ದೊಡ್ಡಬಳ್ಳಾಪುರ : ಕರಗ ಮಹೋತ್ಸವ ವಿಶೇಷ : 25 ವರ್ಷಗಳ ಅನ್ನದಾಸೋಹ ಕಾರ್ಯಕ್ರಮಕ್ಕೆ ಗಣ್ಯರಿಂದ ಚಾಲನೆ

ದೊಡ್ಡಬಳ್ಳಾಪುರ : ತಾಲೂಕಿನ ಇತಿಹಾಸ ಪ್ರಸಿದ್ಧ ಕರಗ ಮಹೋತ್ಸವದ ಅಂಗವಾಗಿ ಖಾಸಗಿ ಬಸ್ಸುಗಳ ಮಾಲೀಕರು ಹಾಗೂ ಕಾರ್ಮಿಕರ ಸಂಘದ ವತಿಯಿಂದ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.   ಕಳೆದ 25 ವರ್ಷಗಳಿಂದ ಕರಗ ಮಹೋತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತ ಆಹಾರ ವಿತರಣೆ ಮಾಡುವ ಕಾರ್ಯವನ್ನು ಖಾಸಗಿ ಬಸ್ಸುಗಳ ಮಾಲೀಕರು ಹಾಗೂ ಕಾರ್ಮಿಕ ಸಂಘದ ವತಿಯಿಂದ ಆಯೋಜನೆ ಮಾಡಲಾಗುತ್ತಿದ್ದು, ಈ ಬಾರಿಯ ಕಾರ್ಯಕ್ರಮಕ್ಕೆ ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ , ನಗರಸಭೆ ಉಪಾಧ್ಯಕ್ಷ ಎಂ ಮಲ್ಲೇಶ್ , ಹಾಗೂ ಸ್ಥಾಯಿ […]

Continue Reading

” ಆಪರೇಷನ್ ಸಿಂಧೂರ್ ” ದಲ್ಲಿ ವೀರ ಮರಣ ಹೊಂದಿದ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ಕನ್ನಡ ಜಾಗೃತಿ ವೇದಿಕೆ

ದೊಡ್ಡಬಳ್ಳಾಪುರ : ಕನ್ನಡ ಜಾಗೃತಿ ವೇದಿಕೆ ತಾಲೂಕು ಮತ್ತು ಜಿಲ್ಲಾ ಘಟಕದ ವತಿಯಿಂದ ಆಪರೇಷನ್ ಸಿಂಧೂರ ದಲ್ಲಿ ವೀರ ಮರಣ ಹೊಂದಿದ ವೀರ ಯೋಧರಿಗೆ ಸಿದ್ದಲಿಂಗಯ್ಯ ಸರ್ಕಲ್ ವೃತ್ತದಲ್ಲಿ ದೀಪ ಹಚ್ಚುವ ಮುಖಾಂತರ ಶ್ರದ್ಧಾಂಜಲಿ/ ಮೌನಚರಣೆ ಅರ್ಪಿಸಲಾಯಿತು.. ಕಾರ್ಯಕ್ರಮದಲ್ಲಿ ಮೊದಲಿಗೆ ಮೌನಚರಣೆ ಶ್ರದ್ದಾಂಜಲಿ. ದೀಪ ಬೆಳಗು ಮುಖಾಂತರ ಗೌರವ ಸಲ್ಲಿಸಲಾಯಿತು ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ನಾಗರಾಜ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ,ದೇಶಕ್ಕೆ ರೈತ ಎಷ್ಟು ಮುಖ್ಯವೋ ಸೈನಿಕರು ಕೂಡ ಅಷ್ಟೇ ಮುಖ್ಯವಾಗಿರಾಗಿರುತ್ತಾರೆ,ದೇಶಕ್ಕೆ ರೈತ ಬೆನ್ನೆಲುಬು ಆದರೆ […]

Continue Reading

ಇ -ಖಾತಾ ಅಭಿಯಾನದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದೇವೆ – ಸುಮಿತ್ರಾ ಆನಂದ್

ದೊಡ್ಡಬಳ್ಳಾಪುರ ನಗರಸಭೆಯು ಕಳೆದ ವರ್ಷಗಳಲ್ಲಿ ಶೇಕಡಾ 85ರಿಂದ 90 ರಷ್ಟು ಇದ್ದ ತೆರಿಗೆ ವಸೂಲಾತಿ ಕಳೆದ 9 ತಿಂಗಳ ಅವಧಿಯಲ್ಲಿ ಶೇಕಡಾ 100ರಷ್ಟು ಮಾಡಲಾಗಿದೆ.ಅಲ್ಲದೇ ಇ -ಖಾತಾ ಅಭಿಯಾನದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದೇವೆ ಎಂದು ನಗರ ಸಭೆ ಅಧ್ಯಕ್ಷರಾದ ಸುಮಿತ್ರಾ ಆನಂದ್ ತಿಳಿಸಿದರು. ದೊಡ್ಡಬಳ್ಳಾಪುರ ನಗರ ಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿವೆ ಈ ಅವಧಿಯಲ್ಲಿ ಕೈಗೊಂಡಿರುವ ಯೋಜನೆ ಹಾಗೂ ಕಾರ್ಯಕ್ರಮ, ಕಾರ್ಯವೈಖರಿಗಳ ಬಗ್ಗೆ ಮಾಹಿತಿ […]

Continue Reading

ದೊಡ್ಡಬಳ್ಳಾಪುರ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಗಳ ಪರೇಡ್

ಇತ್ತೀಚಿಗೆ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಅದರಲ್ಲೂ ರೌಡಿಶೀಟರ್ ಗಳು ಹೆಚ್ಚಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ಡಿವೈಎಸ್ ಪಿ ಉಪವಿಭಾಗದಲ್ಲಿ ರೌಡಿ ಪರೇಡ್ ನಡೆಸಲಾಯಿತು. ಇಂದು ನಗರದ ಡಿವೈಎಸ್ ಪಿ ಕಚೇರಿ ಆವರಣದಲ್ಲಿ ಎಎಸ್ ಪಿ-2(ಅಪರಾಧ ವಿಭಾಗ) ಕೆ.ಎಸ್ ನಾಗರಾಜ್ ಅವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗಕ್ಕೆ ಒಳಪಡುವ ದೊಡ್ಡಬಳ್ಳಾಪುರ ಗ್ರಾಮಾಂತರ, ದೊಡ್ಡಬಳ್ಳಾಪುರ ನಗರ, ಹೊಸಹಳ್ಳಿ, ದೊಡ್ಡಬೆಳವಂಗಲ, ವಿಜಯಪುರ,‌ ವಿಶ್ವನಾಥಪುರ, ಚೆನ್ನರಾಯಪಟ್ಟಣ, ರಾಜಾನುಕುಂಟೆ ಪೊಲೀಸ್ […]

Continue Reading

ವೀರಾಪುರದ ದ್ವಾರಬಾಗಿಲು ಕಾಮಗಾರಿಗೆ ಭೂಮಿ ಪೂಜೆ : ಸಮುದಾಯ ಭವನ ಉದ್ಘಾಟಿಸಿ ಶುಭ ಹಾರೈಸಿದ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : ತಾಲ್ಲೂಕಿನ ಬಾಶೆಟ್ಟಿಹಳ್ಳಿ ರಸ್ತೆಯಿಂದ ವೀರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಊರಿನ ದ್ವಾರ ಬಾಗಿಲು ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ವೀರಾಪುರ ಗ್ರಾಮಕ್ಕೆ 2025-26 ನೇ ಸಾಲಿನ ಮ್ಯಾಕ್‌ ಏರೋ ಕಾಂಪೋನೆಂಟ್ಸ್‌ ಕಾರ್ಖಾನೆಯ ಸಿ.ಎಸ್.‌ ಆರ್.‌ ಯೋಜನೆಯಡಿ ನಿರ್ಮಿಸಲಾದ ಸಮುದಾಯ ಭವನವನ್ನು ಶನಿವಾರ ಶಾಸಕ ಧೀರಜ್ ಮುನಿರಾಜು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಬೃಹತ್ ಕಂಪನಿಗಳು ಸ್ಥಳೀಯವಾಗಿ ಸಾರ್ವಜನಿಕ ಉಪಯೋಗಿ ಕಾರ್ಯಗಳಿಗೆ ಸಹಕಾರ ನೀಡುವುದರಿಂದ ಕಂಪನಿ ಮತ್ತು ಸ್ಥಳೀಯರೊಂದಿಗೆ ಉತ್ತಮ ಸಂಬಂಧ ವೃದ್ಧಿಯಾಗುತ್ತದೆ. ಈ […]

Continue Reading

ದೊಡ್ಡಬಳ್ಳಾಪುರ : ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ  ನುಡಿನಮನ ಕಾರ್ಯಕ್ರಮ

ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು  ಕನ್ನಡ ಸಾಹಿತ್ಯ ಪರಿಷತ್ತಿನ   ಅಧ್ಯಕ್ಷರಾಗಿದ್ದ ಅವಧಿಯಲ್ಲಿ  ಪರಿಷತ್ತು  ಸರ್ವತೋಮುಖ ಬೆಳವಣಿಗೆ ಆಯಿತು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ತಿಳಿಸಿದರು.   ಅವರು  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ  ಡಾ.ರಾಜ್ ಕುಮಾರ್‌ ಕಲಾಮಂದಿರ ಆವರಣದಲ್ಲಿ ನಡೆದ  ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ  ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು   ಕಸಾಪ  ಅಧ್ಯಕ್ಷರಾಗಿದ್ದ ಅವಧಿಯಲ್ಲಿ  ಪರಿಷತ್ತು ಧ್ವಜ ರೂಪಗೊಂಡಿತು.  ನಾಡಗೀತೆ  ಹಾಡುವ ಅವಧಿಗೆ ಬಗ್ಗೆ  ಹೆಚ್ಚು ಮಾಡಿದ್ದರು.   ಕನ್ನಡ ಸಾಹಿತ್ಯ […]

Continue Reading

KSRTC ಬಸ್ ಅಪಘಾತ : ತಪ್ಪಿದ ಭಾರಿ ಅನಾಹುತ : ಅಪಘಾತಕ್ಕೆ ಸರ್ವಿಸ್ ರಸ್ತೆ ಇಲ್ಲದಿರುವುದೇ ಕಾರಣ ಎಂದ ಗ್ರಾಮಸ್ಥರು

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕೆಎಸ್ ಆರ್ ಟಿಸಿ ಬಸ್ ಟೈರ್ ಸ್ಪೋಟಗೊಂಡು, ನಿಯಂತ್ರಣ ತಪ್ಪಿದ ಬಸ್ ರಸ್ತೆಯ ತಡೆಗೋಡೆಗೆ ಗುದ್ದಿದೆ,ಬಸ್ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದೂ ಚಾಲಕನ ಸಮಯ ಪ್ರಜ್ಞೆಯಿಂದ ಸದ್ಯ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದ್ದು,ಸೂಲಿಕುಂಟೆ-ದೊಡ್ಡಬಳ್ಳಾಪುರ ಮಾರ್ಗದ ಬಸ್ ದೊಡ್ಡಬಳ್ಳಾಪುರ ನಗರಕ್ಕೆ ಬರುವ ವೇಳೆ ಈ ಅವಘಡ ಸಂಭವಿಸಿದೆ. ಚಾಲಕ ಮುನಿಶ್ಯಾಮಪ್ಪ ರವರ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರ ಪ್ರಾಣ ಉಳಿದಿದೆ, […]

Continue Reading

ಕಲ್ಯಾಣಪಥ ಪ್ರಗತಿಪಥ ರಸ್ತೆ ನಿರ್ಮಾಣದಲ್ಲಿ ಗುಣಮಟ್ಟ ಕಾಪಾಡಲು ಸಚಿವ ಪ್ರಿಯಾಂಕ್‌ ಖರ್ಗೆ ಅವರಿಂದ ಎಂಜನಿಯರುಗಳಿಗೆ ನಿರ್ದೇಶನ

ಬೆಂಗಳೂರು:- ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಬಲ್ಲ ಈ ರಸ್ತೆಗಳನ್ನು ಗುಣಮಟ್ಟದಿಂದ ನಿರ್ಮಾಣ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಪಂಚಾಯತ್‌ ರಾಜ್‌ ಇಲಾಖೆಯ ಎಂಜನಿಯರುಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪಂಚಾಯತ್‌ ರಾಜ್‌ ಎಂಜನಿಯರಿಂಗ್‌ ಇಲಾಖೆ ಹಾಗೂ ಕರ್ನಾಟಕ ಗ್ರಾಮೀಣ ಅಭಿವೃದ್ಧಿ […]

Continue Reading

ಆಪರೇಷನ್ ಸಿಂಧೂರ; ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸಿರುವ ಭಾರತ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ.   ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಪತ್ರ ಬರೆದಿರುವ ದೇವೇಗೌಡರು; ಮೇ 7ರಂದು ಪಹಲ್ಗಾಮ್ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಭಾರತದ ಪ್ರಬುದ್ಧ ಮತ್ತು ಸಂಯಮದ ಮಿಲಿಟರಿ ಪ್ರತಿಕ್ರಿಯೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ ಎಂದು […]

Continue Reading

ಒತ್ತುವರಿ ತೆರವು ಮಾಡುವ ಮೂಲಕ ಸುಮಾರು 70 ಲಕ್ಷ ಮೌಲ್ಯದ ಜಾಗವನ್ನು ಸರ್ಕಾರದ ವಶಕ್ಕೆ ಪಡೆದ ಅಧಿಕಾರಿಗಳು

ದೊಡ್ಡಬಳ್ಳಾಪುರ : ಸರ್ಕಾರಿ ಗೋಮಾಳ ಜಾಗವನ್ನ 5 ಮಂದಿ ಒತ್ತುವರಿ ಮಾಡಿದ್ರು, ಲೋಕಾಯುಕ್ತರ ಆದೇಶದ ಮೇರೆಗೆ ಕಾರ್ಯಾಚರಣೆ ನಡೆಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸಿದ್ದಾರೆ, ಸುಮಾರು 70 ಲಕ್ಷ ಮೌಲ್ಯದ ಜಾಗವನ್ನು ಸರ್ಕಾರದ ವಶಕ್ಕೆ ಪಡೆದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕು ಕಾರನಾಳ ಗ್ರಾಮದ ಸರ್ವೆ ನಂಬರ್ 49ರಲ್ಲಿ 1 ಎಕರೆ 10 ಗುಂಟೆ ಸರ್ಕಾರಿ ಗೋಮಾಳ ಜಾಗವನ್ನ ಸುತ್ತಮುತ್ತಲಿನ 5 ಮಂದಿ ಒತ್ತುವರಿ ಮಾಡಿದ್ದರು, ನಂಜಪ್ಪ, ಸಂಜೀವರಾಯಪ್ಪ, ನಾರಾಯಣಪ್ಪ , ರವಿ.ಕವಿತಾ ಒತ್ತುವರಿ […]

Continue Reading