹಾರ ವಿತರಣೆ ಹಾಗೂ ಕಡುಬಡವರಿಗೆ ಬಟ್ಟೆ ವಿತರಣೆ ಮಾಡುವ ಮೂಲಕ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಹಾಗೂ ಪ್ರಜಾ ವಿಮೋಚನಾ ಚಳುವಳಿ ತಾಲ್ಲೂಕು ಅಧ್ಯಕ್ಷರಾದ ಎಚ್. ಶಿವಕುಮಾರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.   ತಾಲ್ಲೂಕಿನ ದರ್ಗಾಜೋಗಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೆಡೆಯುತ್ತಿರುವ 1878 ನೇ ದಿನದ ನಿರಂತರ ಅನ್ನದಾಸೋಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಡು ಬಡವರಿಗೆ ನಿರಾಶ್ರಿತರಿಗೆ ಆಹಾರ ವಿತರಣೆ ಮತ್ತು ಬಟ್ಟೆ ವಿತರಣೆ […]

Continue Reading

ಬಮೂಲ್ ಚುನಾವಣೆ : ನಿರ್ದೇಶಕರ ಸ್ಥಾನದ ಚುನಾವಣೆಗೆ ಬಿ.ಸಿ. ಆನಂದ್ ಕುಮಾರ್ ನಾಮಪತ್ರ ಸಲ್ಲಿಕೆ : ಸ್ಥಳೀಯ ರೈತ ಸಂಘದಿಂದ ಸಂಪೂರ್ಣ ಬೆಂಬಲ ಘೋಷಣೆ

ಮೇ 25 ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸ್ಥಾನದ ಚುನಾವಣೆಗೆ ಬಿ.ಸಿ ಆನಂದ್ ಕುಮಾರ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮೇ. 25 ರಂದು ನಡೆಯಲಿರುವ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಾಯಿತು, ಕಳೆದ ಐದು ವರ್ಷಗಳಲ್ಲಿ ಹಾಲು ಉತ್ಪಾದಕ ಸಂಘಗಳಿಗೆ ಹಾಗೂ ರೈತರಿಗೆ ನನ್ನ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ, ಇಂದಿನ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನನ್ನೊಂದಿಗೆ ಪ್ರಾಮಾಣಿಕ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ […]

Continue Reading

NDA ವರಿಷ್ಠರು ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದರೆ ಬಮೂಲ್ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾನು ಸಿದ್ಧ – ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರ : ನಾನು ಚುನಾವಣೆಗೆ ನಿಲ್ಲಬಾರದೆಂಬ ದುರುದ್ದೇಶದಿಂದ ನನ್ನ ಮೇಲೆ ಮಾಡಿದ್ದ ಕೆಲ ಕುತಂತ್ರಗಳ ವಿರುದ್ಧ ನಾನು ನ್ಯಾಯಾಂಗದ ಮೊರೆ ಹೋಗಿದ್ದು, ಈಗ ನ್ಯಾಯಾಂಗ ವ್ಯವಸ್ಥೆಯಲ್ಲಿ ಗೆದ್ದಿದ್ದೇನೆ ಬಮೂಲ್ ಚುನಾವಣೆಯಲ್ಲಿ ಮತದಾನ ಮಾಡಲು ಮತ್ತು ಸ್ಪರ್ದಿಸಲು ನ್ಯಾಯಾಲಯ ಆದೇಶ ನೀಡಿದೆ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಿ ಮುನೇಗೌಡ ರವರು ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದರೆ ನಾಮಪತ್ರ ಸಲ್ಲಿಸಲು ನಾನು ಸಿದ್ಧ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್ ತಿಳಿಸಿದ್ದಾರೆ.   ಈ ಕುರಿತು ಮಾತಾಡಿರುವ ಅವರು ಬಮೂಲ್ […]

Continue Reading

ಬಮೂಲ್ ಚುನಾವಣೆ : ನಾಳೆ (ಮೇ.16) ಪ್ರಬಲ ಆಕಾಂಕ್ಷಿಯಾಗಿ ಅಧಿಕೃತ ನಾಮಪತ್ರ ಸಲ್ಲಿಕೆ ಮಾಡಲಿರುವ ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ : ಮೇ 25 ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಆಕಾಂಕ್ಷಿಯಾಗಿ ಬಿ ಸಿ ಆನಂದ್ ಕುಮಾರ್ ನಾಳೆ ನಾಮಪತ್ರ ಸಲ್ಲಿಸಲು ಸಕಲ ಸಿದ್ಧತೆ ನಡೆಸಿದ್ದು , ತಾಲೂಕಿನ ಎಲ್ಲಾ ಡೈರಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.   ಈ ಕುರಿತು ಮಾತನಾಡಿರುವ ಅವರು ನಾಳೆ ಮೇ 16ರಂದು ಬೆಳಗ್ಗೆ 9 ಗಂಟೆಗೆ ದೊಡ್ಡಬಳ್ಳಾಪುರ ಶಿಬಿರ ಕಚೇರಿಯಿಂದ ಹೊರಟು ಮಧ್ಯಾಹ್ನ ಸುಮಾರು 12 ಗಂಟೆಗೆ ನಾಮಪತ್ರ […]

Continue Reading

ಕೊಡಿಗೇಹಳ್ಳಿ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರಾದ ಗಾಯತ್ರಿ ಮಂಜುನಾಥ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ದೊಡ್ಡಬಳ್ಳಾಪುರ : ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಸಮ್ಮುಖದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಕೊಡಿಗೇಹಳ್ಳಿ ಪಂಚಾಯತಿ ಸದಸ್ಯರಾದ ಗಾಯತ್ರಿ ಮಂಜುನಾಥ್ ಸೇರ್ಪಡೆಯಾದರು.   ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಸಭೆಯ ನಂತರ ಸ್ಥಳೀಯ ಮುಖಂಡರ ಸಮಕ್ಷಮದಲ್ಲಿ ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಕೆ ಪಿ ಸಿ ಸಿ ಉಪಾಧ್ಯಕ್ಷ ಟಿ. ವೆಂಕಟರಮಣಯ್ಯನವರು ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಜೆಡಿಎಸ್ ಪಕ್ಷದ ಗಾಯತ್ರಿ ಮಂಜುನಾಥ್ ರವರನ್ನು ಸ್ವಾಗತಿಸಿದರು, ನಂತರ ಮಾತನಾಡಿದ ಅವರು ಮಹಾತ್ಮ ಗಾಂಧೀಜೀಯವರ ಕಾಲದಿಂದಲೂ […]

Continue Reading

ತೂಬಗೆರೆಯ ಎಂಟು ಹಲಸು ತಳಿಗಳಿಗೆ ಪಿಪಿಎಫ್‌ಆರ್‌ಎ ಪೇಟೆಂಟ್ : ರೈತರಿಗೆ ಹಕ್ಕು ಸ್ವಾಮ್ಯ ಪ್ರಮಾಣಪತ್ರ ವಿತರಣೆ

ದೊಡ್ಡಬಳ್ಳಾಪುರ: ಇಲ್ಲಿನ ತೂಬಗೆರೆ ಭಾಗದ ಎಂಟು ಹಲಸು ತಳಿಗಳಿಗೆ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ನೀಡಲಾಗಿದೆ . ತೂಬಗೆರೆ ಹಲಸು ಬೆಳೆಗಾರರ ಸಂಘ, ಜಿಲ್ಲಾ ತೋಟಗಾರಿಕೆ ಇಲಾಖೆ ಮತ್ತು  ಭಾ.ಕೃ.ಅ.ಪ – ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇವರುಗಳ ಸಹಯೋಗದೊಂದಿಗೆ ರೈತರಿಗೆ “ಹಕ್ಕು ಸ್ವಾಮ್ಯ ಪ್ರಮಾಣಪತ್ರ  ವಿತರಣೆ ಮತ್ತು ಕೃಷಿ – ವಿಜ್ಞಾನಿಗಳೊಂದಿಗೆ” ಸಂವಾದ  ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು . ಕೇಂದ್ರ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ‘ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ಸಂರಕ್ಷಣಾ ಪ್ರಾಧಿಕಾರ’ (ಪಿಪಿಎಫ್‌ಆರ್‌ಎ) ದಿಂದ  ತೂಬಗೆರೆ ಸುತ್ತಮುತ್ತಲಿನ […]

Continue Reading

ಇಂದು ತೂಬಗೆರೆಯಲ್ಲಿ ನೆಡೆಯಲಿದೆ ಹಲಸು ಕಾರ್ಯಾಗಾರ

ದೊಡ್ಡಬಳ್ಳಾಪುರ: ತೂಬಗೆರೆ ಹಲಸು ತನ್ನ ಬಣ್ಣ, ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈಗ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದು ಪ್ರಸಿದ್ಧಿ ಪಡೆದಿವೆ.   ಕೇಂದ್ರ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ‘ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ಸಂರಕ್ಷಣಾ ಪ್ರಾಧಿಕಾರ’ (ಪಿಪಿವಿಎಫ್‌ಆರ್‌ಎ) ದಿಂದ ಇತ್ತೀಚಿಗೆ  ತೂಬಗೆರೆ ಸುತ್ತಮುತ್ತಲಿನ ಹಲಸು ತಳಿಗಳಿಗೆ, ಹಲಸಿನ ಹಣ್ಣಿನಲ್ಲೇ ಉತ್ಕೃಷ್ಟ ಎಂದು ಗುರುತಿಸಿರುವ ಹಕ್ಕು ಸ್ವಾಮ್ಯ (ಪೇಟೆಂಟ್) ಸಿಕ್ಕಿದೆ.   ಈ ನಿಟ್ಟಿನಲ್ಲಿ ತೂಬಗೆರೆ ಹಲಸು ಬೆಳೆಗಾರರ ಸಂಘ, ಜಿಲ್ಲಾ ತೋಟಗಾರಿಕೆ ಇಲಾಖೆ ಮತ್ತು  ಭಾ.ಕೃ.ಅ.ಪ – […]

Continue Reading

CBSE ಪರೀಕ್ಷೆಯಲ್ಲೂ ಶೇಕಡ 100ರಷ್ಟು ಫಲಿತಾಂಶ ಪಡೆದ MVM ಶಾಲೆ : ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಆಡಳಿತ ಮಂಡಳಿ

ದೊಡ್ಡಬಳ್ಳಾಪುರ: ಕಳೆದ 2017-18ನೇ ಶೈಕ್ಷಣಿಕ ವರ್ಷದಿಂದ ಎಂ.ವಿ. ಎಂ ಶಾಲೆಯು ತಾಲ್ಲೂಕಿನಲ್ಲಿ ತನ್ನ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರೆಸುತ್ತಾ 2024–25ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ಗಳಿಸಿದೆ ಎಂದು ಶಾಲೆಯ ಸಂಸ್ಥಾಪಕ ಅಧ್ಯಕ್ಷ ಕೆ. ಶ್ರೀನಿವಾಸ್ ತಿಳಿಸಿದರು.     ಶಾಲೆಯ ಫಲಿತಾಂಶ ಕುರಿತು ಮಾತನಾಡಿದ ಅವರು ಕಳೆದ 08 ವರ್ಷಗಳಿಂದ ಶೇ.100 ಫಲಿತಾಂಶವನ್ನು ನಮ್ಮ ಶಾಲೆಯು ಪಡೆಯುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿಯ ಪರೀಕ್ಷೆಯಲ್ಲೂ ಶೇಕಡಾ ನೂರರಷ್ಟು ಫಲಿತಾಂಶ ಪಡೆದಿರುವುದು […]

Continue Reading