ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ಆಹಾರ ಸಚಿವ ಕೆ ಎಚ್ ಮುನಿಯಪ್ಪ ಭೇಟಿ : ಬೆಂಬಲ ಬೆಲೆ ಯೋಜನೆಯ 1446 ಕೋಟಿ ರೂ ಗಳ ಬಾಕಿ ಮೊತ್ತ ಬಿಡುಗಡೆಗೆ ಮನವಿ

ನವ ದೆಹಲಿ :  ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ನವದೆಹಲಿಯ ಕೃಷಿ ಭವನದಲ್ಲಿ ನಡೆದ ಆಹಾರ ಇಲಾಖೆಯ ಸಭೆಯಲ್ಲಿ ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಕರ್ನಾಟಕ ಸರ್ಕಾರವು ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ಧಾನ್ಯಗಳು ಹಾಗೂ ಭತ್ತ/ಕಸ್ಟಮ್ ಮಿಲ್ಡ್ ರೈಸ್ (CMR) ಖರೀದಿ ಕಾರ್ಯವನ್ನು ನಿಯಮಾನುಸಾರವಾಗಿ ನಡೆಸುತ್ತಿದೆ. ಖರೀದಿಸಲಾದ ಆಹಾರ ಧಾನ್ಯಗಳನ್ನು ಕೇಂದ್ರ ಪೂಲ್‌ಗೆ ಸೇರಿಸಿ, ಭಾರತ ಸರ್ಕಾರದ ಅನುಮೋದನೆಯೊಂದಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆ […]

Continue Reading

ಸುರಕ್ಷಿತ ಅಂತರ್ಜಾಲ ದಿನ : ಆನ್ಲೈನ್ ಆಸೆ ಆಮಿಷಗಳಿಗೆ ಬಲಿಯಾಗದಿರಿ: ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್

ಬೆಂಗಳೂರು ಗ್ರಾಮಾಂತರ : ಪ್ರತಿ ದಿನ ನಾವು ಒಂದಲ್ಲ ಒಂದು ರೀತಿಯಲ್ಲಿ ಇಂಟರ್ನೆಟ್ ಅನ್ನು ಬಳಸುತ್ತೇವೆ ಅದರಿಂದ ಎಷ್ಟು ಉಪಯೋಗ ಇದೆಯೇ ಅಷ್ಟೇ ಅಪಾಯ ಇದ್ದು ಆನ್ಲೈನ್ ನಲ್ಲಿ ತೋರುವ ಆಸೆ ಆಮಿಷಗಳಿಗೆ ಬಲಿಯಾಗದಿರಿ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಅವರು ತಿಳಿಸಿದರು. ಇಂದು ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ವತಿಯಿಂದ ಆಯೋಜಿಸಿದ್ದ ಸುರಕ್ಷಿತ ಅಂತರ್ಜಾಲ ದಿನದ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು,ಇಂಟರ್ನೆಟ್ ಬಳಕೆಯಲ್ಲಿ […]

Continue Reading

ದೊಡ್ಡಬಳ್ಳಾಪುರ ನಗರದಲ್ಲಿ ರಾಜ್ಯದ ಮೊದಲ ಮಕ್ಕಳ ವಿಶೇಷ ನಗರ ಸಭೆ ಆಯೋಜನೆ

ದೊಡ್ಡಬಳ್ಳಾಪುರ : ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡಲು ಪೂರಕ ವಾತಾವರಣ ಸೃಷ್ಠಿಯಾಗಬೇಕು. ಮಕ್ಕಳ ಹಕ್ಕುಗಳಿಗೆ ಚ್ಯುತಿಯಾದಾಗ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಸಮಸ್ಯೆ ಇತ್ಯರ್ಥ್ಯಗೊಳಿಸಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್‌ ಕೋಸಂಬೆ ಅವರು ಹೇಳಿದರು.  ನಗರಸಭೆ ದೊಡ್ಡಬಳ್ಳಾಪುರ, ಯುವ ಸಂಚಲನ ಚಾರಿಟೇಬಲ್‌ ಟ್ರಸ್ಟ್‌ ಸಹಯೋಗದಡಿ ಪಟ್ಟಣದ ನಗರಸಭೆ ಆವರಣದಲ್ಲಿ ಏರ್ಪಡಿಸಿದ್ದ ಮಕ್ಕಳ ವಿಶೇಷ ನಗರಸಭೆ ಕಾರ್ಯಕ್ರಮವನ್ನು ಉದ್ಘಾಡಟಿಸಿ ಮಾತನಾಡಿದ ಅವರು ಮಕ್ಕಳ ಹಕ್ಕುಗಳ ಸಮಸ್ಯೆ ಆಲಿಸಲು ಈ ಮೊದಲು ಗ್ರಾಮ […]

Continue Reading

ಅನಧಿಕೃತ ಮೀಟರ್ ಅಳವಡಿಸಿ ವಿದ್ಯುತ್ ವಂಚನೆ ಆರೋಪ : ನೌಕರರ ವಿರುದ್ಧ ಬೆಸ್ಕಾಂ ದೂರು

ದೊಡ್ಡಬಳ್ಳಾಪುರ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ದೊಡ್ಡಬಳ್ಳಾಪುರ ನಗರ ಉಪವಿಭಾಗ )ಯನ್ನು ವಂಚಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿರುವವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಕಳೆದ ಜನವರಿ 30ರಂದು ಬೆಸ್ಕಾಂ(ದೊಡ್ಡಬಳ್ಳಾಪುರ ನಗರ ವಿಭಾಗ) ನೌಕರ ಮನು ಎಂಬುವರ ಮೇಲೆ ಮೋಸ ಹಾಗೂ ವಂಚನೆ ಆರೋಪದ ಹಿನ್ನಲೆ ದೂರು ದಾಖಲಾಗಿದ್ದು, ಪ್ರಕರಣವು ಸದ್ಯ ತನಿಖೆ ಹಂತದಲ್ಲಿದೆ. ದೊಡ್ಡಬಳ್ಳಾಪುರ ಬೆಸ್ಕಾಂ ಸಂಸ್ಥೆಯಲ್ಲಿ ಕೇವಲ ಮನು ಅಷ್ಟೇ ಅಲ್ಲ ಕೆಲ ನೌಕರರು, ಗುತ್ತಿಗೆದಾರರು ಇಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ ಅಲ್ಲದೇ […]

Continue Reading

ಟಿ ಎ ನಾರಾಯಣ ಗೌಡರ ಆದೇಶದಂತೆ ಕಾವೇರಿ ನದಿ ಉಳಿವಿಗಾಗಿ ಹೋರಾಟಕ್ಕೆ ನಾವು ಸಿದ್ದ – ಪುರುಷೋತ್ತಮ್ ಗೌಡ

ಬೆಂಗಳೂರು ಗ್ರಾಮಾಂತರ: ರಾಜ್ಯದ ಜೀವನಾಡಿಯಾಗಿರುವ ಕಾವೇರಿ ನದಿಯ ಗುಣಮಟ್ಟ ಕಾಪಾಡಲು, ನದಿಗೆ ಸೇರುತ್ತಿರುವ ಕಲುಷಿತ ನೀರಿನ ಹರಿವನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಟಿ ಎ ನಾರಾಯಣಗೌಡರ ವೇದಿಕೆ )ಹೋರಾಟಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಈಗಾಗಲೇ ಹಲವಾರು ನದಿ ನೀರು ಕೊಳಚೆ ಮತ್ತು ತಾಜ್ಯವಸ್ತುಗಳಿಂದ ಸಂಪೂರ್ಣ ಹಾಳಾಗಿದ್ದು ಕುಡಿಯಲು ಯೋಗ್ಯವಲ್ಲದ ಸ್ಥಿತಿ ತಲುಪಿದೆ. ಪ್ರಸ್ತುತ ಕಾವೇರಿ ನದಿಮೂಲಕ್ಕೂ ಕಲುಷಿತ ವಸ್ತುಗಳು,ನೀರು ಸೇರುತ್ತಿದ್ದು ನಮ್ಮ ನಾಡಿನ ಜಲಮೂಲ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದ್ದು ಹೋರಾಟದ ಮೂಲಕ ನಮ್ಮ ಕರವೇ ರಾಜ್ಯದ್ಯಂತ […]

Continue Reading

ನಗರದ ಸಮಗ್ರ ಅಭಿವೃದ್ಧಿಗೆ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಅವರ ಕೊಡುಗೆ ಅಪಾರವಾಗಿದೆ – ಎಸ್.ಮಹಾಬಲೇಶ್ವರ್ 

ದೊಡ್ಡಬಳ್ಳಾಪುರ : ನಗರದ ಸಮಗ್ರ ಅಭಿವೃದ್ಧಿಗೆ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಅವರ ಕೊಡುಗೆ ಅಪಾರವಾಗಿದೆ. ಅವರು ದೊಡ್ಡಬಳ್ಳಾಪುರದ ಶೈಕ್ಷಣಿಕ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರು ಆಗಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ಎಸ್.ಮಹಾಬಲೇಶ್ವರ್ ತಿಳಿಸಿದರು. ಅವರು ದೊಡ್ಡಬಳ್ಳಾಪುರ ನಗರದ ಶ್ರೀ ಕೊಂಗಾಡಿಯಪ್ಪ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು ಮತ್ತು ವಿಕಾಸ ಸಂಸ್ಥೆ ಸಹಯೋಗದಲ್ಲಿ ಲೋಕಸೇವಾನಿರತ ಡಿ ಕೊಂಗಾಡಿಯಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ವಿವಿಧ ಶಾಲೆಗಳಲ್ಲಿ ನಡೆಯುವ ಉಪನ್ಯಾಸ ಮಾಲಿಕೆಯ […]

Continue Reading

ದೇವಾಲಯಗಳ ಸ್ವಚ್ಛತಾ ಸಮಿತಿ ವತಿಯಿಂದ ಸ್ವಯಂ ಸೇವಕರಿಗೆ ಗೌರವ ಸಮರ್ಪಣೆ

ದೊಡ್ಡಬಳ್ಳಾಪುರ : ದೇವಾಲಗಳ ಸ್ವಚ್ಛತಾ ಸಮಿತಿ ವತಿಯಿಂದ ಸುಮಾರು 75ಕ್ಕೂ ಅಧಿಕ ಸ್ವಯಂ ಸೇವಕರಿಗೆ ಗೌರವ ಸಮರ್ಪಣೆ ಮಾಡಲಾಯಿತು. ನಗರದ ಕನ್ನಡ ಜಾಗೃತ ಪರಿಷತ್ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಹಲವು ದೇವಾಲಯಗಳ ಸ್ವಚ್ಛತಾ ಕಾರ್ಯಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿರುವ ಸುಮಾರು 30ಕ್ಕೂ ಹೆಚ್ಚು ಸ್ವಯಂ ಸೇವಕರಿಗೆ “ಸೇವಾ ರತ್ನ ಪ್ರಶಸ್ತಿ ” ಹಾಗೂ ಸೇವಾ ಮನೋಭಾವವನ್ನು ಉತ್ತೇಜಸಿದ 45ಕ್ಕೂ ಅಧಿಕ ಪ್ರೋತ್ಸಹಕರಿಗೆ “ಪೋಷಕ ಪ್ರಶಸ್ತಿ ” ನೀಡಿ ಗೌರವಿಸಲಾಯಿತು. ನಿರಂತರ ನಿಸ್ವಾರ್ಥ ಸೇವೆ ಮಾಡುತ್ತಿರುವ […]

Continue Reading

ಬೆಂಗಳೂರು ಗ್ರಾಮಾಂತರ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ ವಿ ಮಂಜುನಾಥ್ ರವರು ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಲಿ – ಹಳ್ಳಿ ರೈತ ಅಂಬರೀಷ್ 

ಬೆಂಗಳೂರು ಗ್ರಾಮಾಂತರ :  ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಕೆ ವಿ ಮಂಜುನಾಥ್ ರವರಿಗೆ ಹಳ್ಳಿ ರೈತ ಅಂಬರೀಷ್ ಶುಭ ಹಾರೈಸಿದ್ದಾರೆ.   ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಮಂಜುನಾಥ್ ಕೆ.ವಿ. ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಗಿ ಆಯ್ಕೆಯಾಗಿದ್ದು. ರಾಜ್ಯ ಜೆಡಿಎಸ್ ಪ್ರಮುಖರ ಈ ನಿರ್ಣಯವನ್ನು ಸ್ವಾಗತಿಸುತ್ತೇನೆ ಪಕ್ಷದ ತತ್ವ–ಸಿದ್ಧಾಂತಗಳಿಗೆ ನಿಷ್ಠರಾಗಿರುವ, ಸಹಕಾರಿ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ಮಂಜುನಾಥ್ ರವರು ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷವನ್ನುಇನ್ನಷ್ಟು ಬಲಿಷ್ಠಗೊಳಿಸುವ ಕಾರ್ಯ ಮಾಡಲಿದ್ದಾರೆ ಎಂಬ ಭರವಸೆ ಇದೆ […]

Continue Reading

ಗ್ರಾಮಾಂತರ ಜೆಡಿಎಸ್‌ಗೆ ಅನುಭವಿ ನಾಯಕತ್ವ

ಬೆಂಗಳೂರು ಗ್ರಾಮಾಂತರ: ಪಕ್ಷದ ತತ್ವ–ಸಿದ್ಧಾಂತಗಳಿಗೆ ನಿಷ್ಠರಾಗಿರುವ, ಸಹಕಾರಿ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಶ್ರೀ ಮಂಜುನಾಥ್ ಕೆ.ವಿ., ಮುಂದಿನ ದಿನಗಳಲ್ಲಿ ಗ್ರಾಮಾಂತರ ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸುವ ವಿಶ್ವಾಸವನ್ನು ಪಕ್ಷದ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ. ರೈತ ಕುಟುಂಬದ ಹಿನ್ನೆಲೆಯಿರುವ ಶ್ರೀ ಮಂಜುನಾಥ್ ಕೆ.ವಿ. ಅವರು ದೇವನಹಳ್ಳಿ ಎಪಿಎಂಸಿ ಅಧ್ಯಕ್ಷರಾಗಿ ಹಾಗೂ ಬಿದಲೂರು ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ, ರೈತರು, ಗ್ರಾಮಾಂತರ ಜನತೆ ಮತ್ತು ಸಹಕಾರಿ ವಲಯದಲ್ಲಿ ಜನಪರ […]

Continue Reading

ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾಗಿ ಶ್ರೀ ಮಂಜುನಾಥ್ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ.   ಈ ಕುರಿತು ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ನೇಮಕಾತಿ ಆದೇಶ ಹೊರಡಿಸಿದ್ದು, ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬಂದಿದೆ.   ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಸಂಘಟಿಸಿ ಬಲಿಷ್ಠಗೊಳಿಸುವ ಜವಾಬ್ದಾರಿಯನ್ನು ಮಂಜುನಾಥ್ […]

Continue Reading