ನಮ್ಮ ರಾಜ್ಯಕ್ಕೆ ಮಾತೃಭಾಷೆ ಕನ್ನಡ ಹಾಗೂ ಪರ್ಯಾಯ ಭಾಷೆ ಇಂಗ್ಲಿಷ್ ಸಾಕು.. ಹಿಂದಿ ಬೇಡ – ಪುರುಷೋತ್ತಮ್ ಗೌಡ

ರಾಜ್ಯದಲ್ಲಿ ತ್ರಿಭಾಷಾ ನೀತಿಯನ್ನ ರದ್ದು ಮಾಡಿ ದ್ವಿಭಾಷಾ ನೀತಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ದೇವನಹಳ್ಳಿಯ ಜಿಲ್ಲಾಧಿಕಾರಿಗಳ ಮುಖೇನ ರಾಜ್ಯದ ಮುಖ್ಯಮಂತ್ರಿಗಳಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು. ದೇವನಹಳ್ಳಿಯ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಕರವೇ ಕಾರ್ಯಕರ್ತರು ರಾಜ್ಯದಲ್ಲಿ ತ್ರಿಭಾಷಾ ನೀತಿಯನ್ನ ರದ್ದು ಮಾಡಿ ದ್ವಿಭಾಷಾ ನೀತಿಯನ್ನ ಜಾರಿ ಮಾಡುವಂತೆ ಒತ್ತಾಯಿಸಿದರು, ಕರವೇ ಕಾರ್ಯಕರ್ತರ ಮನವಿಯನ್ನು ಡಿಸಿ ಕಚೇರಿಯ ತಹಶೀಲ್ದಾರ್ ರಾಜೀವ್ ಸುಲೋಚನ ಸ್ವೀಕರಿಸಿದರು.   ಇದೇ […]

Continue Reading

ಖಾಸಗಿ ಬಸ್ ಗಳ ನಿಲ್ದಾಣಕ್ಕೆ ಸ್ಥಳ ಕಲ್ಪಿಸಿ : ಖಾಸಗಿವಾಹನಗಳ ನಿಲ್ದಾಣಕ್ಕೆ ನಿರ್ಭಂದಿಸಿರುವ ನಾಮಫಲಕ ತೆರವುಗೊಳಿಸಲು ಖಾಸಗಿ ಬಸ್ ಮಾಲೀಕರ ಅಗ್ರಹ

ಬಿ.ಎಂ.ಟಿ.ಸಿ.ಸಂಸ್ಥೆಯವರಿಗೆ ಅನುಕೂಲ ಕಲ್ಪಿಸಲು ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಅನಧಿಕೃತವಾಗಿ ಖಾಸಗಿ ಬಸ್ ಗಳ ಪ್ರವೇಶಕ್ಕೆ, ನಿರ್ಭಂದ ಏರಲಾಗಿದೆ ಅಲ್ಲದೇ ಖಾಸಗಿ ವಾಹನಗಳ ನಿಲುಗಡೆ ಮಾಡದಂತೆ ನಾಮಫಲಕ ಅಳವಡಿಸಿದ್ದು ಕೂಡಲೇ ನಗರ ಸಭೆ ಈ ನಾಮಫಲಕವನ್ನು ತೆರವುಗೊಳಿಸಬೇಕೆಂದು ಖಾಸಗಿ ಬಸ್ ಮಾಲೀಕರಾದ ವಿಕ್ರಂ ಅಗ್ರಸಿದರು.   ನಾವುಗಳು ಸರ್ಕಾರದ ಪರವಾನಗಿಯಂತೆ ಖಾಸಗಿ ಬಸ್ ನಿಲ್ದಾಣವಾಗಿಸಿಕೊಂಡು ಅಂದಿನಿಂದಲೂ ಪ್ರತಿ ನಿತ್ಯ ದೊಡ್ಡಬಳ್ಳಾಪುರ ನಗರಸಭೆಗೆ ಪ್ರತಿ ಬಸ್ ಗೂ ಇಂತಿಷ್ಟು  ಸುಂಕವನ್ನು ಪಾವತಿಸಿಕೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ಬಂದಿದ್ದೇವೆ  ನಮ್ಮ ಹಳೆಯ […]

Continue Reading

ತೂಬಗೆರೆ : ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಘಾಟಿ ಸುಬ್ರಹ್ಮಣ್ಯದ ಪ್ರವಾಸಿ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ರವಿ ಸಿದ್ದಪ್ಪ. ವಿಜಯಪುರ ಹೋಬಳಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಮಂಜುನಾಥ. ಹಾಗೂ ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ವೆಂಕಟೇಶ್‌ ರವರುಗಳಿಗೆ ಅಭಿನಂದನೆ ಹಾಗು ಸನ್ಮಾನ ಸಮಾರಂಭವನ್ನು ಘಾಟಿ ಸುಬ್ರಹ್ಮಣ್ಯದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು. ತೂಬಗೆರೆ ನಿಕಟ ಪೂರ್ವ ಬ್ಲಾಕ್ ಅಧ್ಯಕ್ಷ ಹಾಗು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ರಂಗಪ್ಪ ಮಾತನಾಡಿ ಕಾಂಗ್ರೆಸ್ ಪಕ್ಷ ಅಭಿವೃದ್ದಿ ಕಾರ್ಯಗಳನ್ನು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ […]

Continue Reading

ಆರಕ್ಷಕ ಠಾಣಾ ಸಿಬ್ಬಂದಿಗಳಿಗೆ ಉಚಿತ ಅರೋಗ್ಯ ತಪಾಸಣಾ ಶಿಬಿರ

  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ದೃಷ್ಟಿ ಕಣ್ಣಿನ ಆಸ್ಪತ್ರೆ ಸಹಭಾಗಿತ್ವದಲ್ಲಿ ದೊಡ್ಡಬಳ್ಳಾಪುರ ಆರಕ್ಷಕ ಇಲಾಖೆಯ ಸಹಕಾರದೊಂದಿಗೆ ಆರಕ್ಷಕ ಠಾಣಾ ಸಿಬ್ಬಂದಿಗಳಿಗೆ ಉಚಿತ ಕಣ್ಣಿನ ತಪಾಸಣೆ ಹಾಗೂ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.   ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜನಕುಂಟೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಶ್ರೀ ದಿಲೀಪ್ ಕುಮಾರ್ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಪೊಲೀಸ್ ಇಲಾಖೆಗೆ ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ತಿಳಿಸಿದರು.     […]

Continue Reading

ಗುಳ್ಯ ದೇವಸ್ಥಾನದಲ್ಲಿ ಅಸ್ಪೃಶ್ಯತೆ ಆಚರಣೆ :ದೇವಸ್ಥಾನ ಪ್ರವೇಶಿಸುವ ಮೂಲಕ ಅನಿಷ್ಟ ಪದ್ಧತಿಗೆ ಅಂತ್ಯವಾಡಿದ ದಲಿತರು

ದೊಡ್ಡಬಳ್ಳಾಪುರ : ತಾಲ್ಲೂಕಿನ ಗೂಳ್ಯ ಗ್ರಾಮದ ವೇಯಿಗಣ್ಣಮ್ಮ ದೇವಸ್ಥಾನದಲ್ಲಿ ಅಸ್ಪೃಶ್ಯತೆ ಆಚರಣೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಾಲ್ಲೂಕಿನ ದಂಡಾಧಿಕಾರಿ ವಿಭಾ ವಿದ್ಯಾ ರಾಥೋಡ್ ಅವರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಿ ದಲಿತರು ದೇವಸ್ಥಾನ ಪ್ರವೇಶಿಸಿದರು. ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ಗ್ರಾಮದ ವೇಯಿಗಣ್ಣಮ್ಮ ದೇವಸ್ಥಾನಕ್ಕೆ ದಲಿತರ ಪ್ರವೇಶ ನಿಷೇಧಿಸಲಾಗಿತ್ತು, ಈ ಕುರಿತು ಗ್ರಾಮದ ಶಕುಂತಲಮ್ಮ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಗ್ರಾಮದಲ್ಲಿನ ಅಸ್ಪೃಶ್ಯತೆ ಆಚರಣೆಯನ್ನು ತೊಲಗಿಸುವಂತೆ ಮನವಿ ಮಾಡಿದ್ರು ಈ ಹಿನ್ನೆಲೆಯಲ್ಲಿ ಶುಕ್ರವಾರ ಕಂದಾಯ, ಪೊಲೀಸ್ ಮತ್ತು […]

Continue Reading

ಶುದ್ಧ ಗಾಳಿ,ನೀರು, ಅರೋಗ್ಯಕ್ಕಾಗಿ ಪರಿಸರ ಉಳಿಸಿ – ಲೋಹಿತ್ ಗೌಡ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತೂಬಗೆರೆ ಹೋಬಳಿಯ ಕಾರನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಿತು.   ಶಾಲಾ ಆವರಣದಲ್ಲಿ ಗಿಡ ನಾಟಿ ಮಾಡಿಸದಸ್ಯರಿಗೆ ಮತ್ತು ವಿಧ್ಯಾರ್ಥಿಗಳಿಗೆ ಗಿಡ ವಿತರಣೆ ಮಾಡಲಾಯಿತು     ತಾಲೂಕಿನ ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು ಹವಾಮಾನ ವೈಪರೀತ್ಯ,ಕೈಗಾರಿಕರಣದಿಂದ ನಮ್ಮ ಸುತ್ತಮುತ್ತಲಿನ ವಾತಾವರಣ ಅಶುದ್ಧವಾಗುತ್ತಿದೆ. ಜನಸಾಮಾನ್ಯರು ಅನಾರೋಗ್ಯಕಿಡಾಗುತ್ತಿದ್ದಾರೆ ಆದ […]

Continue Reading

ವಸತಿ ಶಾಲೆ ಉಳಿಕೆ ಸೀಟು ಭರ್ತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ 6,7 ಮತ್ತು 8ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಮಾತ್ರ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿಗಳನ್ನು ನಿಗದಿತ ವೇಳೆಯೊಳಗೆ ಸಂಬಂಧಪಟ್ಟ ಶಾಲೆಗಳಿಗೆ ಸಲ್ಲಿಸುವುದು.   ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ), ದೇವನಾಯಕನಹಳ್ಳಿ,ದೂ.ಸಂ- 9632249214.ಪ್ರಾಂಶುಪಾಲರು, ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ […]

Continue Reading

ಬೆಂಗಳೂರು ಗ್ರಾಮಾಂತರ ಜಿಲ್ಲೆ *ಬೆಂಗಳೂರು ಉತ್ತರ ಜಿಲ್ಲೆಯಾಗಿ* ಮರು ನಾಮಕರಣ 14 ನೇ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡ ಸರ್ಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ ನಂತರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ ಅವರು ಎತ್ತಿನಹೊಳೆ ಯೋಜನೆಯಡಿ 24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಅಲ್ಲದೇ […]

Continue Reading

ಇಂದು ಬೆಂಗಳೂರು ಡಿವಿಷನ್ ಕ್ಯಾಬಿನೇಟ್ ಮೀಟಿಂಗ್ : ಮಾಧ್ಯಮಗಳಿಗೆ ಫಸ್ಟ್ ರಿಯಾಕ್ಷನ್.. ಏನ್ ಹೇಳಿದ್ರು ಸಿಎಂ…???

ಚಿಕ್ಕಬಳ್ಳಾಪುರ : ರಾಜ್ಯದ ಪ್ರತಿ ಡಿವಿಷನ್ಗಳಲ್ಲಿ ಸಚಿವ ಸಂಪುಟ ಸಭೆ ನೆಡೆಸುತ್ತಿದ್ದೇವೆ, ಅಂತೆಯೇ ಇಂದು ಬೆಂಗಳೂರು ವಿಭಾಗದ ಸಚಿವ ಸಂಪುಟ ಸಭೆ ನೆಡೆಸುತ್ತಿದ್ದೇವೆ, ಈ ಸಭೆ ಕೇವಲ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರಕ್ಕೆ ಸೀಮಿತವಲ್ಲ ಈ ಸಭೆಯಲ್ಲಿ ಬೆಂಗಳೂರು ವಿಭಾಗದ ಎಲ್ಲಾ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಚರ್ಚಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು   ನಂದಿಗಿರಿಧಾಮದಲ್ಲಿ ಹಮ್ಮಿಕೊಂಡಿರುವ ಸಚಿವ ಸಂಪುಟ ಸಭೆಗೂ ಮೊದಲು ಭೋಗ ನಂದೀಶ್ವರ ದೇವಾಲಯಕ್ಕೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.   […]

Continue Reading

ರಾಜ್ಯ ವಿ-ಕರವೇ ವತಿಯಿಂದ ತಾಲ್ಲೂಕಿನ ವೈದ್ಯರಿಗೆ ಸನ್ಮಾನ

ದೊಡ್ಡಬಳ್ಳಾಪುರ: ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ( ರಿ ) ವತಿಯಿಂದ ಸನ್ಮಾನಿಸಲಾಯಿತು.   ತಾಲ್ಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಗಿರೀಶ್ ಮತ್ತು ಮಹಿಳಾ ವೈದ್ಯೆ ಡಾ. ಅರ್ಚನಾ ರವರನ್ನು ವೈದ್ಯರ ದಿನಾಚರಣೆ ಅಂಗವಾಗಿ ಸನ್ಮಾನಿಸಿ ಗೌರವಿಸಲಾಯಿತು.   ಈ ಸಮಯದಲ್ಲಿ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ್, ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷ […]

Continue Reading