ಹೋಂ ಸ್ಟೆ ನಿರ್ಮಿಸಲು ಸಹಾಯ ಧನಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ, ಗೊಡ್ಡುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿ ಗ್ರಾಮ, ಮಂಡಿಬೆಲೆ ಗ್ರಾಮ ಪಂಚಾಯಿತಿಯ ಚಿಕ್ಕ ತತ್ತಮಂಗಲ ಗ್ರಾಮ, ಕಾರಹಳ್ಳಿ ಗ್ರಾಮ ಪಂಚಾಯಿತಿಯ ಕೆಂಪತಿಮ್ಮನಹಳ್ಳಿ ಗ್ರಾಮ, […]

Continue Reading

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ “ಆಗಸ್ಟ್ 01 ರಂದು “ವ್ಯಸನ ಮುಕ್ತ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ ದೇವನಹಳ್ಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ವತಿಯಿಂದ ಆಗಸ್ಟ್ 01(ಶುಕ್ರವಾರ) ರಂದು ಬೆಳಗ್ಗೆ 11 ಗಂಟೆಗೆ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ “ವ್ಯಸನ ಮುಕ್ತ ದಿನಾಚರಣೆ” ಕಾರ್ಯಕ್ರಮವನ್ನು ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸರ್.ಎಂ ವಿಶ್ವೇಶ್ವರಯ್ಯ […]

Continue Reading

ಈ ಬಾರಿಯ 79ನೇ ಸ್ವಾತಂತ್ರ್ಯ ದಿನಾಚರಣೆಯು ವಿಶೇಷತೆಯಿಂದ ಕೂಡಿರಲಿದೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ, ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಹಲವು ವಿಶೇಷತೆಗಳಿಂದ ಕೂಡಿರಲಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಆಗಸ್ಟ್ 15 ರಂದು ಬೆಳಗ್ಗೆ 7 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ, ಬೆಳಗ್ಗೆ 09 ಗಂಟೆಗೆ ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ […]

Continue Reading

ದಶಕಗಳಿಂದ ಸರ್ವಿಸ್ ಪಡೆದು ಏಕಾಏಕಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡಿ ಎಂದ ಅರಣ್ಯ ಇಲಾಖೆ : ಮೌನ ಪ್ರತಿಭಟನೆಗೆ ಮುಂದಾದ ದಿನಗೂಲಿ ನೌಕರರು : ಪ್ರತಿಭಟನೆಗೆ ಕರವೇ ಸಾಥ್

ದೊಡ್ಡಬಳ್ಳಾಪುರ : ಅರಣ್ಯ ಸಂಪನ್ಮೂಲ ರಕ್ಷಿಸಲು ದಶಕಗಳಿಂದ ಸೇವೆ ಪಡೆದ ಅರಣ್ಯ ಇಲಾಖೆ ಏಕ-ಏಕಿ ತನ್ನ 14 ದಿನಕೂಲಿ ಸಿಬ್ಬಂದಿಗಳನ್ನು ಹೊರಗುತ್ತಿಗೆ ಪಾಲುಮಾಡಿರುವ ಘಟನೆ ದೊಡ್ಡಬಳ್ಳಾಪುರ ಅರಣ್ಯ ಇಲಾಖೆಯಲ್ಲಿ ನೆಡೆದಿದೆ. ಹೊರಗುತ್ತಿಗೆ ಅಡಿಯಲ್ಲಿ ಕರ್ತವ್ಯ ನಿರ್ವಹಿಸಲು ಇಷ್ಟವಿಲ್ಲದ ಸಿಬ್ಬಂದಿ ವರ್ಗ ತಾಲ್ಲೂಕಿನ ಅರಣ್ಯ ಇಲಾಖೆಯ ಕೇಂದ್ರ ಕಚೇರಿ ಮುಂಭಾಗ ಮೌನ ಪ್ರತಿಭಟನೆಗೆ ಮುಂದಾಗಿದೆ. ಅರಣ್ಯ ಇಲಾಖೆ ನೌಕರರ ಸಮಸ್ಯೆ ಅರಿತ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡರ ವೇದಿಕೆ )ಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು […]

Continue Reading

ಒಳಮೀಸಲಾತಿ ಹೋರಾಟ : ಆಗಸ್ಟ್ 1ರಂದು ಅರೆಬೆತ್ತಲೆ ಮೂಲಕ ಸಾಂಕೇತಿಕ ಪ್ರತಿಭಟನೆ : ಒಳ ಮೀಸಲಾತಿ ಜಾರಿಗೊಳಿಸಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದ ದಲಿತ ಮುಖಂಡರು

ದೊಡ್ಡಬಳ್ಳಾಪುರ: ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರವು ಒಳ ಮೀಸಲಾತಿಯನ್ನು ಘೋಷಣೆ ಮಾಡದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆಗಸ್ಟ್ 1ರಂದು ದಲಿತ ಸಮುದಾಯದ ಮುಖಂಡರಿಂದ ಅರೆಬೆತ್ತಲೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಮುಖಂಡ ಬಚ್ಚಹಳ್ಳಿ ನಾಗರಾಜು ತಿಳಿಸಿದರು. ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿವಿವಿಧ ದಲಿತ ಸಂಘಟನೆಗಳ ಮುಖಂಡರಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸುಪ್ರೀಂ ಕೋರ್ಟ್ ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದ್ದರು ಈವರೆಗೂ […]

Continue Reading

ಮನೆ ಬಾಗಿಲಿಗೆ ಪೊಲೀಸ್ ಸೇವೆ : ಪೊಲೀಸ್ ವರಿಷ್ಠಾಧಿಕಾರಿಗಳಿಂದ “ಮನೆ ಮನೆಗೆ ಪೊಲೀಸ್ ” ಅಭಿಯಾನಕ್ಕೆ ಚಾಲನೆ

ದೊಡ್ಡಬಳ್ಳಾಪುರ : ಮನೆ–ಮನೆಗೆ ಭೇಟಿ ನೀಡುವುದರಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ. ಜನರಲ್ಲಿ ಸುರಕ್ಷತಾ ಮನೋಭಾವ ಮೂಡಲಿದೆ. ಸೈಬರ್ ಅಪರಾಧಗಳ ಅರಿವು ಮೂಡಿಸಲಾಗುವುದು, ಪೊಲೀಸ್ ಇಲಾಖೆ ನೆರವು ಪಡೆಯುವ ವಿಧಾನ ಸೇರಿದಂತೆ ಇಲಾಖೆಯ ಸಮಗ್ರ ಸೇವೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹೇಳಿದರು. ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮನೆ ಮನೆಗೆ ಪೊಲೀಸ್‌ ಯೋಜನೆಗೆ ಚಾಲನೆ ಹಾಗೂ ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡಗಳ […]

Continue Reading

Gitam : ಬೆಂಗಳೂರು ಗೀತಮ್ ವಿಶ್ವವಿದ್ಯಾನಿಲಯದಲ್ಲಿ ಅದ್ದೂರಿಯಾಗಿ ನೆಡೆದ ಪದವಿ ಪ್ರಧಾನ ಸಮಾರಂಭ

“ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ, ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಮುಂದೆ ಸಾಗುವುದರಿಂದ ಸಮಾಜದಲ್ಲಿ ಮನ್ನಣೆ ಮತ್ತು ಪುರಸ್ಕಾರಗಳು ತಾವಾಗಿಯೇ ಹುಡುಕಿಕೊಂಡು ಬರುತ್ತವೆ ಎಂದು ಬೋಯಿಂಗ್ ಸಂಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (AI) ವಿಭಾಗದ ಎಕ್ಸಿಕ್ಯೂಟಿವ್ ಡೈರೆಕ್ಟ‌ರ್ ಮತ್ತು ಹಿರಿಯ ತಂತ್ರಜ್ಞೆ ಡಾ. ಸೀಮಾ ಚೋಪ್ರಾ ತಿಳಿಸಿದರು. ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಗೀತಮ್ ವಿಶ್ವವಿದ್ಯಾಲಯದಲ್ಲಿಂದು (ಡೀಮ್ಡ್ ಯೂನಿವರ್ಸಿಟಿ) ಪದವಿ, ಸ್ನಾತಕೋತ್ತರ, ಪಿಎಚ್ಡಿ ವಿದ್ಯಾರ್ಥಿಗಳಿಗೆ ಪದವಿ […]

Continue Reading

ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ಪರಿಕರಗಳ ವಿತರಣೆ : ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಶಾಲೆ ಉಳಿವಿಗೆ ಶ್ರಮಿಸಲಾಗುವುದು – ಟಿ ಜಿ ಮಂಜುನಾಥ್

ದೊಡ್ಡಬಳ್ಳಾಪುರ: ನಮ್ಮ ದೊಡ್ಡ ತುಮಕೂರು ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಸುಮಾರು 110 ಮಕ್ಕಳಿಗೆ ಅಗತ್ಯವಿರುವ ಕಲಿಕಾ ಪರಿಕರಗಳನ್ನು ಹಾಗೂ ಟ್ರ್ಯಾಕ್ ಸೂಟ್ ಗಳನ್ನು ವಿತರಣೆ ಮಾಡಲಾಗಿದೆ ಎಂದು ದೊಡ್ಡ ತುಮಕೂರು ಪಂಚಾಯಿತಿ ಮಾಜಿ ಅಧ್ಯಕ್ಷ ಟಿ ಜಿ ಮಂಜುನಾಥ್ (LIC) ತಿಳಿಸಿದರು.   ದೊಡ್ಡತುಮಕೂರು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಕಲಿಕಾ ಸಾಮಗ್ರಿ ಹಾಗೂ ಟ್ರಾಕ್ ಶೂಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಳೆದ 35 ವರ್ಷಗಳಿಂದ ನಿರಂತರವಾಗಿ ಶಾಲಾ ಮಕ್ಕಳಿಗೆ ನೋಟ್ […]

Continue Reading

ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.   ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಲು ಒಂದೇ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಜನಸ್ಪಂದನ/ಸಾರ್ವಜನಿಕ ಕುಂದು ಕೊರತೆ ಸಭೆ ಆಯೋಜಿಸಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಜನರ ಅಹವಾಲನ್ನು […]

Continue Reading

ನಿರ್ಗತಿಕ ಕಡುಬಡವರೊಂದಿಗೆ ನಿಮ್ಮ ವಿಶೇಷ ದಿನಗಳನ್ನು ಆಚರಿಸಿ – ಲಕ್ಷ್ಮೀಪತಿ

ಸಾವಿರಾರು ನಿರ್ಗತಿಕರ ದಿನ ನಿತ್ಯದ ಬದುಕಿಗೆ ನಿರಂತರ ಅನ್ನ ದಾಸೋಹ ಆಧಾರವಾಗಿದೆ. ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಸಿದವರಿಗೆ ಆಹಾರ ವಿತರಣೆ ಮಾಡಿರುವುದು ಸಂತಸತಂದಿದೆ ಎಂದು ನಟ, ನಿರ್ಮಾಪಕರಾದ ಲಕ್ಷ್ಮೀಪತಿ ತಿಳಿಸಿದರು. 1949 ನೇ ದಿನದ ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅವರು ನಂತರ ಮಧ್ಯಮಗಳೊಂದಿಗೆ ಮಾತನಾಡಿದರು ದಾನಗಳಲ್ಲೇ ಶ್ರೇಷ್ಠವಾದ ಅನ್ನದಾನವನ್ನು ಕಳೆದ 5ವರ್ಷಗಳಿಂದ ನಿರಂತರವಾಗಿ ಮಲ್ಲೇಶ್ ಮತ್ತು ತಂಡ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನೆಡೆಸಿಕೊಂಡು ಬರುತ್ತಿದೆ. ಇಲ್ಲಿ ಪ್ರತಿ ನಿತ್ಯ ನೂರಾರು ಬಡ […]

Continue Reading