ಅಂಗನವಾಡಿ ಕೇಂದ್ರದಲ್ಲಿ ಸಂಕ್ರಾಂತಿ ಸಂಭ್ರಮ.

ದೊಡ್ಡಬಳ್ಳಾಪುರ :ನಗರದ ರಾಜೀವ್ ಗಾಂಧಿ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಆಹಾರ ಹಾಗೂ ವಿವಿಧ ಬಗೆಯ ಆಹಾರ ಧಾನ್ಯ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಯಿತು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಭಾಗ್ಯಮ್ಮ ಮಾತನಾಡಿ ಮಕ್ಕಳಿಗೆ ಸಂಕ್ರಾಂತಿ ಹಬ್ಬದ ಹಳ್ಳಿ ಸಂಸ್ಕೃತಿ, ಸಂಭ್ರಮಾಚರಣೆ, ವಿವಿಧ ಸಾಂಪ್ರದಾಯಿಕ ಸಾಂಸ್ಕೃತಿಕ ಆಚರಣೆಗಳನ್ನ ಮಕ್ಕಳಿಗೆ ತಿಳಿಸುವ ಸಲುವಾಗಿ ಸಂಕ್ರಾಂತಿ ಹಬ್ಬ ಆಚರಿಸಲಾಯಿತು. ಸಂಕ್ರಾಂತಿಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ ಎಂದು ತಿಳಿಸಲು ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದರು. ಮಕ್ಕಳು ಪರಸ್ಪರ ಎಳ್ಳು–ಬೆಲ್ಲ ವಿನಿಮಯ […]

Continue Reading

“ಲಾವಣ್ಯ ವಿದ್ಯಾಸಂಸ್ಥೆಯಲ್ಲಿ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬದ ಆಚರಣೆ”

ದೊಡ್ಡಬಳ್ಳಾಪುರ : ಲಾವಣ್ಯ ವಿದ್ಯಾಸಂಸ್ಥೆಯಲ್ಲಿ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪುಟಾಣಿ ಮಕ್ಕಳು ವಿವಿಧ ವೇಷಭೂಷಣ ತೊಟ್ಟು ನೃತ್ಯ ಪ್ರದರ್ಶನ ಮಾಡಿದರು. ಸಂಸ್ಥೆಯ ಗೌರವ ಕಾರ್ಯದರ್ಶಿಗಳು ಹಾಗೂ ಟಿಎಪಿಸಿಎಂಎಸ್ ನಿರ್ದೇಶಕರಾದ ವಿಶ್ವಾಸ್ ಹನುಮಂತೇಗೌಡ ರವರು ಮಾತನಾಡಿ ದೇಶದ ಮೂಲೆ ಮೂಲೆಯಲ್ಲೂ ಸಂಕ್ರಾಂತಿ ಹಬ್ಬವನ್ನು ವಿವಿಧ ಹೆಸರುಗಳಿಂದ ಆಚರಣೆ ಮಾಡಲಾಗುತ್ತದೆ. ನಮ್ಮ ರಾಜ್ಯದ ರೈತರು ಈ ಹಬ್ಬವನ್ನು ಸುಗ್ಗಿ ಹಬ್ಬವೆಂದು ಸಂತೋಷ ಸಡಗರದಿಂದ ಆಚರಣೆ ಮಾಡುತ್ತಾರೆ. Ad ಸಂಕ್ರಾಂತಿ ಹಬ್ಬವು ವರ್ಷದ ಮೊದಲನೆ […]

Continue Reading

ಹಣಬೆ ಕೆರೆಗೆ ನೀರು ತುಂಬಿಸಿ ಇಲ್ಲಿಂದ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ಪೂರೈಸಲು ಈ ಯೋಜನೆ ಸಹಕಾರಿಯಾಗಲಿದೆ – ಕೆ ಎಸ್ ರವಿ

ದೊಡ್ಡಬಳ್ಳಾಪುರ : ತಾಲ್ಲೂಕಿನ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ಹಣಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಬೆ ಕೆರೆಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದ್ದು ಇಂದು(ಜ. 13) ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು, ಹಣಬೆ VSSN ಅಧ್ಯಕ್ಷರಾದ ಕೆ ಎಸ್ ರವಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಬಿ ಮುನಿರಾಜು, ಹೆಚ್ ಸಿ ಹರೀಶ್, ಹಣಬೆ ವಿ ಎಸ್ ಎಸ್ ಎನ್ ಕಾರ್ಯದರ್ಶಿ ರಾಜಣ್ಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಈ […]

Continue Reading

ಪಿ ಎಸ್ ಎನ್ (PSN ) ವತಿಯಿಂದ ಚಾಲಕರಿಗೆ ಸುರಕ್ಷತಾ ತರಬೇತಿ ಹಾಗೂ ವಾಹನ ತಾಂತ್ರಿಕ ವಿಷಯಗಳ ಬಗ್ಗೆ ಅರಿವು ಕಾರ್ಯಾಗಾರ 

ದೊಡ್ಡಬಳ್ಳಾಪುರ : ತಾಲ್ಲೂಕಿನ ಹೆಸರಾಂತ ಇಚರ್(EICHER) ಟ್ರಕ್ ಮಾರಾಟ ಸಂಸ್ಥೆಯಾದ ಪಿ ಎಸ್ ಎನ್ (PSN ) ವತಿಯಿಂದ ಚಾಲಕರಿಗೆ ಸುರಕ್ಷತಾ ತರಬೇತಿ ಹಾಗೂ ಇಚರ್ 6048 ಎಕ್ಸ್ ಪಿ 16 ಚಕ್ರದ ವಾಹನ ಹಾಗೂ ಇತರೆ ವಾಹನಗಳ ತಾಂತ್ರಿಕ ವಿಷಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಇಲ್ಲಿನ ಬಿರ್ಲಾ ಸೂಪರ್ ಮತ್ತು ಅಲ್ಟ್ರಾಟೆಕ್ ಲಿಮಿಟೆಡ್ ನಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಪಿ ಎಸ್ ಎನ್ (PSN) ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕರಾದ ಯುವರಾಜ್ ಭಾಗವಹಿಸಿ ಮಾತನಾಡಿದರು ಚಾಲಕರಿಗೆ […]

Continue Reading

ಜ. 09 ರಿಂದ ಕರಾಮುವಿ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ ಪ್ರವೇಶಾತಿ ಪ್ರಾರಂಭ

  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದೆ.   ಸ್ನಾತಕ ಕೋರ್ಸುಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಎಸ್ಸಿ, ಬಿ.ಲಿಬ್.ಐ.ಎಸ್ಪಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಎಂ.ಎಸ್ಸಿ, ಎಂ.ಲಿಬ್.ಐ.ಎಸ್ಸಿ ಹಾಗೂ ಯುಜಿ/ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗಾಗಿ ಜ. 09 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದ್ದು, […]

Continue Reading

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ) ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು ಇಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.   ಅರ್ಜಿಗಳನ್ನು https://sevasindhuservices.karnataka.gov.in ಲಿಂಕ್ ಮೂಲಕ 10-02-2026 ರೊಳಗಾಗಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. Ad ಈ […]

Continue Reading

ಯುವ ಶಕ್ತಿ ದೇಶದ ಪ್ರಗತಿಗೆ ಪೂರಕವಾಗಿರಬೇಕು – ವಿಶ್ವಾಸ್ ಹನುಮಂತೇಗೌಡ

ದೊಡ್ಡಬಳ್ಳಾಪುರ : ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜು ಪದವಿ ಕಾಲೇಜು ಬಿಎಡ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು   ಕಾರ್ಯಕ್ರಮದಲ್ಲಿ  ಲಾವಣ್ಯ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳು ಹಾಗೂ ಟಿಎಪಿಸಿಎಂಎಸ್ ನಿರ್ದೇಶಕರಾದ ವಿಶ್ವಾಸ್ ಹನುಮಂತೇಗೌಡ ಭಾಗವಹಿಸಿ ಮಾತನಾಡಿದರು ಯುವ ಶಕ್ತಿ ದೇಶದ ಪ್ರಗತಿಗೆ ಪೂರಕವಾಗಿರಬೇಕು ಇಂದಿನ ಯುವ ಜನ ಸ್ವಾಮಿ ವಿವೇಕಾನಂದರ ಆಶಯಗಳನ್ನು ಅನುಷ್ಟಾನಕ್ಕೆ ತರುವ ಜವಾಬ್ದಾರಿ ಹೊರಬೇಕು ಎಂದು ಹೇಳಿದರು.   ಪ್ರಾಂಶುಪಾಲ […]

Continue Reading

ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಲಯನ್ಸ್‌ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನಾಚರಣೆ

ದೊಡ್ಡಬಳ್ಳಾಪುರ:ದೇಶದ ಭವಿಷ್ಯವನ್ನು ಸದೃಢವಾಗಿಸುವ ಹೊಣೆಗಾರಿಕೆ ಹೊತ್ತ ಯುವಜನರು ಮಾದಕ ವ್ಯಸನದ ದಾಸ್ಯಕ್ಕೆ ಒಳಗಾಗಿ ತಮ್ಮ ಬದುಕನ್ನು ದುಸ್ತರವಾಗಿಸಿಕೊಳ್ಳುತ್ತಿರುವುದು ಅಪಾಯಕಾರಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್‌ ನ್ಯಾಯಾಧೀಶ ಶ್ರೀಶೈಲ್‌ ಭೀಮಸೇನ್‌ ಬಾಗಡಿ ಹೇಳಿದರು. ಇಲ್ಲಿನ ಲಯನ್ಸ್‌ ಕ್ಲಬ್‌ ಆಫ್‌ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ನೇತೃತ್ವದಲ್ಲಿ ಬೆಂ.ಗ್ರಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಆರ್.ಎಲ್.ಜಾಲಪ್ಪ ಪಾಲಿಟೆಕ್ನಿಕ್‌ ಸಹಯೋಗದಲ್ಲಿ ಸೋಮವಾರ ನಡೆದ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ರಾಷ್ಟ್ರೀಯ ಯುವ […]

Continue Reading

ಸ್ವಾಮಿ ವಿವೇಕಾನಂದರ ಆಶಯಗಳನ್ನು ಸಮಾಜಕ್ಕೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶ – ನರಸಿಂಹಮೂರ್ತಿ

ದೊಡ್ಡಬಳ್ಳಾಪುರ : ಮಹಾನ್ ಸನ್ಯಾಸಿ ವಿಶ್ವಗುರು ಸ್ವಾಮಿ ವಿವೇಕಾನಂದರ 164 ನೇ ಜಯಂತೋತ್ಸವದ ಅಂಗವಾಗಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಮತ್ತು ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ವತಿಯಿಂದ ವಿಶೇಷವಾಗಿ ಪೂಜೆ ಸಲ್ಲಿಸಿ, ಅನ್ನದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಚಿಕ್ಕಪೇಟೆಯಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಲಾಯಿತು. ಈ ವೇಳೆ ನೆರೆದಿದ್ದ ಸಾರ್ವಜನಿಕರಿಗೆ ಅನ್ನದಾಸೋಹ ನಡೆಸಲಾಯಿತು. ಭಾರತ ರತ್ನ […]

Continue Reading

5ಲಕ್ಷದ ಒಣ ಗಾಂಜಾ ಜಪ್ತಿ :ದೇವನಹಳ್ಳಿಯಲ್ಲಿ ಅಬಕಾರಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ  

  ದೇವನಹಳ್ಳಿ : ದೇವನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಅಂದಾಜು 5ಲಕ್ಷದ ಮೌಲ್ಯದ ಒಟ್ಟು 6.288 ಕಿ.ಗ್ರಾಂ ಒಣ ಗಾಂಜಾ ಜಪ್ತುಪಡಿಸಿ ದೇವನಹಳ್ಳಿ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.     ತಾಲ್ಲೂಕಿನ ಟಿಪ್ಪು ಸರ್ಕಲ್ ಬಳಿ ಗಸ್ತು ನಡೆಸುತ್ತಿದ್ದಾಗ ಬಂದ ಮಾಹಿತಿ ಮೇರೆಗೆ ಹೊಸಕೋಟೆ ಉಪ ವಿಭಾಗ ಅಬಕಾರಿ ಉಪ ಅಧೀಕ್ಷಕರಾದ ಕೆ ಎನ್ ಚಂದ್ರ ಮೋಹನ್ ರವರ ಮಾರ್ಗ ದರ್ಶನದಲ್ಲಿ ಅಬಕಾರಿ ಸಬ್ ಇನ್ಸ್ಪೆಕ್ಟರ್ ಎನ್ ಎಂ ಹನುಮಂತರಾಜು ದೇವನಹಳ್ಳಿ ರೈಲ್ವೆ ನಿಲ್ದಾಣದಲ್ಲಿ […]

Continue Reading